ಲಾಲೂ ಪ್ರಸಾದ್ ಮೇವು ಹಗರಣ: ಮಾ.19 ಕ್ಕೆ ತೀರ್ಪು ಮುಂದೂಡಿಕೆ
ರಾಂಚಿ, ಮಾರ್ಚ್ 17: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ದುಮ್ಕಾ ಟ್ರೆಶರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ.17 ಕ್ಕೆ ಹೊರಬೀಳಬೇಕಿದ್ದ ತೀರ್ಪನ್ನು ಮಾ.19 ಕ್ಕೆ ಸಿಬಿಐ ವಿಶೇಷ ನ್ಯಾಯಾಲಯ ಮುಂದೂಡಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕನೇ ಪ್ರಕರಣ ಇದಾಗಿದ್ದು, ಮೂರು ಪ್ರಕರಣಗಳಲ್ಲಿ ದೋಷಿಯಾಗಿರುವ ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಅವರಿಗೆ ಈಗಾಗಲೇ 13.5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದುಮ್ಕಾ ಖಜಾನೆಯಲ್ಲಿ ನಡೆದ 3.13 ಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈಗ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಲಿದ್ದು, ನಾಲ್ಕನೇ ಪ್ರಕರಣದಲ್ಲಿ ಲಾಲೂ ಭವಿಷ್ಯ ಏನಾಗಲಿದೆ ಎಂಬುದು ಸೋಮವಾರ(ಮಾ.19) ನಿರ್ಧಾರವಾಗಲಿದೆ.












Click it and Unblock the Notifications