CBSE 12ನೇ ತರಗತಿ ಮೌಲ್ಯಮಾಪನದಲ್ಲಿ ದೋಷವಿದೆಯೇ? ವದಂತಿಗಳಿಗೆ ಬ್ರೇಕ್ ಹಾಕಿದ ಬೋರ್ಡ್, ಮೇ 3ನೇ ವಾರ ರಿಸಲ್ಟ್

2026ರ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (CBSE) 12ನೇ ತರಗತಿ ಬೋರ್ಡ್ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಂಡಳಿಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಈ ವರ್ಷದ ಸಿಬಿಎಸ್‌ಇ 12ನೇ ತರಗತಿ ಫಲಿತಾಂಶವು ಮೇ ತಿಂಗಳ ಮೂರನೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮಂಡಳಿ ಖಚಿತಪಡಿಸಿದ್ದು, ಇದರೊಂದಿಗೆ ಫಲಿತಾಂಶದ ದಿನಾಂಕದ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿದೆ.

ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಸಿಬಿಎಸ್‌ಇಯ ಹೊಸ 'ಆನ್-ಸ್ಕ್ರೀನ್ ಮಾರ್ಕಿಂಗ್' (OSM) ಮೌಲ್ಯಮಾಪನ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷಗಳು ಉಂಟಾಗಿವೆ ಮತ್ತು ಇದರಿಂದಾಗಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ವಿಳಂಬವಾಗುತ್ತಿದೆ ಎಂಬ ವರದಿಗಳು ವ್ಯಾಪಕವಾಗಿ ಹರಿದಾಡುತ್ತಿದ್ದವು. ಆದರೆ, ಈ ಎಲ್ಲಾ ವದಂತಿಗಳನ್ನು ಸಿಬಿಎಸ್‌ಇ ಕಟ್ಟುನಿಟ್ಟಾಗಿ ತಳ್ಳಿಹಾಕಿದೆ. ಈ ವರದಿಗಳು ಸಂಪೂರ್ಣ ಆಧಾರರಹಿತ ಎಂದು ಮಂಡಳಿ ಸ್ಪಷ್ಟಪಡಿಸಿದೆ.

CBSE

ವದಂತಿಗಳಿಗೆ ಪ್ರತಿಕ್ರಿಯಿಸಿರುವ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಅವರು, ನೂತನ ಡಿಜಿಟಲ್ ಮೌಲ್ಯಮಾಪನ ಪ್ರಕ್ರಿಯೆಯ ಬಗ್ಗೆ ಹರಡಿರುವ ಆತಂಕವನ್ನು ದೂರ ಮಾಡಿದ್ದಾರೆ. "ಕೆಲವು ಸುದ್ದಿ ಪೋರ್ಟಲ್‌ಗಳಲ್ಲಿ ಪ್ರಕಟವಾಗಿರುವ ಪ್ರತಿಯೊಂದು ಅಂಶವನ್ನೂ ನಾನು ನಿರಾಕರಿಸುತ್ತೇನೆ. ಅವೆಲ್ಲವೂ ಸುಳ್ಳು ವದಂತಿಗಳು, ನಮ್ಮ ಮೌಲ್ಯಮಾಪನ ವ್ಯವಸ್ಥೆ ಸಂಪೂರ್ಣವಾಗಿ ಸರಿಯಾಗಿದೆ" ಎಂದು ಅವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ಬ್ರೇಕ್, ಉಲ್ಲಂಘಿಸಿದರೆ ಕ್ರಮ; ಮಾರ್ಗಸೂಚಿಗಳೇನೇನು?
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ಬ್ರೇಕ್, ಉಲ್ಲಂಘಿಸಿದರೆ ಕ್ರಮ; ಮಾರ್ಗಸೂಚಿಗಳೇನೇನು?

ಹಿಂದಿನ ವಿಧಾನಗಳಿಗಿಂತ ಈ ಬಾರಿಯ ಮೌಲ್ಯಮಾಪನ ಪ್ರಕ್ರಿಯೆಯು ಹೆಚ್ಚು ಸುಗಮವಾಗಿ ಮತ್ತು ಅತ್ಯಂತ ಪರಿಣಾಮಕಾರಿಯಾಗಿ ನಡೆಯುತ್ತಿದೆ ಎಂದು ಸಿಬಿಎಸ್‌ಇ ಅಧಿಕಾರಿಗಳು ಒತ್ತಿ ಹೇಳಿದ್ದಾರೆ. ಹೊಸ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಿದ ಭಾರದ್ವಾಜ್, "ನಮ್ಮ ಮೌಲ್ಯಮಾಪನ ಪ್ರಕ್ರಿಯೆಯು ಅತ್ಯಂತ ಕರಾರುವಕ್ಕಾಗಿ ನಡೆಯುತ್ತಿದೆ, ಹಿಂದಿನ ಮೌಲ್ಯಮಾಪನಗಳಿಗಿಂತ ಇದು ನೂರರಷ್ಟು ಉತ್ತಮವಾಗಿದೆ" ಎಂದಿದ್ದಾರೆ.

