ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಸಮನ್ಸ್ ನೀಡಿದ ಸಿಬಿಐ
ನವದೆಹಲಿ, ಏಪ್ರಿಲ್. 15: ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮದ್ಯ ನೀತಿ ಪ್ರಕರಣದಲ್ಲಿನ ಭ್ರಷ್ಟಾಚಾರದ ಕುರಿತ ವಿಚಾರಣೆಗೆ ಕರೆಸಿದೆ. ಕಳೆದ ಫೆಬ್ರವರಿಯಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇದೇ ಪ್ರಕರಣದಲ್ಲಿ ಬಂಧಿಸಲಾಗಿದೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಅರವಿಂದ್ ಕೇಜ್ರಿವಾಲ್ ಅವರಿಗೆ ಭಾನುವಾರ ( ಏಪ್ರಿಲ್. 16) ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಮೂಲಗಳು ಹೇಳಿವೆ. ಇದಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದ ನಂತರ ಕೇಂದ್ರ ಸರ್ಕಾರ ತಮ್ಮ ಮೇಲೆ ಒತ್ತಡ ಹೇರುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಎಎಪಿ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಸಂಚು ರೂಪಿಸಲಾಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ಸಂಜಯ್ ಸಿಂಗ್, "ಪ್ರಧಾನಿಗಳ ಸ್ನೇಹಿತರ ಕಪ್ಪು ಹಣವೇ ಪ್ರಧಾನಿಯ ಕಪ್ಪುಹಣ ಎಂದು ಅರವಿಂದ್ ಕೇಜ್ರಿವಾಲ್ ದೆಹಲಿ ವಿಧಾನಸಭೆಯಲ್ಲಿ ಹೇಳಿದ ದಿನವೆ, ನಾನು ಅವರಿಗೆ ಮುಂದಿನ ನಂಬರ್ ನೀವೆ ಎಂದು ಹೇಳಿದ್ದೆ. ಪ್ರಧಾನಿಯವರ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಅವರು ಎಲ್ಲವನ್ನೂ ಮಾಡುತ್ತಾರೆ" ಎಂದಿದ್ದಾರೆ.
ಆದರೆ, ತನಿಖಾ ಸಂಸ್ಥೆ ಹೊಸ ಸಾಕ್ಷಿಗಳನ್ನು ಬಹಿರಂಗಪಡಿಸಿದ್ದು, ಈಗ ಮುಖ್ಯಮಂತ್ರಿಯನ್ನು ಪ್ರಶ್ನಿಸಲು ಆಧಾರಗಳಿವೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಗಳ ಕೆಲಸ ಕಾರ್ಯಕ್ಕೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಭಾನುವಾರ ದಿನಾಂಕ ನಿಗದಿಪಡಿಸಲಾಗಿದೆ ಎಂದಿದ್ದಾರೆ. ಸಿಬಿಐನ ಕ್ರಮದ ಬಗ್ಗೆ ಅರವಿಂದ್ ಕೇಜ್ರಿವಾಲ್ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.
ಎಎಪಿ ಈ ಆರೋಪಗಳನ್ನು ರಾಜಕೀಯ ಸೇಡು ಎಂದು ತಳ್ಳಿಹಾಕಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿಯವರ ತೀವ್ರ ಟೀಕಾಕಾರರಲ್ಲಿ ಒಬ್ಬರನ್ನು ಗುರಿಯಾಗಿಸಲು ಪ್ರಯತ್ನ ನಡೆಸುತ್ತಿದೆ ಎಂದಿದೆ. "ಇಂತಹ ಸಂಚಿನ ಆರೋಪಗಳಿಂದ ಎಎಪಿಯ ಒಬ್ಬನೇ ಒಬ್ಬ ನಾಯಕನೂ ಹೆದರುವುದಿಲ್ಲ. ನಮ್ಮ ಅನೇಕ ಸಚಿವರು, ನಾಯಕರು ಮತ್ತು ಸದಸ್ಯರನ್ನು ಈ ಹಿಂದೆ ಗುರಿಮಾಡಲಾಗಿದೆ. ಪ್ರಧಾನಿ ಮೋದಿಯವರ ಅತ್ಯಂತ ಭ್ರಷ್ಟ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ" ಎಂದು ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಹೇಳಿದ್ದಾರೆ.

ರಾಜಧಾನಿಯಲ್ಲಿ ಮದ್ಯ ಮಾರಾಟದ ಮೇಲಿನ ಸರ್ಕಾರದ ನಿಯಂತ್ರಣವನ್ನು ಕೊನೆಗೊಳಿಸಿದ ದೆಹಲಿ ಸರ್ಕಾರವು ಕಳೆದ ವರ್ಷ ಜಾರಿಗೆ ತಂದ ಮದ್ಯ ನೀತಿಯು ಖಾಸಗಿ ಚಿಲ್ಲರೆ ವ್ಯಾಪಾರಿಗಳಿಗೆ ಅನಗತ್ಯ ಲಾಭವನ್ನು ನೀಡಿದೆ ಎಂಬ ಆರೋಪಗಳನ್ನು ಸಿಬಿಐ ತನಿಖೆ ನಡೆಸುತ್ತಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಈ ವಂಚನೆಯಲ್ಲಿ ತೊಡಗಿದೆ ಎಂದು ಸಂಸ್ಥೆ ಆರೋಪಿಸಿದೆ. ಇದರಿಂದ ಬಂದ ಹಣವನ್ನು ಕಳೆದ ವರ್ಷ ಗೋವಾದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಬಳಸಿಕೊಳ್ಳಲಾಗಿದೆ ಎಂದು ಹೇಳಿದೆ.
ಫೆಬ್ರವರಿಯಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ ದಾಳಿ ನಡೆಸಿದ್ದ ತನಿಖಾ ಸಂಸ್ಥೆಗಳಿ ನಂತರ ಅವರನ್ನು ಬಂಧಿಸಿದ್ದವು. 2011 ರ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ರಾಜಕೀಯ ಜೀವನವು ಪ್ರಾರಂಭಿಸಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಮನ್ಸ್ ನೀಡಿರುವುದು ವಿಪರ್ಯಾಸವೆ ಸರಿ.ಕ ಳೆದ 10 ವರ್ಷದ ಪಕ್ಷವು ಇತ್ತೀಚೆಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದೆ.












Click it and Unblock the Notifications