ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Budget Session : ಜ. 31ರಿಂದ ಏ.6ರವರೆಗೆ 66 ದಿನಗಳ ಕಾಲ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ : ಪ್ರಹ್ಲಾದ್ ಜೋಶಿ

|
Google Oneindia Kannada News

ಬೆಂಗಳೂರು, ಜನವರಿ 13: ಕೇಂದ್ರದ ಬಜೆಟ್ ಅಧಿವೇಶನವು ಇದೇ ತಿಂಗಳ ಜನವರಿ 31 ರಿಂದ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಮಕರ ಸಂಕ್ರಾಂತಿ ವಿಶೇಷ ಪುಟ

ನವದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಈ ಬಾರಿಯ ಬಜೆಟ್ ಅಧಿವೇಶನವು 66 ದಿನಗಳ ಕಾಲ ನಡೆಯಲಿದೆ. ಜನವರಿ 31ರಂದು ಆರಂಭಗೊಳ್ಳುವ ಲೋಕಸಭೆ ಹಾಗೂ ರಾಜ್ಯಸಭೆಯ ಕಲಾಪಗಳು ಎಪ್ರಿಲ್ 6 ರ ವರೆಗೆ ನಡೆಯಲಿದೆ ಎಂದು ಹೇಳಿದರು.

ಅಧಿವೇಶನದಲ್ಲಿ ಕೇಂದ್ರ ಹಣಕಾಸು ನಿರ್ಮಲಾ ಸೀತಾರಾಮನ್ ಅವರು 2023ರ ಬಜೆಟ್ ಮಂಡಿಸಲಿದ್ದಾರೆ. ನಂತರ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಸೇರಿದಂತೆ ಇತರ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಸಂಸತ್ತಿನ ಸ್ಥಾಯಿ ಸಮಿತಿ ಎದುರಿರುವ ಹಲವು ರಾಜ್ಯಗಳ ಅನುದಾನಗಳ ಬೇಡಿಕೆ ಕುರಿತು ನಿರ್ಣಯ ಕೈಗೊಳ್ಳಲು ಹಾಗೂ ವಿವಿಧ ಸಚಿವಾಲಯಗಳಿಗೆ ಸಂಬಂಧಪಟ್ಟ ವಿಷಯಗಳ ಕುರಿತು ವರದಿ ಸಿದ್ಧ ಪಡಿಸಲು ಫೆಬ್ರವರಿ 14 ರಿಂದ ಮಾರ್ಚ್ 12ರ ವರೆಗೆ ವಿರಾಮ ಪಡೆಯಲಾಗುವುದು ಎಂದು ಅವರು ವಿವರಿಸಿದರು.

Center Budget Session Start For Jan. 31 To Continue Till April 6, Says Pralhad Joshi

ಫೆಬ್ರವರಿ 14-ಮಾರ್ಚ್ 12ವರೆಗೆ ಬಿಡುವು

ಸಂಸತ್ತಿನ ಸ್ಥಾಯಿ ಸಮಿತಿಯ ಮುಂದೆ ವಿವಿಧ ರಾಜ್ಯಗಳ ಅನುದಾನದ ಬೇಡಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಮತ್ತು ವಿವಿಧ ಸಚಿವಾಲಯಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ವರದಿಯನ್ನು ತಯಾರಿಸಲು ಫೆಬ್ರವರಿ 14 ರಿಂದ ಮಾರ್ಚ್ 12 ರವರೆಗೆ ವಿರಾಮ ತೆಗೆದುಕೊಳ್ಳಲಾಗುವುದು ಎಂದು ಜೋಶಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತುತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮುಖದಲ್ಲಿ ಅರ್ಥಶಾಸ್ತ್ರಜ್ಞರೊಂದಿಗೆ ಸಭೆ ನಡೆಸಲಿದ್ದಾರೆ. ತಜ್ಞರು ಪ್ರಧಾನ ಮಂತ್ರಿಗಳ ಅಭಿಪ್ರಾಯಗಳು, ಸಲಹೆ ಪಡೆಯಲಿದ್ದಾರೆ. ಕೇಂದ್ರ ಬಜೆಟ್‌ಗೆ ಮುಂಚಿತವಾಗಿ ಭಾರತೀಯ ಆರ್ಥಿಕತೆಯ ಸ್ಥಿತಿ ಮತ್ತು ಅದರ ಸವಾಲುಗಳನ್ನು ಮೌಲ್ಯಮಾಪನ ಮಾಡುತ್ತಾರೆ.

ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ನಂತರ ಅಧಿವೇಶನವು ಪ್ರಾರಂಭವಾಗುತ್ತದೆ. ಇದು ರಾಷ್ಟ್ರಪತಿಗಳಾದ ಮೇಲೆ ದ್ರೌಪತಿ ಮುರ್ಮು ಅವರ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾಡುವ ಮೊದಲ ಭಾಷಣವಾಗಿದೆ.

Center Budget Session Start For Jan. 31 To Continue Till April 6, Says Pralhad Joshi

ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಆಯವ್ಯಯ 2023 ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನ ಎರಡನೇ ಭಾಗದಲ್ಲಿ ಮಾರ್ಚ್‌ ವೇಳೆಗೆ ಹೊಸ ಸಂಸತ್ತಿನ ಕಟ್ಟಡ ಉದ್ಘಾಟಯಾಗಲಿದೆ. ನಂತರ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಸಂಸತ್ ಭವನದ ಕಾಮಗಾರಿ ಭರದಿಂದ ಸಾಗುತ್ತಿದೆ. ಮುಂದಿನ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು.

English summary
Center budget session start for January 31st to continue till April 6th, says Union Parliamentary Affairs minister Pralhad Joshi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X