ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

10ನೇ ತರಗತಿ ಸಿಬಿಎಸ್‌ಇ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

|
Google Oneindia Kannada News

ನವದೆಹಲಿ, ಏಪ್ರಿಲ್ 14: ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 4ರಿಂದ ನಡೆಯಬೇಕಿದ್ದ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. 10ನೇ ತರಗತಿಯ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಹಾಗೆಯೇ 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೇಂದ್ರ ಶಿಕ್ಷಣ ಸಚಿವಾಲಯ ಬುಧವಾರ ಹೊರಡಿಸಿರುವ ಪತ್ರಿಕಾ ಹೇಳಿಕೆ ಈ ಮಾಹಿತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಸಚಿವಾಲಯದ ಇತರೆ ಹಿರಿಯ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮೇ 4ರಿಂದ ಜೂನ್ 7ರವರೆಗೆ ನಡೆಯಬೇಕಿದ್ದ 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. 10ನೇ ತರಗತಿ ಬೋರ್ಡ್ ಫಲಿತಾಂಶಗಳನ್ನು ಮಂಡಳಿಯು ರೂಪಿಸುವ ಉದ್ದೇಶಿತ ಮಾನದಂಡಗಳಿಗೆ ಅನುಗುಣವಾಗಿ ಸಿದ್ಧಪಡಿಸಲಾಗುತ್ತದೆ. ತನಗೆ ನೀಡಲಾದ ಅಂಕಗಳ ಬಗ್ಗೆ ತೃಪ್ತಿ ಹೊಂದದ ಯಾವುದೇ ವಿದ್ಯಾರ್ಥಿ/ನಿಯು ಪರೀಕ್ಷೆಗಳನ್ನು ನಡೆಸುವ ಪರಿಸ್ಥಿತಿ ನಿರ್ಮಾಣವಾದ ಬಳಿಕ ಪರೀಕ್ಷೆಗೆ ಕುಳಿತುಕೊಳ್ಳುವ ಅವಕಾಶ ನೀಡಲಾಗುತ್ತದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

CBSE Class 10th Board Exam Cancelled, 12th Postponed

12ನೇ ತರಗತಿ ಮಂಡಳಿ ಪರೀಕ್ಷೆಗಳು ಮೇ 4ರಿಂದ ಪ್ರಾರಂಭವಾಗಬೇಕಿದ್ದು, ಅವುಗಳನ್ನು ಮುಂದೂಡಲಾಗಿದೆ. ಬೇರೊಂದು ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ಬಗ್ಗೆ ಜೂನ್ 1ರಂದು ಪರಿಸ್ಥಿತಿಯ ಪರಾಮರ್ಶೆ ನಡೆಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ವಿವರ ಹಂಚಿಕೊಳ್ಳಲಾಗುತ್ತದೆ. ಪರೀಕ್ಷೆಗಳನ್ನು ಪ್ರಾರಂಭಿಸುವ ಕನಿಷ್ಠ 15 ದಿನ ಮುಂಚಿತವಾಗಿ ಸೂಚನೆ ಹೊರಡಿಸಲಾಗುತ್ತದೆ ಎಂದು ಅದು ಹೇಳಿದೆ.

English summary
CBSE class 10th board exam cancelled and 12th board exam were postponed till May 30th amid surge in Covid cases in India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X