ಲಾಲೂ ಮೇವು ಹಗರಣದ ನಾಲ್ಕನೇ ಪ್ರಕರಣದ ತೀರ್ಪು ಇಂದು
ರಾಂಚಿ, ಮಾರ್ಚ್ 19: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ (ಮಾ.19)ಯಾದವ್ ಅವರ ದುಮ್ಕಾ ಟ್ರೆಶರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಹೊರಬೀಳಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಸಿಬಿಐ ವಿಶೇಷ ನ್ಯಾಯಾಲಯ ಮಾ. ಮಾ.17 ರಂದೇ ನೀಡಬೇಕಿದ್ದ ತೀರ್ಪನ್ನು ಮಾ.19 ಕ್ಕೆ ಮುಂದೂಡಿತ್ತು.
ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕನೇ ಪ್ರಕರಣ ಇದಾಗಿದೆ. ಈಗಾಗಲೇ ಆರ್ ಜೆಡಿ ಮುಖಂಡ ಲಾಲೂ ಅವರನ್ನು ಮೇವು ಹಗರಣದ ಮೂರು ಆರೋಪಗಳಲ್ಲಿ ದೋಷಿ ಎಂದು ಪರಿಗಣಿಸಿರುವ ಸಿಬಿಐ ವಿಶೇಷ ನ್ಯಾಯಾಲಯ, ಮೂರು ಪ್ರಕರಣಗಳಿಂದ ಒಟ್ಟು 13.5 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇದೀಗ ನಾಲ್ಕನೇ ಪ್ರಕರಣದಲ್ಲಿ ಲಾಲೂ ಭವಿಷ್ಯ ಏನಾಗಲಿದೆ ಎಂಬುದು ಇಂದು ತಿಳಿಯಲಿದೆ.
ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದುಮ್ಕಾ ಖಜಾನೆಯಲ್ಲಿ ನಡೆದ 3.13 ಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದ ಹಗರಣ ಇದಾಗಿದೆ.












Click it and Unblock the Notifications