"ಸಾಂಕ್ರಾಮಿಕ ಪಿಡುಗಿನಿಂದ ರಕ್ಷಿಸುವ ಬಜೆಟ್ ಎಂದು ಶ್ಲಾಘನೆ"
ನವದೆಹಲಿ, ಫೆಬ್ರವರಿ.01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಸರ್ಕಾರದ 9ನೇ ಬಜೆಟ್ ನ್ನು ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಅದರ್ ಪೂನಾವಾಲಾ ಸ್ವಾಗತಿಸಿದ್ದಾರೆ.
ಕೇಂದ್ರ ಬಜೆಟ್-2021-2022ನೇ ಸಾಲಿನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಆರೋಗ್ಯ ವಲಯಕ್ಕೆ ನೀಡಿರುವ ಆದ್ಯತೆಯ ಬಗ್ಗೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೊರೊನಾವೈರಸ್ ಲಸಿಕೆಗೆ ಅತಿಹೆಚ್ಚಿನ ಅನುದಾನ ನೀಡಲಾಗಿದೆ.
ಭಾರತವು ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಪಾರಾಗುವುದಕ್ಕೆ ಕೇಂದ್ರ ಬಜೆಟ್ ಸಹಾಯಕವಾಗಿದೆ ಎಂದು ಪುಣೆಯ ಸೆರಮ್ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಅದರ್ ಪೂನಾವಾಲಾ ಹೇಳಿದ್ದಾರೆ.

ಆರೋಗ್ಯ ವಲಯಕ್ಕೆ 2.23 ಲಕ್ಷ ಕೋಟಿ ಅನುದಾನ:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಎದುರಾದ ಸವಾಲುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ 2021-22ನೇ ಸಾಲಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ. ಸಂಸತ್ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಈ ಬಗ್ಗೆ ಘೋಷಿಸಿದ್ದಾರೆ. ದೇಶದಲ್ಲಿ ಆರೋಗ್ಯ ವಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಬಂಪರ್ ಕೊಡುಗೆ ನೀಡಿದ್ದಾರೆ.
ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ:
- ವಾಯು ಶುದ್ಧೀಕರಣಕ್ಕೆ 22,000 ಕೋಟಿ ರೂಪಾಯಿ
- ಕೊರೊನಾವೈರಸ್ ಲಸಿಕೆ ಉತ್ಪಾದನೆಗೆ 35000 ಕೋಟಿ
- ಆರೋಗ್ಯ ಯೋಜನೆಗಳಿಗಾಗಿ 64,000 ಕೋಟಿ ರೂಪಾಯಿ
- ವಿಶ್ವ ಆರೋಗ್ಯ ಸಂಸ್ಥೆಯ ಒಂದು ಪ್ರಾದೇಶಿಕ ಸಂಶೋಧನಾ ಕೇಂದ್ರ
- ನಾಲ್ಕು ಸೂಕ್ಷ್ಮಾಣುಗಳ ವೈಜ್ಞಾನಿಕ ಅಧ್ಯಯನ ಘಟಕ ಸ್ಥಾಪನೆ












Click it and Unblock the Notifications