ಕೆಂದ್ರದಿಂದ ಮಹೀಂದ್ರ & ಟಾಟಾ ಮೋಟರ್ಸ್‌ಗೆ ₹246 ಕೋಟಿ ಅನುಮೋದನೆ
ನವದೆಹಲಿ, ಜನವರಿ, 03: ಮಹೀಂದ್ರ & ಟಾಟಾ ಮೋಟರ್ಸ್‌ಗೆ ಪಿಎಲ್‌ಐ ಯೋಜನೆಯಡಿ 246 ಕೋಟಿ ರೂಪಾಯಿ ಪಾವತಿಗೆ ಕೇಂದ್ರ ಭಾರೀ ಕೈಗಾರಿಕಾ ಸಚಿವಾಲಯವು ಅನುಮೋದನೆ ನೀಡಿದೆ. ಹಾಗಾದರೆ ಯಾವ ಕಾರಣಕ್ಕೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಪಿಎಲ್‌ಐ ಯೋಜನೆಯಡಿ ಕಂಪನಿಗಳು ಒರಿಜಿನಲ್ ಇಕ್ವಿಪ್‌ಮೆಂಟ್ ಮ್ಯಾನುಫ್ಯಾಕ್ಚರ್ಸ್ (ಒಇಎಂ) ಸಾಮಾಗ್ರಿಗಳನ್ನು ತಯಾರಿಸಿದ್ದು, ತೃಪ್ತಿಕರವಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಟಾಟಾ ಮೋಟರ್ಸ್‌ಗೆ ಸುಮಾರು 142 ಕೋಟಿ ರೂಪಾಯಿ ಮತ್ತು ಮಹಿಂದ್ರ & ಮಹೀಂದ್ರಗೆ 104 ಕೋಟಿ ರೂಪಾಯಿ ಪಿಎಲ್‌ಐ ಅಡಿ ಹಣ ಪಾವತಿ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ ಅಂತಾ ಪ್ರಜಾವಾಣಿ ವರದಿ ಮಾಡಿದೆ.
ಪ್ರಧಾನಿ ಮೋದಿ ಹೇಳಿದ್ದೇನು?: ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 23ರಂದು ವಿವಿಧ ಕೇಂದ್ರ 71,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಣೆ ಮಾಡಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಣೆ ಮಾಡಿದ್ದಾರೆ.
ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ನೇಮಕಗೊಂಡ 71,000ಕ್ಕೂ ಅಧಿಕ ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೇಮಕಾತಿ ಪತ್ರ ವಿತರಣೆ ಮಾಡಿದರು.
ಈ ಉಪಕ್ರಮವು ರೋಜ್‌ಗಾರ್ ಮೇಳದ ಭಾಗವಾಗಿದ್ದು, ಇದು ಯುವಕರಲ್ಲಿ ಉದ್ಯೋಗ ಅವಕಾಶಗಳನ್ನು ಮತ್ತು ಸ್ವಯಂ ಸಬಲೀಕರಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಉದ್ಯೋಗ ಮೇಳದ ಭಾಗವಾಗಿ ದೇಶದ 45 ಭಾಗಗಳಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಭಾಗಿಯಾದ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಿಸಿ ಶುಭ ಹಾರೈಸಿದರು.
ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರದ ಎಲ್ಲಾ ನೀತಿಗಳನ್ನು ರೂಪಿಸುವಾಗ ಯುವಕರಿಗೆ ವಿಶೇಷ ಗಮನ ನೀಡಲಾಗುತ್ತದೆ. ಸರ್ಕಾರವು ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನ ನೀತಿಗಳನ್ನು ಬದಲಿಸಿದೆ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಉತ್ತೇಜಿಸಿದೆ. ಇಂದು ನಾವು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಮಾರ್ಪಟ್ಟಿದ್ದೇವೆ ಎಂದು ಹೇಳಿದರು.
ದೇಶದಾದ್ಯಂತದ ಹೊಸ ನೇಮಕಾತಿಗಳು ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೇರಿಕೊಳ್ಳುತ್ತವೆ. ಇವುಗಳಲ್ಲಿ ಗೃಹ ವ್ಯವಹಾರಗಳ ಸಚಿವಾಲಯ, ಅಂಚೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಮತ್ತು ಹೆಚ್ಚಿನವು ಸೇರಿವೆ.
ಈ ಉಪಕ್ರಮವು ಮಿಷನ್ ಮಾದರಿಯಲ್ಲಿ ಖಾಲಿ ಹುದ್ದೆಗಳನ್ನು ತುಂಬುವ ಸರ್ಕಾರದ ದೊಡ್ಡ ಪ್ರಯತ್ನದ ಒಂದು ಭಾಗವಾಗಿದೆ, ಸಾರ್ವಜನಿಕ ವಲಯದಲ್ಲಿ ಪ್ರಮುಖ ಪಾತ್ರಗಳಿಗೆ ಅರ್ಹ ವ್ಯಕ್ತಿಗಳನ್ನು ನೇಮಿಸಿಕೊಳ್ಳುವುದನ್ನು ಖಚಿತಪಡಿಸುತ್ತದೆ. ರೋಜ್‌ಗಾರ್ ಮೇಳದ ಮೂಲಕ, ಹೊಸ ಉದ್ಯೋಗಿಗಳನ್ನು ಸಚಿವಾಲಯಗಳು, ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳುಗಳು, ಸ್ವಾಯತ್ತ ಸಂಸ್ಥೆಗಳು ಮತ್ತು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳು ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಂತಹ ಇತರ ಪ್ರಮುಖ ಸಂಸ್ಥೆಗಳಿಗೆ ಸೇರಿಸಲಾಗುತ್ತದೆ.
ಉದ್ಯೋಗ ಸೃಷ್ಟಿ ಮತ್ತು ಯುವಕರ ಉದ್ಯೋಗ ಸಾಮರ್ಥ್ಯವನ್ನು ಸುಧಾರಿಸುವುದು ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಗಳಾಗಿವೆ. ಈ ಗುರಿಯನ್ನು ಮುಂದುವರೆಸಲು ಉದ್ಯೋಗಾವಕಾಶ ಮತ್ತು ಹಣಕಾಸಿನ ಉತ್ತೇಜನೆಯನ್ನು ಹೆಚ್ಚಳ ಮಾಡುವ ಉದ್ದೇಶದಿಂದ ಸರ್ಕಾರ ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆರಂಭಿಸಿದೆ.












Click it and Unblock the Notifications