ಗಡಿಯಲ್ಲಿ ಕದನವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ
ಶ್ರೀನಗರ, ಏಪ್ರಿಲ್ 10: ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಸುಂದರಬಾನಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.
ನಿನ್ನೆ(ಏಪ್ರಿಲ್ 09) ನಡೆದ ಈ ಘಟನೆಯಲ್ಲಿ ಹುತಾತ್ಮರಾದ ಯೋಧರನ್ನು ವಿನೋದ್ ಸಿಂಗ್ ಮತ್ತು ಜಾಕಿ ಶರ್ಮಾ ಎಂದು ಗುರುತಿಸಲಾಗಿದೆ.

ಈ ವರ್ಷ ಎರಡು ತಿಂಗಳಲ್ಲಿ ಪಾಕಿಸ್ತಾನ ಇದುವರೆಗೂ 633 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಇದುವರೆಗೆ 10 ಭದ್ರತಾ ಸಿಬ್ಬಂದಿಗಳು ಮತ್ತು 12 ನಾಗರಿಕರು ಬಲಿಯಾಗಿದ್ದಾರೆ.












Click it and Unblock the Notifications