CBSE ವಿದ್ಯಾರ್ಥಿಗಳ ಗಮನಕ್ಕೆ: ಮರು ಮೌಲ್ಯಮಾಪನ ಪೋರ್ಟಲ್ ಲೈವ್; ಅರ್ಜಿಗೆ ಆಧಾರ್ ಕಡ್ಡಾಯ

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪ್ರಮುಖ ಅಪ್‌ಡೇಟ್ ಒಂದನ್ನು ನೀಡಿದೆ. 2026ನೇ ಸಾಲಿನ ಬೋರ್ಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅಂಕಗಳ ಪರಿಶೀಲನೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಆನ್‌ಲೈನ್ ಪೋರ್ಟಲ್ ಈಗ ಅಧಿಕೃತವಾಗಿ ಲೈವ್ ಆಗಿದೆ. ತಮಗೆ ಬಂದಿರುವ ಅಂಕಗಳ ಬಗ್ಗೆ ಅಸಮಾಧಾನವಿದ್ದರೆ ಅಥವಾ ಮರು ಎಣಿಕೆ ಮಾಡಿಸಬೇಕೆಂಬ ಆಸಕ್ತಿ ಇದ್ದರೆ, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಧಾರ್ ಪರಿಶೀಲನೆ ಕಡ್ಡಾಯ

ಈ ವರ್ಷದಿಂದ ಸಿಬಿಎಸ್‌ಇ ಮಂಡಳಿಯು ಭದ್ರತಾ ಕಾರಣಗಳಿಗಾಗಿ ಒಂದು ಮಹತ್ವದ ಬದಲಾವಣೆಯನ್ನು ತಂದಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ 'ಆಧಾರ್ ಪರಿಶೀಲನೆ'ಯನ್ನು ಕಡ್ಡಾಯಗೊಳಿಸಲಾಗಿದೆ. ನಕಲಿ ಅರ್ಜಿಗಳನ್ನು ತಡೆಯಲು, ತಪ್ಪು ಮಾಹಿತಿ ನೀಡುವುದನ್ನು ತಪ್ಪಿಸಲು ಮತ್ತು ಒಟ್ಟಾರೆ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಹಾಗೂ ಸುರಕ್ಷಿತವಾಗಿಸಲು ಈ ಕಠಿಣ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ.

CBSE

ಆಧಾರ್ ಕಾರ್ಡ್ ಇಲ್ಲದಿದ್ದರೆ ಏನು ಮಾಡಬೇಕು?

ಒಂದು ವೇಳೆ ವಿದ್ಯಾರ್ಥಿಯ ಬಳಿ ಆಧಾರ್ ಕಾರ್ಡ್ ಇಲ್ಲದಿದ್ದರೆ ಅಥವಾ ಆಧಾರ್ ಅಪ್‌ಡೇಟ್ ಆಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆಯೂ ಸಿಬಿಎಸ್‌ಇ ಸ್ಪಷ್ಟನೆ ನೀಡಿದೆ. ಇಂತಹ ಸಂದರ್ಭಗಳಲ್ಲಿ ಆತಂಕಪಡುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ತಮ್ಮ ಪೋಷಕರು, ಸಂಬಂಧಿಕರು ಅಥವಾ ಅಧಿಕೃತ ಪಾಲಕರ ಆಧಾರ್ ವಿವರಗಳನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆದರೆ ಇಲ್ಲಿ ಒಂದು ಪ್ರಮುಖ ನಿಯಮವಿದೆ. ಯಾರ ಆಧಾರ್ ಸಂಖ್ಯೆಯನ್ನು ಬಳಸಲಾಗುತ್ತದೆಯೋ, ಅವರ ಆಧಾರ್ ಕಾರ್ಡ್‌ನಲ್ಲಿರುವಂತೆಯೇ ನಿಖರವಾದ ಹೆಸರು, ಜನ್ಮ ದಿನಾಂಕ ಮತ್ತು ಲಿಂಗವನ್ನು ಅರ್ಜಿಯಲ್ಲಿ ನಮೂದಿಸುವುದು ಕಡ್ಡಾಯವಾಗಿದೆ. ಈ ಮಾಹಿತಿಯಲ್ಲಿ ಯಾವುದೇ ಸಣ್ಣ ವ್ಯತ್ಯಾಸ ಕಂಡುಬಂದರೂ, ಸಿಸ್ಟಮ್ ಅರ್ಜಿಯನ್ನು ಸ್ವೀಕರಿಸುವುದಿಲ್ಲ ಅಥವಾ ಮುಂದಿನ ಹಂತದಲ್ಲಿ ಅರ್ಜಿ ತಿರಸ್ಕೃತಗೊಳ್ಳುವ ಸಾಧ್ಯತೆಯಿರುತ್ತದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಮರುಮೌಲ್ಯಮಾಪನ ಅಥವಾ ಅಂಕಗಳ ಪರಿಶೀಲನೆಗಾಗಿ ಅರ್ಜಿ ಸಲ್ಲಿಸಲು ಇಚ್ಛಿಸುವ ವಿದ್ಯಾರ್ಥಿಗಳು ಸಿಬಿಎಸ್‌ಇ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಆನ್‌ಲೈನ್ ಪೋರ್ಟಲ್ ಲಿಂಕ್ (https://www.cbse.gov.in/newsite_old/rchk.html) ಮೂಲಕ ನೇರವಾಗಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಸಾಮಾನ್ಯವಾಗಿ ಈ ಪ್ರಕ್ರಿಯೆಯು ಮೂರು ಪ್ರಮುಖ ಹಂತಗಳನ್ನು ಒಳಗೊಂಡಿರುತ್ತದೆ

