ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನುರಾಗ್ ತಿವಾರಿ ಕೇಸ್ : ತನಿಖೆ ಆರಂಭಿಸಿದ ಸಿಬಿಐ

By Mahesh
|
Google Oneindia Kannada News

ನವದೆಹಲಿ, ಜೂನ್ 19: ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣವನ್ನು ಸಿಬಿಐ ಕೊನೆಗೂ ಕೈಗೆತ್ತಿಕೊಂಡಿದ್ದು, ತನಿಖೆ ಆರಂಭಿಸಿದೆ.

ತಿವಾರಿ ಅವರ ಸಾವು ಆಕಸ್ಮಿಕವಾಗಿ ಸಂಭವಿಸಿಲ್ಲ, ಸಾಯುವುದಕ್ಕೂ ಮುನ್ನ ಹಲ್ಲೆಗೊಳಗಾಗಿದ್ರು ಎಂದು ವಿಧಿವಿಜ್ಞಾನ ಸಂಸ್ಥೆ ನೀಡಿರುವ ವರದಿಯಲ್ಲಿ ಹೇಳಲಾಗಿದೆ.

CBI takes over probe in IAS officer Anurag Tewari death case

ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ನಡೆಸಿ, ಕೊಲೆ ಸಂಚು ನಡೆದಿಲ್ಲ ಎಂದು ವರದಿ ನೀಡಿದೆ. ಯೋಗಿ ಆದಿತ್ಯನಾಥ್ ಸರ್ಕಾರದ ಮೇಲೆ ನಂಬಿಕೆ ಇಲ್ಲ, ನಮಗೆ ನ್ಯಾಯ ಒದಗಿಸಿಕೊಡಿ ಎಂದ್ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಅನುರಾಗ್ ತಿವಾರಿ ಅವರ ಸೋದರ ಮನೋಜ್ ಅವರು ಮನವಿ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದರ ಜತೆಗೆ ಸಿಬಿಐ ತನಿಖೆಗೆ ಉತ್ತರಪ್ರದೇಶ ಸರ್ಕಾರ ಶಿಫಾರಸು ಮಾಡಿತ್ತು. ಆದರೆ, ಒಂದು ತಿಂಗಳು ಕಳೆದರೂ ತನಿಖೆ ಇನ್ನೂ ಆರಂಭವಾಗಿರಲಿಲ್ಲ. ಕಳೆದ ಎರಡು ದಿನಗಳ ಹಿಂದೆ ಕೇಸ್ ಫೈಲ್ ಗಳನ್ನು ಎಸ್ ಐಟಿ ಅಧಿಕಾರಿಗಳಿಂದ ಪಡೆದುಕೊಂಡಿದ್ದ ಸಿಬಿಐ, ತನಿಖೆ ಆರಂಭಿಸಿದೆ.

ಉತ್ತರಪ್ರದೇಶದ ಪೊಲೀಸರಿಂದ ಎಫ್‌ಐಆರ್, ಸಿಸಿಟಿವಿ ದೃಶ್ಯಾವಳಿ ಮತ್ತಿತರ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡರು. ತಿವಾರಿ ಅವರು ಸತ್ತು ಬಿದ್ದಿದ್ದ ಸ್ಥಳ ಮತ್ತು ಉಳಿದುಕೊಂಡಿದ್ದ ಅತಿಥಿ ಗೃಹಕ್ಕೆ ಅಧಿಕಾರಿಗಳು ಸೋಮವಾರ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಜತೆಗೆ ಮರಣೋತ್ತರ ಪರೀಕ್ಷೆ ವರದಿಯನ್ನು ಮತ್ತೊಮ್ಮೆ ಪರಿಶೀಲಿಸಲಿದ್ದಾರೆ.

English summary
Nearly a month after Karnataka cadre IAS officer Anurag Tewari was found dead in Lucknow, the CBI has taken over the investigations in the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X