ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಧನ ಮೇಲಿನ ತೆರಿಗೆ ಇಳಿಸಲು ಸಾಧ್ಯವೇ ಇಲ್ಲ: ಕೇಂದ್ರ ಸ್ಪಷ್ಟನೆ

By Manjunatha
|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 10: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಲ್ಲಿ ಇತಿಹಾಸ ಬರೆಯುತ್ತಿದ್ದರೂ ಸಹ ಇಂಧನದ ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಕಡಿತಗೊಳಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಸಾರಸಗಟು ತಳ್ಳಿಹಾಕಿದೆ.

ರಾಜಸ್ಥಾನ ಹಾಗೂ ಆಂಧ್ರಪ್ರದೇಶ ರಾಜ್ಯಗಳು ಪೆಟ್ರೋಲ್ ಡೀಸೆಲ್ ಮೇಲೆ ರಾಜ್ಯ ವಿಧಿಸುತ್ತಿದ್ದ ತೆರಿಗೆಯಲ್ಲಿ ಕಡಿತಗೊಳಿಸಿವೆ. ಹಾಗಾಗಿ ಕೇಂದ್ರವೂ ಇದೇ ಕ್ರಮ ಅನುಸರಿಸಬಹುದು ಎಂಬ ನಿರೀಕ್ಷೆ ಇತ್ತು ಆದರೆ ಅದು ಸುಳ್ಳಾಗಿದೆ.

ಆಂಧ್ರಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆ!ಆಂಧ್ರಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆ!

ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ಕೇಂದ್ರ ವಿಧಿಸುತ್ತಿರುವ ತೆರಿಗೆಗಳಲ್ಲಿ ಯಾವುದೇ ಕಡಿತ ಮಾಡಲಾಗದು ಎಂದು ಕೇಂದ್ರದ ಉನ್ನತ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೇಂದ್ರದ ಈ ನಿರ್ಧಾರದಿಂದ ಜನ ಇನ್ನಷ್ಟು ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿಯಲ್ಲಿ ಬೇಯಬೇಕಾಗಿದೆ.

Central government rules out excise duty cut off on fuel

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ಮತ್ತು ರೂಪಾಯಿ ಮೌಲ್ಯ ಸತತ ಕುಸಿತದಿಂದಾಗಿ ಪೆಟ್ರೋಲ್ ಬೆಲೆ ಸತತವಾಗಿ ಏರುತ್ತಿದೆ ಬೆಲೆ ಏರಿಕೆಗೆ ಕಡಿವಾಣ ಹಾಕಲು ದೂರಗಾಮಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಪೆಟ್ರೋಲ್ ಬೆಲೆ ಎಷ್ಟು ಇಳಿಸ್ಬಹುದು?ಕುಮಾರಸ್ವಾಮಿ ಅವರು ಪೆಟ್ರೋಲ್ ಬೆಲೆ ಎಷ್ಟು ಇಳಿಸ್ಬಹುದು?

ಪೆಟ್ರೋಲ್ , ಡೀಸೆಲ್ ಬೆಲೆ ತಾರಕಕ್ಕೆ ಏರಿದ ಬೆನ್ನಲ್ಲೆ ರಾಜಸ್ಥಾನ ಸರ್ಕಾರವು 4% ವ್ಯಾಟ್ ಅನ್ನು ಕಡಿತಗೊಳಿಸಿದೆ. ಆಂಧ್ರ ಪ್ರದೇಶವು ಪ್ರತಿ ಲೀಟರ್‌ಗೆ 2 ರೂಪಾಯಿ ಕಡಿತಗೊಳಿಸಿದೆ. ಕರ್ನಾಟಕ ಮುಖ್ಯಮಂತ್ರಿ ಎಚ್‌ಡಿಕೆ ಸಹ ಇಂಧನದ ಮೇಲೆ ರಾಜ್ಯ ಹೇರಿರುವ ತೆರಿಗೆ ಕಡಿತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂಬ ಭರವಸೆ ನೀಡಿದ್ದಾರೆ.

English summary
Central government rules out the proposal of cut off the excise duty on petrol on diesel. Central government official told that fuel price getting high because of Rupee crumbling in front of dolor and price hike of fuel in international market.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X