ಲೋಡ್ ಶೆಡ್ಡಿಂಗ್: ವಿದ್ಯುತ್ ವಿತರಣಾ ಕಂಪನಿಗಳು ದಂಡ ತೆರಬೇಕು?
ಬೆಂಗಳೂರು, ಜೂನ್ 7: ಪ್ರತಿ ವರ್ಷ ಲೋಡ್ ಶೆಡ್ಡಿಂಗ್ ಪ್ರಾರಂಭವಾದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು, ದಿನಕ್ಕೆ ಸಾವಿರಾರು ದೂರುಗಳು ದಾಖಲಾಗುತ್ತಿದ್ದವು. ಕಳೆದ ಬಾರಿ ಸುಮಾರು ಎಲ್ಲಾ ರಾಜ್ಯಗಳಲ್ಲೂ ಉತ್ತಮ ಮಳೆಯಾಗಿದೆ. ಹಾಗಾಗಿ ಲೋಡ್ ಶೆಡ್ಡಿಂಗ್ ಮಾಡಿದರೆ ವಿದ್ಯುತ್ ವಿತರಣಾ ಸಂಸ್ಥೆಗಳು ದಂಡ ಕಟ್ಟಬೇಕೆಂಬ ಹೊಸ ನಿಯಮ ರೂಪಿಸಲಾಗುತ್ತಿದೆ.
ಕೇಂದ್ರ ಇಂಧನ ಸಚಿವ ಆರ್.ಕೆ. ಸಿಂಗ್ ಈ ಕುರಿತು ಮಾಹಿತಿ ನೀಡಿದ್ದು, ಮುಂದಿನ ಹಣಕಾಸು ವರ್ಷದಿಂದ ದೇಶಾದ್ಯಂತ ಈ ನಿಯಮ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ. ಅನಿಯಮಿತ ವಿದ್ಯುತ್ ನಿಲುಗಡೆ, ಪ್ರಸರಣದಲ್ಲಿ ವ್ಯತ್ಯಯವಾಗುವುದರಿಂದ ಶೇ.15ಕ್ಕಿಂತ ಹೆಚ್ಚಿನ ನಷ್ಟ ಉಂಟಾದಲ್ಲಿ, ಆ ಮೊತ್ತವನ್ನು ವಿದ್ಯುತ್ ವಿತರಣಾ ಸಂಸ್ಥೆಗಳೇ ಭರಿಸಬೇಕೆಂಬ ಹೊಸ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಕೇಂದ್ರ ಸಿದ್ಧಪಡಿಸಿರುವ ಕೇಂದ್ರ ಒಂಧನ ನೀತಿಯಲ್ಲಿ ಈ ವಿಚಾರಗಳನ್ನು ಸೇರ್ಪಡೆ ಮಾಡಲಾಗಿದ್ದು, ಕರಡು ನೀತಿಯ ಮೇಲೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಸಾರ್ವಜನಿಕರ ಸಲಹೆಗಳನ್ನು ಪರಿಶೀಲಿಸಿ ನೂತನ ನೀತಿ ಜಾರಿಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.












Click it and Unblock the Notifications