1. ಮೊದಲು ಅಂಕಗಳ ಪರಿಶೀಲನೆ

2. ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಯ ಫೋಟೋಕಾಪಿ ಪಡೆಯುವುದು

3. ಕೊನೆಯದಾಗಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು.

ವಿದ್ಯಾರ್ಥಿಗಳಿಗೆ ಅಂಕಗಳ ಪರಿಶೀಲನೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಆನ್‌ಲೈನ್ ಪೋರ್ಟಲ್ ಇಂದಿನಿಂದ(ಜೂನ್‌ 02)ರಿಂದ ಶನಿವಾರ (ಜೂನ್‌ 06) ರವರೆಗೆ ತೆರೆದಿರುತ್ತದೆ.

ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ ಮತ್ತು ಆಫ್‌ಲೈನ್ ಅಥವಾ ಅಂಚೆ ಮೂಲಕ ಕಳುಹಿಸುವ ಅರ್ಜಿಗಳಿಗೆ ಯಾವುದೇ ಮಾನ್ಯತೆ ಇರುವುದಿಲ್ಲ. ವಿದ್ಯಾರ್ಥಿಗಳು ಕೊನೆಯ ಕ್ಷಣದ ಸರ್ವರ್ ಸಮಸ್ಯೆ ಮತ್ತು ಗಡಿಬಿಡಿಯನ್ನು ತಪ್ಪಿಸಲು ಆದಷ್ಟು ಬೇಗನೆ ಅರ್ಜಿ ಸಲ್ಲಿಸುವುದು ಸೂಕ್ತ. ಅಂಕಗಳ ಪರಿಶೀಲನೆಗೆ ನಿಗದಿತ ಶುಲ್ಕವನ್ನು ಆನ್‌ಲೈನ್ ಪೇಮೆಂಟ್ ಗೇಟ್‌ವೇ ಮೂಲಕವೇ ಪಾವತಿಸಬೇಕಾಗುತ್ತದೆ.

ಶುಲ್ಕದಲ್ಲಿ ಭಾರಿ ಕಡಿತ

ಈ ಬಾರಿ ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಭಾರಿ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ಪರಿಶೀಲನೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗಳ ಶುಲ್ಕವನ್ನು ಗಣನೀಯವಾಗಿ ಕಡಿಮೆ ಮಾಡಲಾಗಿದೆ. ಈ ಹಿಂದೆ 500 ರೂ. ಇದ್ದ ಪರಿಶೀಲನಾ ಶುಲ್ಕವನ್ನು ಕೇವಲ 100 ರೂ.ಗೆ ಇಳಿಸಲಾಗಿದೆ. ಅಂತೆಯೇ, ಪ್ರತಿಯೊಂದು ಪ್ರಶ್ನೆಯ ಮರುಪರಿಶೀಲನೆಗೆ ಶುಲ್ಕವನ್ನು ಕೇವಲ 25 ರೂ. ಎಂದು ನಿಗದಿಪಡಿಸಲಾಗಿದೆ. ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಅಡ್ಡಿಯಾಗುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+