ಓಲಾ, ಉಬರ್, ರ್ಯಾಪಿಡೋ ಸೇರಿ ರೈಡಿಂಗ್ ಪ್ಲಾಟ್ಫಾರ್ಮ್ಗಳಿಗೆ ಕೇಂದ್ರದ ಖಡಕ್ ಆದೇಶ: ಮಹಿಳೆಯರಿಗೆ ಅನುಕೂಲ
Ride-Hailing Apps: ದೇಶದಲ್ಲಿ ಓಲಾ, ಉಬರ್, ರ್ಯಾಪಿಡೋ ಸೇರಿದಂತೆ ಎಲ್ಲಾ ಪ್ರಮುಖ ರೈಡ್-ಹೇಲಿಂಗ್ ಪ್ಲಾಟ್ಫಾರ್ಮ್ಗಳಿಗೆ ಕೇಂದ್ರ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಜೊತೆಗೆ ಮಹಿಳಾ ಪ್ರಯಾಣಿಕರ ಸುರಕ್ಷತೆ ಕುರಿತು ಕೂಡ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಹುತೇಕ ಪ್ರಯಾಣಿಕರು ಓಲಾ, ಉಬರ್, ರ್ಯಾಪಿಡೋ ಸೇರಿದಂತೆ ಇನ್ನಿತರೆ ರೈಡ್ ಪ್ಲಾಟ್ಫಾರ್ಮ್ಗಳನ್ನು ಅವಲಂಬಿಸಿದ್ದಾರೆ. ಬೇಗ ಒಂದು ಸ್ಥಳಕ್ಕೆ ಹೋಗಬೇಕಂದ್ರೆ, ಬೇರೆ ಯಾವುದೇ ದಾರಿಯಿಲ್ಲದೆ, ಇವುಗಳಲ್ಲೇ ಪ್ರಯಾಣ ಮಾಡಲು ಬಯಸುತ್ತಾರೆ. ಆದರೆ, ಬುಕ್ಕಿಂಗ್ ಮಾಡಿದ ಮೇಲೂ ಟಿಪ್ಸ್ ಆಯ್ಕೆಯನ್ನು ನೀಡಲಾಗುತ್ತದೆ. ಇದರಿಂದ ಅದೆಷ್ಟೋ ಪ್ರಯಾಣಿಕರು ಹೆಚ್ಚು ಹಣ ಕಳೆದುಕೊಂಡಿರುವ ಉದಾಹರಣೆಗಳಿವೆ.

ಒಂದು ವೇಳೆ ಕ್ಯಾನ್ಸಲ್ ಮಾಡಿದರೆ, ಮತ್ತೆ ಬುಕ್ಕಿಂಗ್ ಮಾಡಿದಾಗ ಹೆಚ್ಚುವರಿ ಚಾರ್ಜ್ ಕೂಡ ಬೀಳುತ್ತದೆ. ಆದ್ದರಿಂದ ಪ್ರಯಾಣಿಕರು ಯಾವುದೇ ದಾರಿ ಇಲ್ಲದೆ, ಆ ಆ್ಯಪ್ಗಳಲ್ಲಿ ನೀಡಲಾಗುವ ಟಿಪ್ಸ್ ಹಣವನ್ನು ಕೊಟ್ಟುಬಿಡುತ್ತಾರೆ. ಮತ್ತೊಂದೆಡೆ, ಬಹುತೇಕ ಈ ವಾಹನಗಳಿಗೆ ಪುರುಷರೇ ಚಾಲಕರಾಗಿರುತ್ತಾರೆ. ಇದರಿಂದ ಮಹಿಳಾ ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿದ್ದು, ನಮಗೆ ಮಹಿಳಾ ಚಾಲಕಿಯರನ್ನೇ ನೀಡಬೇಕೆಂದು ಒತ್ತಾಯಿಸಿದ್ದರು. ಇದನ್ನೆಲ್ಲಾ ಗಮನಿಸಿದ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರೈಡಿಂಗ್ ಪ್ಲಾಟ್ಫಾರ್ಮ್ಗಳಿಗೆ ಖಡಕ್ ಸೂಚನೆ: ಓಲಾ, ಉಬರ್, ರ್ಯಾಪಿಡೋ ಸೇರಿದಂತೆ ಎಲ್ಲಾ ಪ್ರಮುಖ ರೈಡ್-ಹೇಲಿಂಗ್ ಪ್ಲಾಟ್ಫಾರ್ಮ್ಗಳಿಗೆ ಕೇಂದ್ರ ಸರ್ಕಾರ ಮಹತ್ವದ ಮತ್ತು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಪ್ರಯಾಣ ಆರಂಭಿಸುವ ಮೊದಲು ಪ್ರಯಾಣಿಕರಿಂದ ಮುಂಗಡವಾಗಿ ಟಿಪ್ಸ್ ಪಡೆಯುವ ಪ್ರಕ್ರಿಯೆಗೆ ಸಂಪೂರ್ಣ ನಿಷೇಧ ವಿಧಿಸಿದೆ. ಅಲ್ಲದೆ, ಮಹಿಳಾ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮಹಿಳಾ ಚಾಲಕರನ್ನೇ ಆಯ್ಕೆ ಮಾಡಿಕೊಳ್ಳುವ ಸೌಲಭ್ಯವನ್ನು ಕಡ್ಡಾಯವಾಗಿ ಒದಗಿಸಬೇಕೆಂದು ಸೂಚಿಸಿದೆ.
