ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು

|
Google Oneindia Kannada News

ನವದೆಹಲಿ, ಜೂನ್ 01; ಸಿಬಿಎಸ್ಇ 12ನೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಕುರಿತು ಕೇಂದ್ರ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ.

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

12ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತು 2 ದಿನದಲ್ಲಿ ತೀರ್ಮಾನ: ಕೇಂದ್ರ12ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತು 2 ದಿನದಲ್ಲಿ ತೀರ್ಮಾನ: ಕೇಂದ್ರ

CBSE Board Class XII Examinations Cancelled PM Modi

ಸಿಬಿಎಸ್‌ಇ ಫಲಿತಾಂಶಗಳನ್ನು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಭೆಯ ಬಳಿಕ ಸ್ಪಷ್ಟಪಡಿಸಲಾಗಿದೆ. ಕೋವಿಡ್ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವ ಕುರಿತು ವಿವರವಾದ ಚರ್ಚೆ ನಡೆಸಿದ್ದು, ಬಳಿಕ ತೀರ್ಮಾನ ಕೈಗೊಳ್ಳಲಾಗಿದೆ.

ಕಳೆದ ವರ್ಷದ ಮಾದರಿಯಲ್ಲಿ ಯಾವುದೇ ವಿದ್ಯಾರ್ಥಿ ಪರೀಕ್ಷೆ ತೆಗೆದುಕೊಳ್ಳಲು ಬಯಸಿದರೆ ಆ ಆಯ್ಕೆಯನ್ನು ಸಹ ನೀಡಲಾಗುತ್ತದೆ. ಪರೀಕ್ಷೆಯನ್ನು ಯಾವಾಗ ನಡೆಸಲಾಗುತ್ತದೆ ಎಂದು ಬಳಿಕ ಮಾಹಿತಿ ತಿಳಿಸಲಾಗುತ್ತದೆ.

CBSE, ICSE: 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆ ಮುಂದೂಡಿದ ಸುಪ್ರೀಂ CBSE, ICSE: 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆ ಮುಂದೂಡಿದ ಸುಪ್ರೀಂ

ಹಲವು ರಾಜ್ಯಗಳು ಕೋವಿಡ್ ಪರಿಸ್ಥಿತಿ ಸುಧಾರಿಸಿದ ಬಳಿಕ ಆಗಸ್ಟ್‌ನಲ್ಲಿ ಕಿರು ಪರೀಕ್ಷೆಗಳನ್ನು ನಡೆಸುವ ಕುರಿತು ಸಹ ಪ್ರಸ್ತಾವನೆ ಮುಂದಿಟ್ಟಿದ್ದವು. ವಿದ್ಯಾರ್ಥಿಗಳ ಸುರಕ್ಷತೆ ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಶಿಕ್ಷಣ ಇಲಾಖೆ ಹೇಳಿತ್ತು.

ಭಾನುವಾರ ನಡೆದ ಸಭೆಯ ವೇಳೆ ಸಿಬಿಎಸ್‌ಇ ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದೆ ಇಟ್ಟಿತ್ತು. ಆದರೆ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಲಾಗಿದೆ.

ಸಿಬಿಎಸ್‌ಇ ಮತ್ತು ಸಿಐಎಸ್‌ಸಿಯ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಜೂನ್ ತಿಂಗಳಿನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಈ ಎರಡೂ ಮಂಡಳಿಗಳು ಹಿಂದೆ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದವು.

English summary
CBSE board class XII examinations cancelled. Decision taken in the meeting chaired by PM Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X