ಮೌಲ್ಯಮಾಪನದಲ್ಲಿ ಪಾರದರ್ಶಕತೆ, ವೇಗ ಮತ್ತು ನಿಖರತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಸಿಬಿಎಸ್‌ಇ ಈ ವರ್ಷ 12ನೇ ತರಗತಿ ಉತ್ತರ ಪತ್ರಿಕೆಗಳಿಗೆ ಮೊದಲ ಬಾರಿಗೆ ಆನ್-ಸ್ಕ್ರೀನ್ ಮಾರ್ಕಿಂಗ್ (OSM) ವ್ಯವಸ್ಥೆಯನ್ನು ಸಂಪೂರ್ಣವಾಗಿ ಜಾರಿಗೆ ತಂದಿದೆ. ಈ ಹೊಸ ಪ್ರಕ್ರಿಯೆಯ ಆರಂಭದ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ಅವರು ಹೇಳಿದ್ದಾರೆ.

ಶಿಕ್ಷಕರಿಂದಲೂ ನೂತನ ವ್ಯವಸ್ಥೆಗೆ ಮೆಚ್ಚುಗೆ

ವಿಶೇಷವೆಂದರೆ, ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಶಿಕ್ಷಕರಿಂದಲೂ ಸಿಬಿಎಸ್‌ಇ ಸಕಾರಾತ್ಮಕ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ. "ಶಿಕ್ಷಕರು ನನಗೆ ಸೆಲ್ಫಿಗಳು, ಫೋಟೋಗಳು ಮತ್ತು ಸಂದೇಶಗಳನ್ನು ಕಳುಹಿಸಿ ಧನ್ಯವಾದ ಹೇಳುತ್ತಿದ್ದಾರೆ. ಇಂತಹ ಅತ್ಯಾಧುನಿಕ ವ್ಯವಸ್ಥೆಯಲ್ಲಿ ಕೆಲಸ ಮಾಡಲು ತಾವು ಅದೃಷ್ಟವಂತರು ಎಂದು ಅವರು ಹೇಳುತ್ತಿದ್ದಾರೆ" ಎಂದು ಭಾರದ್ವಾಜ್ ವಿವರಿಸಿದ್ದಾರೆ. ಪ್ರಸ್ತುತ ಮೌಲ್ಯಮಾಪನ ಕರ್ತವ್ಯದಲ್ಲಿ ಇಲ್ಲದ ಶಿಕ್ಷಕರು ಕೂಡ ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ತೀವ್ರ ಆಸಕ್ತಿ ತೋರುತ್ತಿರುವುದು ಈ ವ್ಯವಸ್ಥೆಯ ಯಶಸ್ಸಿಗೆ ಸಾಕ್ಷಿಯಾಗಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನಕ್ಕೆ: ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ದಿನಾಂಕ ಫಿಕ್ಸ್, ಮೇ 29ರಿಂದ ಶುರು
ವಿದ್ಯಾರ್ಥಿಗಳಿಗೆ ಮಂಡಳಿಯು, ಮೌಲ್ಯಮಾಪನ ಪ್ರಕ್ರಿಯೆಯು ನಿಗದಿತ ವೇಳಾಪಟ್ಟಿಯಂತೆಯೇ ಪ್ರಗತಿಯಲ್ಲಿದೆ ಎಂದು ಖಚಿತಪಡಿಸಿದೆ. ಈ ಹಿಂದೆ ಸೂಚಿಸಿದಂತೆ ಮೇ ಮೂರನೇ ವಾರದಲ್ಲಿ 12ನೇ ತರಗತಿ ಫಲಿತಾಂಶ ಪ್ರಕಟವಾಗಲಿದೆ. "ಫಲಿತಾಂಶ ಸಂಪೂರ್ಣವಾಗಿ ಸಿದ್ಧವಾದಾಗ ಅದನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು. ಅಲ್ಲಿಯವರೆಗೆ ವಿದ್ಯಾರ್ಥಿಗಳು ಮತ್ತು ಪೋಷಕರು ವದಂತಿಗಳಿಗೆ ಕಿವಿಗೊಡದೆ ಕಾಯಬೇಕು" ಎಂದು ಅವರು ಸಲಹೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+