ಕಾವೇರಿ ವಿವಾದ : ವಾದ ಮುಕ್ತಾಯ, ಕಾಯ್ದಿರಿಸಿದ ತೀರ್ಪು

ನವದೆಹಲಿ, ಸೆಪ್ಟೆಂಬರ್ 20 : ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಮುಗಿದಿದ್ದು, ಸರ್ವೋಚ್ಚ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.

ತೀರ್ಪು ಕರ್ನಾಟಕದ ಪರವಾಗಿ ಬರುತ್ತಾ ಅಥವಾ ತಮಿಳುನಾಡು ಪರವಾಗಿ ಆಗುತ್ತಾ ಎಂಬುದು ತೀರ್ಪು ಪ್ರಕಟವಾದ ನಂತರವಷ್ಟೇ ಗೊತ್ತಾಗಲಿದೆ. 2007ರಲ್ಲಿ ಕಾವೇರಿ ನೀರು ಪ್ರಾಧಿಕಾರ ನೀಡಿದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ಜಂಟಿಯಾಗಿ ಅರ್ಜಿಯನ್ನು ಸಲ್ಲಿಸಿದ್ದವು.

Cauvery water dispute: Final hearing over, SC reserves verdict

ಮುಂದಿನ ತೀರ್ಪು ಪ್ರಕಟವಾಗುವವರೆಗೆ ತಮಿಳುನಾಡಿಗೆ ಕರ್ನಾಟಕ ಪ್ರತಿದಿನ 2000 ಕ್ಯೂಸೆಕ್ಸ್ ನೀರನ್ನು ಹರಿಸಬೇಕೆಂದು, ಇದೀಗ ಮುಖ್ಯ ನ್ಯಾಯಮೂರ್ತಿಯಾಗಿರುವ ದೀಪಕ್ ಮಿಶ್ರಾ ಅವರ ನೇತೃತ್ವದ ನ್ಯಾಯಪೀಠ ಆದೇಶ ನೀಡಿತ್ತು.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಪ್ರತಿದಿನ 2000 ಕ್ಯೂಸೆಕ್ಸ್ ಕಾವೇರಿ ನೀರನ್ನು ಬಿಡಲು ವಿಫಲವಾಗಿರುವುದರಿಂದ ತಮಿಳುನಾಡಿಗೆ ಭಾರೀ ನಷ್ಟವಾಗಿದ್ದು, 2,480 ಕೋಟಿ ರು. ಪರಿಹಾರ ದೊರಕಿಸಿಕೊಡಬೇಕೆಂದು ತಮಿಳುನಾಡು ಜನವರಿಯಲ್ಲಿ ಅರ್ಜಿ ಸಲ್ಲಿಸಿತ್ತು.

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಸಂಭವಿಸಿದ ಗಲಭೆಯಲ್ಲಿ ತಮಿಳುನಾಡಿನ ನಾಗರಿಕರಿಗೆ ಆದ ನಷ್ಟವನ್ನು ಪರಿಹಾರ ರೂಪದಲ್ಲಿ ಕರ್ನಾಟಕದಿಂದ ಕೊಡಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಕೂಡ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ತಮಿಳುನಾಡಿನದ ಶಿವ ಕುಮಾರ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು.

ಅದೂ ಅಲ್ಲದೆ, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಪ್ರತಿದಿನ 2000 ಕ್ಯೂಸೆಕ್ಸ್ ಕಾವೇರಿ ನೀರನ್ನು ಬಿಡಲು ವಿಫಲವಾಗಿರುವುದರಿಂದ ತಮಿಳುನಾಡಿಗೆ ಭಾರೀ ನಷ್ಟವಾಗಿದ್ದು, 2,480 ಕೋಟಿ ರು. ಪರಿಹಾರ ದೊರಕಿಸಿಕೊಡಬೇಕೆಂದು ತಮಿಳುನಾಡು ಅರ್ಜಿ ಸಲ್ಲಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+