ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶನಿವಾರ ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ

By Gururaj
|
Google Oneindia Kannada News

Recommended Video

ಸಿ ಬಿ ಎಸ್ ಸಿ 12ನೇ ತರಗತಿ ಫಲಿತಾಂಶ 2018 ಇಂದು ಮೇ 26,ಶನಿವಾರದಂದು | Oneindia Kannada

ಬೆಂಗಳೂರು, ಮೇ 25 : ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿಯ 12ನೇ ತರಗತಿ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಈ ಕುರಿತು ಅನಿಲ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.

ಶುಕ್ರವಾರ ಟ್ವೀಟ್ ಮಾಡಿರುವ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅನಿಲ್‌ ಸ್ವರೂಪ್‌ ಅವರು 2017-18ನೇ ಸಾಲಿನ ಸಿಬಿಎಸ್‌ಇ 12ನೇ ತರಗತಿ ಫಲಿತಾಂಶವನ್ನು ಶನಿವಾರ ಪ್ರಕಟಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸಿಬಿಎಸ್‌ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಸಿಬಿಎಸ್‌ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ

ಸಿಬಿಎಸ್ಇ ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಆಲ್ ದಿ ಬೆಸ್ಟ್. ಪರೀಕ್ಷಾ ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕರಿಸಿ.ಈ ಪರೀಕ್ಷೆ ಫಲಿತಾಂಶ ಜಗತ್ತಿನ ಕೊನೆಯಲ್ಲ ಎಂದು ಅನಿಲ್ ಸ್ವರೂಪ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.

CBSE ಪ್ರಶ್ನೆ ಪತ್ರಿಕೆಯಲ್ಲಿ ದೋಷ: ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್CBSE ಪ್ರಶ್ನೆ ಪತ್ರಿಕೆಯಲ್ಲಿ ದೋಷ: ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್

CBSE

ಸಿಬಿಎಸ್‌ಇ ಪರೀಕ್ಷೆಯ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿತ್ತು. ಈ ಎರಡೂ ವಿಷಯಗಳ ಮರು ಪರೀಕ್ಷೆ ನಡೆಸಲಾಗಿತ್ತು.

ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 12ನೇ ತರಗತಿ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಆದರೆ, 10ನೇ ತರಗತಿ ಫಲಿತಾಂಶದ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.

ಫಲಿತಾಂಶವನ್ನು ವೀಕ್ಷಿಸಲು ವಿಳಾಸ

cbseresults.nic.in

cbse.nic.in.

English summary
The Central Board of Secondary Education (CBSE) will announce its Class 12 results on May 26, 2018. The Class 10 results also announced soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X