ನೀರವ್ ಪ್ರಕರಣ ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿ ಮರಳಿ ಮಾತೃ ಕೇಡರ್‌ಗೆ
ಬೆಂಗಳೂರು, ಮೇ 25: ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರಂತಹ ಪ್ರಭಾವಿಗಳು ಭಾಗಿಯಾಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಜಂಟಿ ನಿರ್ದೇಶಕ ರಾಜೀವ್ ಸಿಂಗ್ ಅವರನ್ನು ಅವಧಿಗೂ ಮುನ್ನವೇ ಮಾತೃ ಕೇಂದ್ರಕ್ಕೆ ಮರಳಿಸಲಾಗಿದೆ.
ಮೋದಿ ಮತ್ತು ಅವರ ಸಂಬಂಧಿ ಚೋಕ್ಸಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಸಿಬಿಐ ಸಿದ್ಧತೆ ನಡೆಸಿರುವಾಗಲೇ ಈ ಕ್ರಮ ಕೈಗೊಳ್ಳಲಾಗಿದೆ.
ರಾಜೀವ್ ಸಿಂಗ್ ಅವರನ್ನು ಅವರ ಮಾತೃ ಕೇಂದ್ರ ತ್ರಿಪುರಾಕ್ಕೆ ವರ್ಗಾಯಿಸಲಾಗಿದೆ. ಅಲ್ಲದೆ, ಸಿಬಿಐನ ಇನ್ನೂ ಮೂವರನ್ನು ಅವರ ಮಾತೃ ಕೇಂದ್ರಗಳಿಗೆ ಮರಳಿಸಲಾಗಿದೆ.

ಸಿಬಿಐ ಜಂಟಿ ನಿರ್ದೇಶಕ (ಎಸ್‌ಟಿಎಫ್) ಮತ್ತು ವಿಶೇಷ ಅಪರಾಧ ವಿಭಾಗದ ನೀನಾ ಸಿಂಗ್, ಡಿಐಜಿ ಅನೀಶ್ ಪ್ರಸಾದ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಆರ್. ಗೋಪಾಲಕೃಷ್ಣ ರಾವ್ ಅವರನ್ನು ಮಾತೃಕೇಂದ್ರಕ್ಕೆ ವಾಪಸಾಗಲಿದ್ದಾರೆ.
ರಾಜಸ್ಥಾನ ಕೇಡರ್‌ನ 1989ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರೆ, ಉಳಿದ ಎಲ್ಲ ಐಪಿಎಸ್ ಅಧಿಕಾರಿಗಳು ತ್ರಿಪುರಾ ಕೇಡರ್‌ನವರು.
ರಾಜೀವ್ ಸಿಂಗ್ ಅವರು 1993ನೇ ಬ್ಯಾಚ್‌ನವರಾಗಿದ್ದರೆ, ಅನೀಶ್ ಪ್ರಸಾದ್ 2003 ಮತ್ತು ಗೋಪಾಲಕೃಷ್ಣ ರಾವ್ ಅವರು 2005ನೇ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.
ಆದೇಶದ ಪ್ರಕಾರ ನೀನಾ ಸಿಂಗ್, ರಾಜೀವ್ ಸಿಂಗ್ ಮತ್ತು ಗೋಪಾಲಕೃಷ್ಣ ರಾವ್ ಅವರು ತಮ್ಮ ಮಾತೃ ಕೇಡರ್‌ಗೆ ತಕ್ಷಣದಿಂದ ಮರಳುವಂತೆ ಹಾಗೂ ಪ್ರಸಾದ್ ಅವರು ಜೂನ್ 2ರಂದು ಮರಳುವಂತೆ ಆದೇಶಿಸಲಾಗಿದೆ.
ಈ ಅಧಿಕಾರಿಗಳನ್ನು ಅವಧಿಗೆ ಮುನ್ನವೇ ಮಾತೃ ಕೇಡರ್‌ಗೆ ಕಳುಹಿಸುವಂತೆ ಸಂಬಂಧಿತ ರಾಜ್ಯ ಸರ್ಕಾರಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಸಿಬಿಐನಲ್ಲಿ ಕೆಲಸ ಮಾಡುತ್ತಿರುವ ಈ ಅಧಿಕಾರಿಗಳನ್ನು ಆಯಾ ಮಾತೃ ಕೇಡರ್‌ಗೆ ಮರಳಿಸಲು ಅನುಮೋದನೆ ನೀಡಲಾಗಿದೆ ಎಂದು ಸಂಸ್ಥೆ ತನ್ನ ಆದೇಶದಲ್ಲಿ ತಿಳಿಸಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications