ರಾಜ್ಯದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ
ನವದೆಹಲಿ, ಡಿಸೆಂಬರ್ 04: ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾದ ಅನ್ನಪೂರ್ಣ ದೇವಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಚಳವಳಿ ನಡೆಸುತ್ತಿದ್ದ ಕರ್ನಾಟಕ ಅಂಗನವಾಡಿ, ಅಕ್ಷರ ದಾಸೋಹಿ, ಆಶಾ ನೌಕರರ ಪ್ರಮುಖರನ್ನು ಬುಧವಾರ ನವದೆಹಲಿಗೆ ಕರೆಸಿಕೊಂಡ ಸಚಿವ ಕುಮಾರಸ್ವಾಮಿ ಅವರು, ಸಂಜೆ ಈ ಎಲ್ಲಾ ಪ್ರಮುಖರ ಜತೆ ಸಂಜೆ ನವದೆಹಲಿಯ ಶಾಸ್ತ್ರೀ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಕಚೇರಿಯಲ್ಲಿ ಸಚಿವರಾದ ಅನ್ನಪೂರ್ಣದೇವಿ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ನೌಕರರ ಪರವಾಗಿ ಸಚಿವರಿಗೆ ಅವರ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು. ಇಬ್ಬರು ಸಚಿವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಜರಿದ್ದ ಈ ಸಭೆಯಲ್ಲಿ ಕರ್ನಾಟಕದಿಂದ ಬಂದಿದ್ದ ಹನ್ನೆರಡು ಮಂದಿ ನೌಕರರ ಪ್ರಮುಖರು ಭಾಗಿಯಾಗಿದ್ದರು. ಎಫ್ ಆರ್ ಎಸ್ ನೀತಿಯಲ್ಲಿ ಸುಧಾರಣೆ, ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಂದ ಮುಕ್ತಿಗೊಳಿಸುವುದು, ವಿಮಾ ಸೌಲಭ್ಯ, ಎಲ್ಲಾ ನೌಕರರ ವೇತನ ಹೆಚ್ಚಳ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಸಚಿವರೊಬ್ಬರು ಪ್ರಮುಖರ ಜತೆ ಚರ್ಚಿಸಿದರು.
ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಗೆ ನಿಯೋಜಿಸದಿರುವ ಬಗ್ಗೆ ಚುನಾವಣೆ ಆಯೋಗದ ಜತೆ ಚರ್ಚೆ ನಡೆಸಲಾಗುವುದು ಹಾಗೂ ಎಲ್ಲಾ ನೌಕರರಿಗೂ ಕೆಲಸದ ಒತ್ತಡ ಕಡಿಮೆ ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಸಚಿವೆ ಅನ್ನಪೂರ್ಣದೇವಿ ಅವರು ಭರವಸೆ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ವ್ಯಾಪ್ತಿಗೆ ಬರುವ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ ವಹಿಸಲಾಗುವುದು. ನಿಮ್ಮ ಮೇಲಿನ ಕಾಳಜಿ ಹಾಗೂ ಮಾನವೀಯ ನೆಲೆಗಟ್ಟಿನ ಮೇರೆಗೆ ಬೇಡಿಕೆಗಳ ಈಡೇರಿಕೆಗೆ ಪರಿಶೀಲನೆ ನಡೆಸಲಾಗುವುದು ಎಂದು ಅನ್ನಪೂರ್ಣದೇವಿ ಅವರು ಭರವಸೆ ನೀಡಿದರು.
ನರೇಂದ್ರ ಮೋದಿ ಅವರ ಸರ್ಕಾರ ನಿಮ್ಮ ಜತೆಗಿದೆ. ಕರ್ನಾಟಕದಲ್ಲಿನೀವು ನಡೆಸುತ್ತಿದ್ದ ಪ್ರತಿಭಟನಾ ಚಳವಳಿಯ ಬಗ್ಗೆ ಸಚಿವರಾದ ಕುಮಾರಸ್ವಾಮಿ ಅವರು ನನ್ನೊಂದಿಗೆ ವಿವರವಾಗಿ ಚರ್ಚೆ ನಡೆಸಿದ್ದಾರೆ. ನೀವು ಉತ್ತಮ, ಶ್ರೇಷ್ಠ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಜತೆ ಸರಕಾರವಿದೆ. ಆದಷ್ಟು ಬೇಡಿಕೆಗಳನ್ನು ಈಡೇರಿಸಲಾಗುವುದು. ನಿಮಗೆ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ, ನಿಮಗೆ ಮತ್ತಷ್ಟು ಉತ್ತಮ ಸೌಲಭ್ಯ ಕಲಿಸ್ಪಿಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅನ್ನಪೂರ್ಣದೇವಿ ಅವರು ಅಂಗನವಾಡಿ ಪ್ರಮುಖರಿಗೆ ತಿಳಿಸಿದರು.
ಇದಕ್ಕೂ ಮುನ್ನ ತಮ್ಮ ನಿವಾಸದಲ್ಲಿ ನೌಕರರ ಪ್ರಮುಖರನ್ನು ಭೇಟಿಯಾದ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ನನ್ನ ಮನವಿಗೆ ಓಗೊಟ್ಟು ಪ್ರತಿಭಟನೆ ಕೊನೆಗೊಳಿಸಿ ನವದೆಹಲಿಗೆ ಬಂದಿದ್ದು ಸ್ವಾಗತಾರ್ಹ. ನೀವೆಲ್ಲರೂ ಮೈಕೊರೆಯುವ ಚಳಿಯಲ್ಲಿ ರಸ್ತೆಯ ಮೇಲೆ ಧರಣಿ ಕೂರುವುದು ಅತ್ಯಂತ ನೋವಿನ ಸಂಗತಿ. ಚರ್ಚೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅದಕ್ಕಾಗಿಯೇ ನಿಮ್ಮನ್ನು ಇಲ್ಲಿಗೆ ಕರೆಸಿಕೊಳ್ಳಲಾಯಿತು. ಪ್ರತಿಭಟನೆಗಿಂತ ಚರ್ಚೆ ಮಾಡುವುದು ಉತ್ತಮ ಮಾರ್ಗ ಎಂದು ತಿಳಿಸಿದರು.
ಇದೇ ವೇಳೆ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೌಕರರ ಬೇಡಿಕೆಗಳ ಬಗ್ಗೆ ದೂರವಾಣಿಯಲ್ಲಿ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಮಾತುಕತೆ ನಡೆಸಿದ ಸಚಿವ ಕುಮಾರಸ್ವಾಮಿ ಅವರು; ಪ್ರಧಾನ್ ಅವರೊಂದಿಗೆ ನೌಕರರ ಪ್ರಮುಖರ ಸಭೆಯನ್ನು ನಿಗದಿಗೊಳಿಸಿ, ಅವರ ನಿವಾಸಕ್ಕೆ ಅಧಿಕಾರಿಗಳ ಸಮೇತ ಕಳಿಸಿದರು. ಸಚಿವ ಪ್ರಧಾನ್ ಅವರ ಜತೆಗೂ ಮಾತುಕತೆ ನಡೆಸಿದ ಪ್ರಮುಖರು, ತಮ್ಮ ಬೇಡಿಕೆ, ಸಂಕಷ್ಟಗಳ ಬಗ್ಗೆ ಚರ್ಚಿಸಿದರು. ಈ ಅವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ್ ಅವರು, ಈ ಬಗ್ಗೆ ಕುಮಾರಸ್ವಾಮಿ ಅವರು ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications