ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಹೊಸ ಆರೋಗ್ಯ ಎಚ್ಚರಿಕೆ
ನವದೆಹಲಿ, ಜುಲೈ 29: ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಪ್ಯಾಕೇಜಿಂಗ್ ಮತ್ತು ಲೇಬಲಿಂಗ್) 2008 ನಿಯಮಗಳಿಗೆ ತಿದ್ದುಪಡಿ ಮಾಡುವ ಮೂಲಕ ಎಲ್ಲಾ ತಂಬಾಕು ಉತ್ಪನ್ನ ಪ್ಯಾಕ್‌ಗಳ ಮೇಲಿನ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಹೊಸ ನಿಯಮಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಸೂಚಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎಲ್ಲಾ ತಂಬಾಕು ಉತ್ಪನ್ನ ಪ್ಯಾಕ್‌ಗಳಿಗೆ ಹೊಸ ನಿಯಮಗಳ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳನ್ನು ನೀಡಿದೆ. ಈ ಮೂಲಕ 2008 ರಲ್ಲಿ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಪ್ಯಾಕೇಜಿಂಗ್ ಮತ್ತು ಲೇಬಲಿಂಗ್) ನಿಯಮಗಳು ಜಿಎಸ್‌ಆರ್ 592 (ಇ) ಇದಕ್ಕೆ 21 ಜುಲೈ, 2022 ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಪ್ಯಾಕೇಜಿಂಗ್ ಮತ್ತು ಲೇಬಲಿಂಗ್) ಮೂರನೇ ತಿದ್ದುಪಡಿ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ತಿದ್ದುಪಡಿ ಮಾಡಲಾದ ನಿಯಮಗಳು ಡಿಸೆಂಬರ್ 1, 2022 ರಿಂದ ಅನ್ವಯವಾಗುತ್ತವೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಡಿಸೆಂಬರ್ 1, 2022 ರಂದು ಅಥವಾ ನಂತರ ತಯಾರಿಸಲಾದ ಅಥವಾ ಆಮದು ಮಾಡಿದ ಅಥವಾ ಪ್ಯಾಕ್ ಮಾಡಲಾದ ಎಲ್ಲಾ ತಂಬಾಕು ಉತ್ಪನ್ನಗಳ ಮೇಲೆ ತಂಬಾಕು ಸಾವಿಗೆ ಕಾರಣವಾಗುತ್ತದೆ ಎಂಬ ಆರೋಗ್ಯ ಎಚ್ಚರಿಕೆಯೊಂದಿಗೆ ಸರ್ಕಾರವು ಒದಗಿಸಿದ ಚಿತ್ರಗಳನ್ನು ನೀಡಬೇಕು ಎಂದು ತಿಳಿಸಿದೆ. ಡಿಸೆಂಬರ್ 1, 2023 ರಂದು ಅಥವಾ ನಂತರ ತಯಾರಿಸಿದ ಅಥವಾ ಆಮದು ಮಾಡಿದ ಅಥವಾ ಪ್ಯಾಕ್ ಮಾಡಲಾದ ಚಿತ್ರಗಳನ್ನು ಪ್ರದರ್ಶಿಸಬೇಕು. ಸಿಗರೇಟು ಸೇದುವವರು ಹಾಗೂ ತಂಬಾಕು ಬಳಸುವವರು ಸಣ್ಣವಯಸ್ಸಿನಲ್ಲೇ ಸಾಯುತ್ತಾರೆ ಎಂಬ ಮಾಹಿತಿಯ ಆರೋಗ್ಯ ಎಚ್ಚರಿಕೆಯೊಂದಿಗೆ 2 ಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ಅದು ಹೇಳಿದೆ.

ಸಿಗರೇಟ್ ಅಥವಾ ಯಾವುದೇ ತಂಬಾಕು ಉತ್ಪನ್ನಗಳ ತಯಾರಿಕೆ, ಉತ್ಪಾದನೆ, ಪೂರೈಕೆ, ಆಮದು ಅಥವಾ ವಿತರಣೆಯಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ತೊಡಗಿರುವ ಯಾವುದೇ ವ್ಯಕ್ತಿ ಎಲ್ಲಾ ತಂಬಾಕು ಉತ್ಪನ್ನಗಳ ಪ್ಯಾಕೇಜ್‌ಗಳ ಮೇಲೆ ಸರ್ಕಾರ ಸೂಚಿಸಿದಂತೆ ನಿರ್ದಿಷ್ಟಪಡಿಸಿದ ಆರೋಗ್ಯ ಎಚ್ಚರಿಕೆಗಳನ್ನುನೀಡಬೇಕು ಎಂದು ಸರ್ಕಾರದ ನಿಯಮಗಳು ತಿಳಿಸಿವೆ.
ಸರ್ಕಾರ ತಿಳಿಸಿದ ನಿಬಂಧನೆಯ ಉಲ್ಲಂಘನೆಯು ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯದ ನಿಯಂತ್ರಣ, ಉತ್ಪಾದನೆ, ಸರಬರಾಜು ಮತ್ತು ವಿತರಣೆ) ಕಾಯಿದೆ, 2003ರ ಸೆಕ್ಷನ್ 20 ರಲ್ಲಿ ಸೂಚಿಸಿದಂತೆ ಜೈಲು ಶಿಕ್ಷೆ ಅಥವಾ ದಂಡದೊಂದಿಗೆ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರದ ಅಂಕಿ ಅಂಶಗಳ ಪ್ರಕಾರ ಅಸ್ತಿತ್ವದಲ್ಲಿರುವ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಯನ್ನು ಜುಲೈ 21, 2020 ರಂದು ಜಿಎಸ್‌ಆರ್ 458(ಇ) ಯ ಮೂಲಕ ನೀಡಲಾಗಿತ್ತು. ಇದು ನವೆಂಬರ್ 30, 2022 ರವರೆಗೆ ಮುಂದುವರಿಯುತ್ತದೆ ಎಂದು ತಿಳಿಸಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications