ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಯಾವಾಗ ಪ್ರಕಟವಾಗುತ್ತೆ?

ನವದೆಹಲಿ, ಜೂನ್ 23: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ)ಯು ಶೀಘ್ರದಲ್ಲೇ 10ನೇ ತರಗತಿ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಜೂನ್ ಅಂತ್ಯದ ವೇಳೆಗೆ ಅಥವಾ ಜುಲೈ ಮೊದಲ ವಾರದಲ್ಲಿ 10ನೇ ತರಗತಿಯ ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ದೇಶದಲ್ಲಿ ನಡೆದ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯು ಬಹುತೇಕ ಪೂರ್ಣಗೊಂಡಿದೆ. ಕೇಂದ್ರ ಮಂಡಳಿಯು ಶೀಘ್ರದಲ್ಲಿಯೇ ಅಂತಿಮ ಫಲಿತಾಂಶದ ದಿನಾಂಕವನ್ನು ಪ್ರಕಟಿಸಲಿದೆ ಎಂದು ವರದಿಯಾಗಿದೆ.

" ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು 10ನೇ ತರಗತಿ ಪರೀಕ್ಷೆ 2022ರ ಮೌಲ್ಯಮಾಪನ ಪ್ರಕ್ರಿಯೆಯು ಬಹುತೇಕ ಪೂರ್ಣಗೊಂಡಿದೆ, ಫಲಿತಾಂಶದ ದಿನಾಂಕವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು" ಎಂದು ಸಿಬಿಎಸ್ಇ ಮೂಲಗಳು ತಿಳಿಸಿವೆ.

ಯಾವ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಲಭ್ಯ?

ಯಾವ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಲಭ್ಯ?

ಸಿಬಿಎಸ್ಇಯ 10ನೇ ತರಗತಿಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದ ನಂತರದಲ್ಲಿ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಫಲಿತಾಂಶವು ಲಭ್ಯವಿರುತ್ತದೆ. ಕೇಂದ್ರ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ 10ನೇ ತರಗತಿ ಫಲಿತಾಂಶದ ಕುರಿತು ಹೆಚ್ಚಿನ ಅಪ್ ಡೇಟ್ ಗಾಗಿ cbse.gov.in ಮತ್ತು cbresults.nic.in ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ.

ಪಿಯುಸಿ ಫಲಿತಾಂಶಕ್ಕಾಗಿ ವಿಳಂಬ ಆಗುತ್ತಿದೆಯೇ?

ಪಿಯುಸಿ ಫಲಿತಾಂಶಕ್ಕಾಗಿ ವಿಳಂಬ ಆಗುತ್ತಿದೆಯೇ?

ಪದವಿ ಪೂರ್ವ(ಪಿಯುಸಿ) ಕಾಲೇಜಿನ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶಕ್ಕಾಗಿ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ತಡೆ ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ, ಸೂಕ್ತ ಸಮಯದಲ್ಲಿಯೇ ಪಿಯು ವಿದ್ಯಾರ್ಥಿಗಳ ಫಲಿತಾಂಶವು ಹೊರ ಬೀಳಲಿದೆ. ಅದೇ ರೀತಿ ಎಸ್ಎಸ್ಎಲ್ ಸಿ ಫಲಿತಾಂಶ ಕೂಡ ಪ್ರಕಟವಾಗಲಿದೆ.

ಯಾವಾಗ ಹೊರ ಬರುತ್ತೆ ಪಿಯು, ಎಸ್ಎಸ್ಎಲ್ ಸಿ ಫಲಿತಾಂಶ?

ಯಾವಾಗ ಹೊರ ಬರುತ್ತೆ ಪಿಯು, ಎಸ್ಎಸ್ಎಲ್ ಸಿ ಫಲಿತಾಂಶ?

ಸಿಬಿಎಸ್ಇಯ 12ನೇ ತರಗತಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನವು ಕೆಲಸಕ್ಕೆ ಸರಿಯಾಗಿ ಪೂರ್ಣಗೊಂಡರೆ ಅಂದುಕೊಂಡ ವೇಳೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ. ಒಂದು ವೇಳೆ ಹಾಗೆ ಆದಲ್ಲಿ ಜುಲೈ 15ರೊಳಗೆ ಪಿಯುಸಿ ಮತ್ತು ಎಸ್ಎಸ್ಎಲ್ ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ

ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ

ಕಳೆದ ಏಪ್ರಿಲ್ 26 ರಿಂದ ಜೂನ್ 15ರ ನಡುವೆ ಸಿಬಿಎಸ್ಇ ಪರೀಕ್ಷೆಗಳನ್ನು ನಡೆಸಲಾಗಿತ್ತು. 2021-2022ನೇ ಸಾಲಿನಲ್ಲಿ 10ನೇ ತರಗತಿಯ ಪರೀಕ್ಷೆಗಾಗಿ 35 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದರು. ಆದರೆ ಒಟ್ಟು 21 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+