Breaking: ಕಾವೇರಿ ನೀರು ಹಂಚಿಕೆ ವಿವಾದ: ಅರ್ಜಿ ವಿಚಾರಣೆ ಸೆ.21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
ಬೆಂಗಳೂರು, ಸೆಪ್ಟಂಬರ್ 06: ಕಾವೇರಿ ನದಿ ನೀರು ಹಂಚಿಕೆ ವಿವಾದ ವಿಚಾರ ಕುರಿತು ನೆರೆ ರಾಜ್ಯ ತುಮಿಳುನಾಡು ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿತ್ತು. ಇಂದು ಬುಧವಾರ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಕೋರ್ಟ್ ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 21ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ. ಅಲ್ಲದೇ ಹೆಚ್ಚು ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶಿಸಬೇಕು ಎಂದು ಕೋರಿ ತಮಿಳುನಾಡು ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಬಿ.ಆರ್. ಗವಾಯಿಯವರು ತಮಿಳುನಾಡು ಪರ ವಕೀಲ ಮಾತು ಆಲಿಸಿದರು.
ವಿಚಾರಣೆ ವೇಳೆ, ಇಂದು ಒಬ್ಬರು ನ್ಯಾಯಾಧೀಶರು ರಜೆಯಲ್ಲಿದ್ದಾರೆ. ಮುಂದಿನ ವಾರ ತಾವು (ಬಿ.ಆರ್. ಗವಾಯಿ) ಲಭ್ಯವಿರುವುದಿಲ್ಲ ಎಂದು ತಿಳಿಸಿದ ನ್ಯಾಯಮೂರ್ತಿಗಳು, ಹೊಸ ಪೀಠದಲ್ಲಿ ವಿಚಾರಣೆ ಮುಂದುವರಿಸಲು ಮುಖ್ಯ ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಲು ವಕೀಲರಿಗೆ ಅವರು ತಿಳಿಸಿದೆ.
ಇದಕ್ಕೆ ತಮಿಳುನಾಡು ಪರ ವಕೀಲರು, ದಯಮಾಡಿ ನಿಮ್ಮದೇ ನ್ಯಾಯಪೀಠದಲ್ಲಿ ವಿಚಾರಣೆ ಮುಂದುವರಿಸುವಂತೆ ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಿದರು. ಇದಕ್ಕೆ ಒಪ್ಪಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸೆಪ್ಟಂಬರ್ 21ಕ್ಕೂ ವಿಚಾರಣೆ ಮುಂದೂಡಿ ಆದೇಶಿಸಿದರು.












Click it and Unblock the Notifications