ಪ್ರವಾಹಕ್ಕೊಳಗಾದ 5 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ₹1,554.99 ಕೋಟಿ ನೆರವು ಬಿಡುಗಡೆ
ನವದೆಹಲಿ, ಫೆಬ್ರವರಿ, 19: ಕಳೆದ ಬಾರಿ ಅಂದರೆ 2024ರಲ್ಲಿ ಅಬ್ಬರಿಸಿದ ಮುಂಗಾರು ಮಳೆ ದೇಶದ ಬಹುತೇಕ ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಅದರಲ್ಲೂ ಉತ್ತರ ಭಾರತೇಕ ಬಹುತೇಕ ಭಾಗಗಳಲ್ಲಿ & ದಕ್ಷಿಣ ಭಾರತದ ಕೆಲವೆಡೆ ಕುಟುಂಬಗಳು ಮನೆ, ಮಠಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದವು. ಇದನ್ನು ಗಮನದಲ್ಲಿಟ್ಟುಕೊಂಡು ಎನ್‌ಡಿಆರ್‌ಎಫ್ ನೆರವು ಬಿಡುಗಡೆ ಮಾಡಿದೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದ ಸಮಿತಿಯು 2024ರಲ್ಲಿ ಪ್ರವಾಹ, ಚಂಡಮಾರುತ, ಹಠಾತ್ ಪ್ರವಾಹ, ಭೂಕುಸಿತ ಸೇರಿ ಪ್ರಾಕೃತಿಕ ವಿಕೋಪಕ್ಕ ಸಿಲುಕಿ ಹಾನಿಗೊಳಗಾದ 5 ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (NDRF) 1,554.99 ಕೋಟಿ ರೂಪಾಯಿ ಹೆಚ್ಚುವರಿ ನೆರವು ಬಿಡುಗಡೆ ಮಾಡಿದೆ. ಈ ಬಗ್ಗೆ ಅಮಿತ್ ಶಾ ಅವರು ಮಾಹಿತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಯಾವ್ಯಾವ ರಾಜ್ಯಕ್ಕೆ ಎಷ್ಟು ನೆರವು ಬಿಡುಗಡೆ?
* ಆಂಧ್ರ ಪ್ರದೇಶ: 608.08 ಕೋಟಿ ರೂಪಾಯಿ
* ನಾಗಾಲ್ಯಾಂಡ್: 170.99 ಕೋಟಿ ರೂಪಾಯಿ
* ಓಡಿಶಾ: 255.24 ಕೋಟಿ ರೂಪಾಯಿ
* ತೆಲಾಂಗಾಣ: 231.75 ಕೋಟಿ ರೂಪಾಯಿ
* ತ್ರಿಪುರಾ: 288.93 ಕೋಟಿ ರೂಪಾಯಿ
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಮಿತ್ ಶಾ ಅವರು, ಪ್ರಕೃತಿ ವಿಪತ್ತಿನ ಅವಘಡಗಳಿಂದ ಸಂತ್ರಸ್ತರಾದವರ ಪರ ನರೇಂದ್ರ ಮೋದಿ ಸರ್ಕಾರ ಕಲ್ಲಿನಂತೆ ನಿಲ್ಲಲಿದೆ. ಆಂಧ್ರಪ್ರದೇಶ, ನಾಗಾಲ್ಯಾಂಡ್, ಓಡಿಶಾ, ತೆಲಂಗಾಣ ಮತ್ತು ತ್ರಿಪುರಾ ರಾಜ್ಯಗಳಿಗೆ ಎನ್‌ಡಿಆರ್‌ಎಫ್ ನಿಧಿಯಡಿ ಹೆಚ್ಚುವರಿ ನೆರವು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಎಸ್‌ಡಿಆರ್‌ಎಫ್ ನಿಧಿಯಡಿ 27 ರಾಜ್ಯಗಳಿಗೆ ಕೆಂದ್ರ 18,322.80 ಕೋಟಿ ರೂಪಾಯಿ ಬಿಡುಗಡೆ ಮಾಡಿತ್ತು ಎಂದು ಬರೆದುಕೊಂಡಿದ್ದಾರೆ.
ದೇಶವನ್ನೇ ಬೆಚ್ಚಿ ಬೀಳಿಸಿದ್ದ ವಯನಾಡಿದ ಘಟನೆ: ಕರ್ನಾಟಕದ ಪಕ್ಕದ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತುಂಬಾ ಜನ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ ಘಟನೆಗಳು 2024ರಲ್ಲಿ ನಡೆದಿದ್ದವು. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳವಂತೆ ಮಾಡಿತ್ತು.
ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಕೊಡಗಿನಲ್ಲಿ ಆರಂಭದಲ್ಲಿ 200ಕ್ಕೂ ಅಧಿಕ ಸಂಭವನೀಯ ಭೂಕುಸಿತ ಪ್ರವಾಹ ಪ್ರದೇಶಗಳನ್ನು ಗುರುತು ಮಾಡಿತ್ತು. ಅಲ್ಲದೆ. 3,000ಕ್ಕೂ ಅಧಿಕ ಕುಟುಂಬಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿತ್ತು.
ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನಾಧರಿಸಿ ಈ ಪ್ರದೇಶಗಳನ್ನು ಗುರುತಿಸಲಾಗಿದ್ದು, 2024ರ ಆಗಸ್ಟ್‌ನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದುದರಿಂದ ಇಲ್ಲಿನ ಜಿಲ್ಲಾಡಳಿತವು ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲೆಗೊಂಡಿರುವ ಸಾವಿರಾರು ಕುಟುಂಬಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸೂಚನೆ ನೀಡಿತ್ತು.
ಈ ಹಿಂದಿನ ವಿಪತ್ತು ವರದಿಗಳು ಮತ್ತು ಸಮೀಕ್ಷೆಗಳ ಆಧಾರದ ಮೇಲೆ ಈ ಪ್ರದೇಶಗಳನ್ನು ಗುರುತಿಸಲಾಗಿತ್ತು. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸ್ಥಳಾಂತರಿಸಬೇಕಾದ ಕುಟುಂಬಗಳನ್ನು ಅಂತಿಮಗೊಳಿಸಲಾಗಿತ್ತು.
ಜಿಲ್ಲಾಡಳಿತ ಪರಿಹಾರ ಕೇಂದ್ರಗಳನ್ನು ಸಹ ಸ್ಥಾಪಿಸಿತ್ತು. ಅಲ್ಲಿ ನೆರೆ ಸಂಸ್ತ್ರಸ್ತರು ಆಶ್ರಯ ಪಡೆದಿದ್ದರು. ಅಷ್ಟೇ ಅಲ್ಲದೆ, ವಿಪತ್ತಿನ ಆತಂಕ ಎದುರಿಸುತ್ತಿರುವ ಪ್ರದೇಶಗಳಲ್ಲಿಯೂ ಸಹ ಪರಿಹಾರ ಕೇಂದ್ರಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಲಾಗಿತ್ತು.
ಮಳೆಯ ಮುನ್ಸೂಚನೆಯನ್ನು ಆಧರಿಸಿ ಭೂಕುಸಿತ ಸಾಧ್ಯತೆ ಇರುವ ಪ್ರದೇಶಗಳಿಂದ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳುವ ಕೆಲಸವನ್ನು ಜಿಲ್ಲಾಡಳಿತ ಮಾಡಿತ್ತು.












Click it and Unblock the Notifications