Janardhana Reddy: 'ಜನಾರ್ದನ ರೆಡ್ಡಿ ಜೀವಾವಧಿ ಶಿಕ್ಷೆಗೂ ಅರ್ಹರು'

ನವದೆಹಲಿ, ಮೇ 06: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವರಾದ ಜನಾರ್ದನ್‌ ರೆಡ್ಡಿ ಅವರು ಈ ಹಿಂದೆ ಜೈಲು ಶಿಕ್ಷೆಯನ್ನ ಅನುಭವಿಸಿದ್ದು, ಇದೀಗ ಮತ್ತೆ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ.

ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ ಮತ್ತು ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥನಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಮತ್ತೆ ಗಾಲಿ ಜನಾರ್ದನ್‌ ರೆಡ್ಡಿ ಅವರಿಗೆ ಬರೋಬ್ಬರಿ ಏಳು ವರ್ಷಗಳ ಕಾಲ ಜೈಲು ಶಿಕ್ಷೆಯನ್ನ ನ್ಯಾಯಾಲಯ ವಿಧಿಸಿದೆ. ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಶಿಕ್ಷೆಯನ್ನ ಕಡಿಮೆ ಮಾಡಿ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮನವಿ ಮಾಡಿದ್ದಾರೆ.

CBI Court Judge says Janardhana Reddy deserves life imprisonment

ದಯವಿಟ್ಟು ಶಿಕ್ಷೆಯ ಪ್ರಮಾಣವನ್ನ ಕಡಿಮೆ ಮಾಡಿ. ಬಳ್ಳಾರಿ ಹಾಗೂ ಗಂಗಾವತಿ ಜನ ನನ್ನ ಆಯ್ಕೆ ಮಾಡಿದ್ದಾರೆ. ಸಾರ್ವಜನಿಕರಿಂದ ನನಗೆ ಸಿಗುವ ಬೆಂಬಲವು ಆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಸಾರ್ವಜನಿಕ ಸೇವೆಗೆ ಸಮರ್ಪಿತನಾಗಿದ್ದೇನೆ. ನಾನು ನಾಲ್ಕು ವರ್ಷ ಜೈಲಿನಲ್ಲಿ ಕಳೆದಿದ್ದೇನೆ, ದಯವಿಟ್ಟು ಶಿಕ್ಷೆಯ ಪ್ರಮಾಣವನ್ನ ಕಡಿಮೆ ಮಾಡಿ ಎಂದು ಜಡ್ಜ್‌ ಎದುರು ಮಾಜಿ ಸಚಿವ ಜನಾರ್ದನ್‌ ರೆಡ್ಡಿ ಅವರು ಅಂಗಲಾಚಿದ್ದಾರೆ. ಇನ್ನೂ ಜನಾರ್ದನ್‌ ರೆಡ್ಡಿ ಅವರ ಮನವಿಯನ್ನ ತಿರಸ್ಕರಿಸಿದ ನ್ಯಾಯಾಲಯ, ಜನಾರ್ದನ ರೆಡ್ಡಿ ಜೀವಾವಧಿ ಶಿಕ್ಷೆಗೂ ಅರ್ಹರು, ನಿಮಗೆ 10 ವರ್ಷ ಜೈಲು ಶಿಕ್ಷೆ ಯಾಕೆ ಕೊಡಬಾರ್ದು ಎಂದು ರೆಡ್ಡಿ ಅವರನ್ನ ತರಾಟೆಗೆ ತೆಗೆದುಕೊಂಡಿದೆ.

ಹಿನ್ನೆಲೆ ಏನು?

ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದ ತೀರ್ಪನ್ನು ಹೈದರಾಬಾದ್ ನ ಸಿಬಿಐ ನ್ಯಾಯಾಲಯ ಮಂಗಳವಾರ ಪ್ರಕಟಿಸಿದ್ದು, 2009ರಲ್ಲಿ ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸಿಬಿಐ ತನಿಖೆಯನ್ನು ಪ್ರಾರಂಭಿಸಿತು. ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ, ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ ಸಹಾಯಕ ಮೆಫಾಜ್ ಅಲಿ ಖಾನ್ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರ ರೆಡ್ಡಿ ಸೇರಿದಂತೆ ಒಂಬತ್ತು ಆರೋಪಿಗಳ ವಿರುದ್ಧ ಪೂರಕ ಆರೋಪಪಟ್ಟಿ ಸಲ್ಲಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+