ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನವರಿಯಿಂದ ಎಲ್ಲಾ ನಾಲ್ಕು ಚಕ್ರ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 04: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜನವರಿ 1 ರಿಂದ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಮುಂದಾಗಿದೆ

ಕೇಂದ್ರೀಯ ಮೋಟಾರು ವಾಹನ ನಿಯಮ 1989ರ ಪ್ರಕಾರ, 2017ರಿಂದೀಚೆಗೆ ಯಾವುದೇ ಹೊಸ ನಾಲ್ಕು ಚಕ್ರದ ವಾಹನಗಳ ನೋಂದಣಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ ಮತ್ತು ಅದನ್ನು ವಾಹನ ಉತ್ಪಾದಕರು ಅಥವಾ ಡೀಲರ್ ಗಳು ಪೂರೈಸಬೇಕು.

ಅಲ್ಲದೆ, ಸಾರಿಗೆ ವಾಹನಗಳ ಕ್ಷಮತಾ ಪತ್ರ (ಫಿಟ್ನೆಸ್ ಸರ್ಟಿಫಿಕೆಟ್)ಗಳ ನವೀಕರಣಕ್ಕೂ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. ಜೊತೆಗೆ 2019ರ ಅಕ್ಟೋಬರ್ 1ರಿಂದೀಚೆಗೆ ರಾಷ್ಟ್ರೀಯ ಪರ್ಮಿಟ್ ಹೊಂದಿರುವ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Fastag

ಯಾವುದೇ ಥರ್ಡ್-ಪಾರ್ಟಿ ವಾಹನ ಇನ್ಯೂರೆನ್ಸ್ ಖರೀದಿಗೆ 2021ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಫಾಸ್ಟ್ಯಾಗ್ ಹೊಂದಿರಬೇಕು. ಈ ಕುರಿತು ಅಭಿಪ್ರಾಯಗಳನ್ನು ಸಂಗ್ರಹಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

FASTag ಪಡೆಯೋದು ಹೇಗೆ? App ಬಳಸುವುದು ಹೇಗೆ?FASTag ಪಡೆಯೋದು ಹೇಗೆ? App ಬಳಸುವುದು ಹೇಗೆ?

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 2020ರ ಸೆಪ್ಟಂಬರ್ 1ರಂದು ಜಿಎಸ್ ಆರ್ 541(ಇ) ಕರಡು ಅಧಿಸೂಚನೆ ಮೂಲಕ, 2017ರ ಡಿಸೆಂಬರ್ 1ಕ್ಕೂ ಮುನ್ನ ಮಾರಾಟ ಮಾಡಿರುವ ಹಳೆಯ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸುವ ಬಗ್ಗೆ ಸಂಬಂಧಿಸಿದವರಿಂದ ಸಲಹೆ ಮತ್ತು ಸೂಚನೆಗಳನ್ನು ಆಹ್ವಾನಿಸಿದೆ.

ತಿದ್ದುಪಡಿ ಮಾಡಲ್ಪಟ್ಟಿರುವ ಸಿಎಂವಿಆರ್ 1989ರ ಕಾಯ್ದೆಯ ಅಂಶಗಳು 2021ರ ಜನವರಿ 1ರಿಂದ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ತಿದ್ದುಪಡಿ ಮಾಡಿರುವ ನಮೂನೆ ಸಂಖ್ಯೆ 51(ವಿಮಾ ಪ್ರಮಾಣಪತ್ರ)ದಲ್ಲಿ ಮೂರನೇ ವ್ಯಕ್ತಿಗೆ ವಿಮೆ ಮಾಡಿಸಲು ಫಾಸ್ಟ್ಯಾಗ್ ಹೊಂದುವುದು ಕಡ್ಡಾಯಗೊಳಿಸಲು ಉದ್ದೇಶಿಸಲಾಗಿದೆ.

ಆ ವೇಳೆ ಫಾಸ್ಟ್ಯಾಗ್ ಐಡಿಯನ್ನು ಗುರುತಿಸಲಾಗುವುದು. ಇದನ್ನು 2021ರ ಏಪ್ರಿಲ್ 1ರಿಂದ ಜಾರಿಗೊಳಿಸಲು ಮುಂದಾಗಿದ್ದಾರೆ.

English summary
To drive faster adoption of the electronic toll collection, the union road transport and highways ministry has proposed to make FASTag mandatory in all four wheelers, effective 1 January, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X