• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಬಿಎಸ್‌ಇ 12ನೇ ತರಗತಿ ಮರು ಪರೀಕ್ಷೆ ದಿನಾಂಕ ಪ್ರಕಟ

By Manjunatha
|

ಸಿಬಿಎಸ್‌ಇ 12ನೇ ತರಗತಿಯ ಅರ್ಥಶಾಸ್ತ್ರ ವಿಷಯದ ಮರು ಪರೀಕ್ಷೆಯನ್ನು ಏಪ್ರಿಲ್ 25ಕ್ಕೆ ನಿಗದಿ ಪಡಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಅನಿಲ್ ಸ್ವರೂಪ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಸಿಬಿಎಸ್‌ಇ ಪರೀಕ್ಷೆಯ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿರುವ ಕಾರಣ ಎರಡೂ ವಿಷಯಗಳ ಕುರಿತು ಮರು ಪರೀಕ್ಷೆ ಆಯೋಜಿಸುವುದಾಗಿ ಸಿಬಿಎಸ್‌ಇ ಮಂಡಳಿ ಘೋಷಿಸಿತ್ತು. ಇದೀಗ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿದೆ.

ಸಿಬಿಎಸ್‌ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ

ಸಿಬಿಎಸ್‌ಇ 10ನೇ ತರಗತಿಯ ಗಣಿತ ಪ್ರಶ್ನೆ ಪತ್ರಿಕೆಯು ದೆಹಲಿ ಮತ್ತು ಹರಿಯಾಣದಲ್ಲಿ ಮಾತ್ರವೇ ಸೋರಿಕೆ ಆಗಿದ್ದ ಬಗ್ಗೆ ವರದಿ ಇರುವ ಕಾರಣ ಆ ಎರಡೇ ನಗರದಲ್ಲಿ ಮರು ಪರೀಕ್ಷೆಗೆ ಚಿಂತಿಸಲಾಗಿದ್ದು, ಇನ್ನು 15 ದಿನಗಳ ಒಳಗಾಗಿ ನಿರ್ಧಾರ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಅಕಸ್ಮಾತ್ ಎಲ್ಲಾ ಕಡೆಯೂ ಮರು ಪರೀಕ್ಷೆ ನಡೆದರೆ ಅದು ಜುಲೈ ನಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ಸಿಬಿಎಸ್‌ಇ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶಗೊಂಡಿದ್ದು, ಹಲವಾರು ನಗರಗಳಲ್ಲಿ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಇಬ್ಬರನ್ನು ಈಗಾಗಲೇ ಬಂಧಿಸಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
CBSE 12th economics subject re-exam will be held on April 25. Education department Secretary Anil Swarup said 10th CBSE paper leak was restricted to Delhi and Haryana so department thinking about conduct re-exam to Delhi and Haryana only. the decision will taken in 15 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more