Sushant Singh: ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ಅಂತಿಮ ವರದಿ ಸಲ್ಲಿಸಿದ ಸಿಬಿಐ
ಬಾಲಿವುಡ್ ಉದಯೋನ್ಮುಖ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಕೇಂದ್ರ ತನಿಖಾ ದಳ (ಸಿಬಿಐ) ಅಂತಿಮ ವರದಿ ಸಲ್ಲಿಸಿದೆ. ನಾಲ್ಕು ವರ್ಷಗಳ ಹಿಂದೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಸಿಬಿಐ ಅಧಿಕಾರಿಗಳು
34 ವರ್ಷದ ಸುಶಾಂತ್ ಸಿಂಗ್ ರಜಪೂತ್ ಜೂನ್ 14, 2020ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಾಲಿವುಡ್‌ನಲ್ಲಿ ಆಗ ತಾನೆ ಜನಪ್ರಿಯತೆ ಗಳಿಸುತ್ತಿದ್ದ ನಟನ ದಿಢೀರ್ ಸಾವು ಅಭಿಮಾನಿಗಳಿಗೆ ಆಘಾತ ಮೂಡಿಸಿತ್ತು. ಹಲವು ಮಂದಿ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ವಾದಿಸಿದರು.

ಸುಶಾಂತ್ ರಜಪೂತ್ ಅವರ ತಂದೆ ಅವರ ಸುಶಾಂತ್‌ರ ಗೆಳತಿ ಮತ್ತು ನಟಿ ರಿಯಾ ಚಕ್ರವರ್ತಿ ವಿರುದ್ಧ ಮಾಡಿದ್ದ ಆರೋಪಗಳು ಮತ್ತು ಸುಶಾಂತ್ ಅವರ ಕುಟುಂಬದ ವಿರುದ್ಧ ರಿಯಾ ಚಕ್ರವರ್ತಿ ಮಾಡಿರುವ ಆರೋಪಗಳ ಮೇಲೆ ಎರಡು ಪ್ರಕರಣಗಳಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಾಗಿದೆ.
ಇದು ಆತ್ಮಹತ್ಯೆ ಎಂದ ಸಿಬಿಐ
ಆಗಸ್ಟ್ 2020ರಲ್ಲಿ ಪೊಲೀಸರಿಂದ ಸಿಬಿಐ ಪ್ರಕರಣವನ್ನು ವಹಿಸಿಕೊಂಡಿತ್ತು, ನಾಲ್ಕು ವರ್ಷಗಳ ಸುದೀರ್ಘ ತನಿಖೆ ಬಳಿಕ, ಸುಶಾಂತ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆತ್ಮಹತ್ಯೆಗೆ ಅವರಿಗೆ ಪ್ರಚೋದನೆ ನೀಡಿರುವುದಕ್ಕೆ ಯಾವುದೇ ಸಾಕ್ಷಿಗಳು ಕಂಡುಬಂದಿಲ್ಲ ಎಂದು ಹೇಳಿದೆ. ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.
ಪ್ರಕರಣದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳಲ್ಲಿ ಹೆಸರಿಸಲಾದ ಎಲ್ಲರನ್ನೂ ಸಿಬಿಐ ಸಿಬಿಐ ಖುಲಾಸೆಗೊಳಿಸಿದೆ. ನಟಿ ರಿಯಾ ಚಕ್ರವರ್ತಿ, ಅವರ ತಂದೆ-ತಾಯಿ ಮತ್ತು ಸಹೋದರನಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ವಿಧಿವಿಜ್ಞಾನ ತಂಡವು ಸುಶಾಂತ್ ರಜಪೂತ್ ಅವರನ್ನು ಯಾರೂ ಕೊಲೆ ಮಾಡಿಲ್ಲ ಇದು ಆತ್ಮಹತ್ಯೆಯಿಂದ ಸಂಭವಿಸಿದ ಸಾವು ಎಂದು ಹೇಳಿದೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಅವರ ತಂದೆ ಕೆ.ಕೆ ಸಿಂಗ್ ಪಾಟ್ನಾದಲ್ಲಿ ದೂರು ಸಲ್ಲಿಸಿದ್ದರು. ಬಳಿಕ ಬಿಹಾರ ಪೊಲೀಸರು ಆತ್ಮಹತ್ಯಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದರು. ರಿಯಾ ಚಕ್ರವರ್ತಿ ಸುಶಾಂತ್‌ಗೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ, ಅವರಿಗೆ ಡ್ರಗ್ಸ್ ನೀಡುತ್ತಿದ್ದಾರೆ, ಹಣಕ್ಕಾಗಿ ಪೀಡಿಸಿದ್ದು ಸುಶಾಂತ್ ಸಾವಿನಲ್ಲಿ ಅವರ ಕೈವಾಡ ಇದೆ ಎಂದು ಆರೋಪಿಸಲಾಗಿತ್ತು.
ಸಿಬಿಐ ತನಿಖೆ ಕೈಗೆತ್ತಿಕೊಂಡಾಗ ಅಪರಾಧದ ಸ್ಥಳವನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲು ಕೇಂದ್ರ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ (CFSL) ಸೂಚನೆ ಕೊಟ್ಟಿತು. ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್‌ಗಳು, ಕ್ಯಾನನ್ ಕ್ಯಾಮೆರಾ ಮತ್ತು ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಂಡು ಎಲ್ಲವನ್ನೂ ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಯಿತು. ತನಿಖೆಯ ಭಾಗವಾಗಿ ಸುಮಾರು 20ಕ್ಕೂ ಜನರನ್ನು ಪ್ರಶ್ನೆ ಮಾಡಿದ್ದು ಇದರಲ್ಲಿ ರಿಯಾ ಚಕ್ರವರ್ತಿ ಕೂಡ ಇದ್ದರು.
ಸಿಇಬಿಐ ಅಂತಿಮ ವರದಿಯನ್ನು ಸಲ್ಲಿಸಿದ ಬಳಿಕ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಏಪ್ರಿಲ್ 8ರಂದು ಪ್ರಕರಣದ ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ.












Click it and Unblock the Notifications