ಕೇಂದ್ರ ಸರ್ಕಾರ ಮಹತ್ವದ ಆದೇಶ: ಡಿಸೆಂಬರ್ 15ರಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮೋಟಾರ್ ವಾಹನ ಸಂಗ್ರಾಹಕ ಮಾರ್ಗಸೂಚಿಗಳು 2025ಕ್ಕೆ ಸಂಬಂಧಿಸಿದಂತೆ ಮಹತ್ವದ ತಿದ್ದುಪಡಿಗಳನ್ನು ಪ್ರಕಟಿಸಿದೆ. ಈ ತಿದ್ದುಪಡಿಗಳ ಮೂಲಕ ಪ್ರಯಾಣಿಕರ ಮೇಲೆ ಬೀಳುತ್ತಿದ್ದ ಅನಗತ್ಯ ಖರ್ಚಿಗೆ ಬ್ರೇಕ್ ಆಗಿದ್ದು, ಮಹಿಳಾ ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಿದೆ. ಜೊತೆಗೆ, ಚಾಲಕರಿಗೂ ನ್ಯಾಯ ಒದಗಿಸುವ ಪ್ರಯತ್ನವನ್ನು ಮಾಡಲಾಗಿದೆ.
ಓಲಾ, ಉಬರ್ ಮತ್ತು ಇತರ ರೈಡ್ ಅಪ್ಲಿಕೇಶನ್ಗಳಲ್ಲಿ 10ರಿಂದ 50 ರೂಪಾಯಿ ಟಿಪ್ಸ್ ನೀಡಿದರೆ ಮಾತ್ರ ವಾಹನ ಲಭ್ಯ ಎಂಬ ರೀತಿಯಲ್ಲಿ ಪ್ರಯಾಣಿಕರ ಮೇಲೆ ಒತ್ತಡ ಹೇರಲಾಗುತ್ತಿತ್ತು. ಒಂದು ವೇಳೆ ಟಿಪ್ಸ್ ನೀಡದಿದ್ದರೆ, ಕಾರು ಅಥವಾ ಆಟೋ ಸಿಗದಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು. ಇದರಿಂದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಲಿದ್ದಾರೆ.
ಇದನ್ನು ಗಮನಿಸಿದ ಕೇಂದ್ರ ಸರ್ಕಾರ, ರೈಡ್ ಬುಕ್ಕಿಂಗ್ ಸಮಯದಲ್ಲಿ ಅಥವಾ ಚಾಲಕನನ್ನು ಹುಡುಕುವ ಹಂತದಲ್ಲಿ ಟಿಪ್ಸ್ ಆಯ್ಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇನ್ಮುಂದೆ, ಟಿಪ್ಸ್ ನೀಡುವ ಆಯ್ಕೆಯು ಕೇವಲ ಪ್ರಯಾಣ ಪೂರ್ಣಗೊಂಡ ನಂತರವಷ್ಟೇ ಅಪ್ಲಿಕೇಶನ್ನಲ್ಲಿ ಗೋಚರಿಸಬೇಕು ಎಂದು ಸೂಚಿಸಿದೆ. ಟಿಪ್ಸ್ ನೀಡುವುದು ಸಂಪೂರ್ಣವಾಗಿ ಸ್ವಯಂಪ್ರೇರಿತ ಆಗಿದ್ದು, ಯಾವುದೇ ರೀತಿಯ ಬಲವಂತ ಇರಬಾರದು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.
ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪ್ರಯಾಣಿಕರು ನೀಡುವ ಟಿಪ್ಸ್ನ ಸಂಪೂರ್ಣ ಮೊತ್ತ ಚಾಲಕರಿಗೇ ತಲುಪಬೇಕು. ಯಾವುದೇ ರೈಡ್-ಹೇಲಿಂಗ್ ಕಂಪನಿಗಳು ಈ ಹಣದಿಂದ ಕಮಿಷನ್ ಅಥವಾ ಸೇವಾ ಶುಲ್ಕವನ್ನು ಕಡಿತ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಖಡಕ್ ಸೂಚನೆ ನೀಡಿದೆ. ಈ ಹೊಸ ಮಾರ್ಗಸೂಚಿಗಳಲ್ಲಿ ಎಲ್ಲಾ ರೈಡ್-ಹೇಲಿಂಗ್ ಅಪ್ಲಿಕೇಶನ್ಗಳು ಮಹಿಳಾ ಪ್ರಯಾಣಿಕರಿಗೆ ಮಹಿಳಾ ಚಾಲಕರನ್ನು ಆಯ್ಕೆ ಮಾಡುವ ನಿರ್ಧಾರವನ್ನು ಕಡ್ಡಾಯವಾಗಿ ಒದಗಿಸಬೇಕು. ಈ ನಿರ್ಧಾರವನ್ನು ಮಹಿಳಾ ಪ್ರಯಾಣಕರ ಸುರಕ್ಷತೆ ದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications