ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮನಿ ಲಾಂಡ್ರಿಂಗ್ ಕೇಸ್ : ಚಿದಂಬರಂ ವಿರುದ್ಧ ತನಿಖೆಗೆ ಮುಂದಾದ ಸಿಬಿಐ

|
Google Oneindia Kannada News

ನವದೆಹಲಿ, ಫೆಬ್ರವರಿ 22: ಐಎನ್ಎಕ್ಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿಬಿಐಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂಬ ಸುದ್ದಿ ಬಂದಿದೆ.

ಜನವರಿ 21ರಂದು ಚಿದಂಬರಂ ವಿರುದ್ಧ ಕ್ರಮ ಜರುಗಿಸಲು ಅನುಮತಿ ಕೋರಿದ್ದ ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಸದ್ಯದಲ್ಲೇ ದೋಷಾರೋಪಣ ಪಟ್ಟಿ ಸಲ್ಲಿಸಲಿದೆ ಎಂಬ ಮಾಹಿತಿಯಿದೆ. ಜಾರಿ ನಿರ್ದೇಶನಾಲಯ ತಂಡವು ಈಗಾಗಲೇ ಪಿ ಚಿದಂಬರಂ ಹಾಗೂ ಕುಟುಂಬದ ವಿರುದ್ಧ ತನಿಖೆ ನಡೆಸಿದೆ.

ಚಿದಂಬರಂ ಜೈಲಿಗೆ ಕಳುಹಿಸುವುದೇ 'ಇಡಿ' ನಿರ್ದೇಶಕರ ಗುರಿ! ಚಿದಂಬರಂ ಜೈಲಿಗೆ ಕಳುಹಿಸುವುದೇ 'ಇಡಿ' ನಿರ್ದೇಶಕರ ಗುರಿ!

ಸಿಬಿಐ ಪ್ರಕಾರ, ಮಾರಿಷಿಯಸ್ ಮೂಲದ- ಮ್ಯಾಕ್ಸಿಸ್ ನ ಸಹವರ್ತಿ ಗ್ಲೋಬಲ್ ಕಮ್ಯೂನಿಕೇಷನ್ ಸರ್ವೀಸಸ್ ಹೋಲ್ಡಿಂಗ್ಸ್ ನಿಂದ ಏರ್ ಸೆಲ್ ಟೆಲಿಕಾಂನಲ್ಲಿ ಎಂಟುನೂರು ಮಿಲಿಯನ್ ಅಮೆರಿಕನ್ ಡಾಲರ್ ನಷ್ಟು ಹೂಡಿಕೆ ಮಾಡಲು ಅನುಮತಿ ಕೇಳಲಾಗಿತ್ತು. ಅದಕ್ಕೆ ಅನುಮತಿ ಪ್ರಧಾನಿ ಅಧ್ಯಕ್ಷರಾಗಿರುವ ಆರ್ಥಿಕ ವ್ಯವಹಾರಗಳ ಸದನ ಸಮಿತಿಯಿಂದ ಬರಬೇಕಿತ್ತು. ಆದರೆ ಹಣಕಾಸು ಸಚಿವಾಲಯವು ಅನುಮತಿ ಕೊಟ್ಟಿತ್ತು. ಆಗ ಅದರ ನೇತೃತ್ವ ವಹಿಸಿದ್ದವರು ಚಿದಂಬರಂ. ಹಣಕಾಸು ಸಚಿವಾಲಯಕ್ಕೆ ಆರು ನೂರು ಕೋಟಿವರೆಗಿನ ಹೂಡಿಕೆಗೆ ಅನುಮತಿ ನೀಡುವ ಅಧಿಕಾರ ಮಾತ್ರ ಇರುತ್ತದೆ. ಸಿಬಿಐ ಆರೋಪಿಸುವಂತೆ, ಅನುಮತಿ ಸಿಕ್ಕ ನಂತರ ಏರ್ ಸೆಲ್ ಟೆಲಿವೆಂಚರ್ಸ್ ನಿಂದ ಕಾರ್ತಿ ಚಿದಂಬರಂಗೆ ನಂಟಿರುವ ಕಂಪೆನಿಗೆ ಇಪ್ಪತ್ತಾರು ಲಕ್ಷ ಪಾವತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಕಾರ್ತಿ ಹಾಗೂ ಅವರ ಸಂಸ್ಥೆಗೆ ಸಂಬಂಧಿಸಿದ 1.16 ಕೋಟಿ ರುಪಾಯಿಯನ್ನು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿತ್ತು.

CBI Allowed By Centre To Prosecute P Chidambaram In INX Media Case: Sources

ಐಎನ್ಎಕ್ಸ್ ಮೀಡಿಯಾ ಮಾಲಿಕರಾದ, ಈಗ ಜೈಲಿನಲ್ಲಿರುವ ಪೀಟರ್ ಮತ್ತು ಇಂದ್ರಾಣಿಯವರಿಂದ 10 ಲಕ್ಷ ರುಪಾಯಿ ಲಂಚ ಪಡೆದ ಆರೋಪ ಕಾರ್ತಿ ಮೇಲಿದೆ. ಕೋಟ್ಯಂತರ ರುಪಾಯಿ ತೆರಿಗೆ ವಂಚನೆ ಮಾಡಿದ ಪ್ರಕರಣದಿಂದ ತಮ್ಮ ಪ್ರಭಾವ ಬಳಸಿ ಪಾರು ಮಾಡಲು ಪೀಟರ್ ಮತ್ತು ಇಂದ್ರಾಣಿ ಅವರು ಕಾರ್ತಿ ಚಿದಂಬರಂ ಅವರನ್ನು ಬಳಸಿಕೊಂಡಿದ್ದರು ಎಂಬ ಆರೋಪವೂ ಇದೆ.

2007ರಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (Foreign Investment Promotion Board)ಯಿಂದ 4.62 ಕೋಟಿ ರುಪಾಯಿ ಹೂಡಿಕೆ ಮಾಡಲು ಅನುಮೋದನೆ ಸಿಕ್ಕಿತ್ತು. ಆದರೆ ಮಾರಿಷಸ್ ನ ಎರಡು ಕಂಪನಿಗಳಿಂದ ಪೀಟರ್ ಮತ್ತು ಇಂದ್ರಾಣಿ ಒಡೆತನದ ಕಂಪನಿ ಐಎನ್ಎಕ್ಸ್ ಮೀಡಿಯಾ ಪಡೆದದ್ದು 305 ಕೋಟಿ ರುಪಾಯಿಗಳು.

ಇದರ ವಿರುದ್ಧ ಕಂದಾಯ ಇಲಾಖೆ ವಿಚಾರಣೆಗೆ ಆದೇಶಿಸಿತ್ತು. ಈ ವಿಚಾರಣೆಯನ್ನು ತಪ್ಪಿಸಲು ಕಾರ್ತಿ ಅವರು ತಮ್ಮ ಕಂಪನಿಯ ಮೂಲಕ ಐಎನ್ಎಕ್ಸ್ ಮೀಡಿಯಾ ಕಂಪನಿಯಿಂದ 10 ಲಕ್ಷ ರುಪಾಯಿ ಕಮಿಷನ್ ಪಡೆದಿದ್ದರು.

English summary
The central government today gave the CBI permission to prosecute former Union Finance Minister P Chidambaram in a money laundering case related to INX Media, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X