ಭಾರತದ ವಿಮಾನ ನಿಲ್ದಾಣಗಳಲ್ಲಿ 'ಕೊರೊನಾ ಕ್ರಮ'ಗಳ ಬಗ್ಗೆ ಕೇಂದ್ರದ ಮಹತ್ವದ ಮಾಹಿತಿ
ನವದೆಹಲಿ, ಡಿಸೆಂಬರ್ 21: ಭಾರತದ ವಿವಿಧ ರಾಜ್ಯಗಳಲ್ಲಿ ಕೊರೊನಾ ವೈರಸ್ ಪಾಸಿಟಿವ್ ಪ್ರಮಾಣ ಹೆಚ್ಚಾಗಿದೆ. ಸೋಂಕಿನ ಹೆಚ್ಚಳದ ಮಧ್ಯೆ ಭಾರತ ವಿಮಾನ ನಿಲ್ದಾಣಗಳ ಮೂಲಕ ತೆರಳುವ ಮತ್ತು ಆಗಮಿಸುವ ಪ್ರಯಾಣಿಕರ ಸುರಕ್ಷತೆ ಸಂಬಂಧ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಏರ್‌ಪೋರ್ಟ್‌ಗಳಲ್ಲಿ ಕೋವಿಡ್ ಕ್ರಮ ಕೈಗೊಳ್ಳುತ್ತದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಿದೆ.
ದೇಶದ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ 19 ಗಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆಯ ಅಧಿಕೃತ ಮೂಲಗಳು ಮಾಹಿತಿ ನೀಡಿವೆ.

ಭಾರತದಲ್ಲಿ ಸದ್ಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ಮುಂಜಾಗ್ರತೆ ಸಂಬಂಧ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ಎನ್‌ಐಎ ವರದಿ ಮಾಡಿದೆ.
ದೇಶದಲ್ಲಿ ಕಳೆದ ಜುಲೈ ತಿಂಗಳಲ್ಲಿ ವಿಮಾನ ನಿಲ್ದಾಣಗಳ ಮೂಲಕ ಭಾರತಕ್ಕೆ ಬರುವ ಶೇಕಡಾ 2ರಷ್ಟು ಪ್ರಯಾಣಿಕರಿಗೆ ಯಾದೃಚ್ಛಿಕವಾಗಿ RT-PCR ಆಧಾರಿತ ಪರೀಕ್ಷೆಯ ಅಗತ್ಯತೆಯನ್ನು ಕೈ ಬಿಡಲು ನಿರ್ಧರಿಸಲಾಯಿತು. ಈ ಕುರಿತು ಪರಿಷ್ಕೃತ ಮಾರ್ಗಸೂಚಿಗಳನ್ನು ಭಾರತ ಸರ್ಕಾರ ಅಂದು ಹೊರಡಿತ್ತು.
ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಿಲ್ಲ
ಸದ್ಯ ಕೋವಿಡ್ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಿದ್ದರು ಸಹ ವಿಮಾನ ನಿಲ್ದಾಣಗಳಲ್ಲಿ ಯಾವುದೇ ಪರೀಕ್ಷೆ ಮಾಡುವ ಬಗ್ಗೆ ಸರ್ಕಾರ ನಿರ್ಧರಿಸದಿರುವುದ ಅಚ್ಚರಿ ಮೂಡಿಸಿದೆ. ಭಾರತವು ಕೋವಿಡ್ 19 ಉಪತಳಿ JN.1 ತಳಿ ಪಾಸಿಟಿವ್ ಪ್ರಕರಣಗಳನ್ನು ವರದಿ ಮಾಡಿದೆ. ಆದರೆ ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳಲ್ಲಿ ಯಾವುದೇ ಏರಿಕೆ ಕಂಡು ಬಂದಿಲ್ಲ ಎಂದು ಸರ್ಕಾರ ತಿಳಿಸಿದೆ.

ಆಸ್ಪತ್ರೆಗೆ ದಾಖಲಾದ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳವಿಲ್ಲ ಮತ್ತು ಇತರ ವೈದ್ಯಕೀಯ ಪರಿಸ್ಥಿತಿಗಳಿಂದ ಆಸ್ಪತ್ರೆಗೆ ದಾಖಲಾದ ಜನರಲ್ಲಿ ಕೋವಿಡ್-19 ಸಾಮಾನ್ಯ ಎಂಬಂತೆ ಪತ್ತೆ ಆಗಿವೆ. ಇದರಿಂದ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ದೇಶದಲ್ಲಿ 23 ಸಾವುಗಳು ವರದಿ
ಸದ್ಯ ದೇಶದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವ ಪ್ರಕರಣಗಳಲ್ಲಿ ಬಹುತೇಕವು ಇತರೆ ಅನಾರೋಗ್ಯ ಸ್ಥಿತಿಗಳಿಂದಾಗಿವೆ. ಇದರ ಹೊರತು ಕೋವಿಡ್ ನಿಂದಾಗಿಲ್ಲ ಎಂದು ಕೊರೊನಾ ಸಂಶೋಧನೆ ತಿಳಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಳೆದ ಎರಡು ವಾರಗಳಲ್ಲಿ ದೇಶದಲ್ಲಿ ಒಟ್ಟು 23 ಸಾವುಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ.
ಗುರುವಾರ ಭಾರತದಲ್ಲಿ ಒಂದೇ ದಿನಕ್ಕೆ 594 ಹೊಸ ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿವೆ. ಬುಧವಾರ ವರದಿಯಾದ 2,311 ರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 2,669 ಕ್ಕೆ ಏರಿದೆ ಆಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಮಾಹಿತಿ ನೀಡಿದೆ.
ದೇಶದಲ್ಲಿ ಕೇರಳ ಮೊದಲು ನಂತರ ಕರ್ನಾಟಕ
ದೇಶದ ವಿವಿಧ ರಾಜ್ಯಗಳ ಪೈಕಿ ಕೇರಳದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಕೋವಿಡ್ ಉಪತಳಿ ಸೋಂಕಿನ ಪ್ರಕರಣಗಳು ವರದಿ ಆಗುತ್ತಿವೆ. ಈ ಮೂಲಕ ದೇಶದಲ್ಲಿ ಕೇರಳವು ಮೊದಲ ಸ್ಥಾನದಲ್ಲಿದೆ. ಇನ್ನೂ ಕರ್ನಾಟಕದಲ್ಲಿ ಒಟ್ಟು 92 ಸಕ್ರಿಯ ಪ್ರಕರಣಗಳು ಇದ್ದು, ಇದರಿಂದ ಕರ್ನಾಟಕ ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣದಲ್ಲಿ ಎರಡನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಕೋವಿಡ್ ನಿಂದ ಒಂದು ದಿನದ ಆಸುಪಾಸಿನಲ್ಲಿ ಒಟ್ಟು ಮೂವರು ಮೃತಪಟ್ಟಿದ್ದಾರೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications