ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

45ರ ವಯಸ್ಸು ಮೇಲ್ಪಟ್ಟ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಸಂದೇಶ!

|
Google Oneindia Kannada News

ನವದೆಹಲಿ, ಏಪ್ರಿಲ್ 06: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆ 45 ವರ್ಷ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಸರ್ಕಾರಿ ನೌಕರರು ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಸೂಚಿಸಲಾಗಿದೆ.

ದೇಶದಲ್ಲಿ ಕೊವಿಡ್-19 ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲ ಸರ್ಕಾರಿ ನೌಕರರು ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

"ಪ್ಲೀಸ್.. 25 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಕೊಡಿ"

ಕೊರೊನಾವೈರಸ್ ಎರಡನೇ ಅಲೆಯಿಂದ ಅತಿಹೆಚ್ಚು ಸೋಂಕಿತ ಪ್ರಕರಣಗಳನ್ನು ಹೊಂದಿರುವ ಜಗತ್ತಿನ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಎರಡನೇ ಸ್ಥಾನಕ್ಕೇರಿದೆ. ಈ ಹಿನ್ನೆಲೆ ಕೊವಿಡ್-19 ಲಸಿಕೆ ಪಡೆದ ನಂತರವೂ ಶಿಷ್ಟಾಚಾರ ಪಾಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

24 ಗಂಟೆಗಳಲ್ಲಿ 96 ಸಾವಿರಕ್ಕೂ ಅಧಿಕ ಕೊರೊನಾ ಕೇಸ್

24 ಗಂಟೆಗಳಲ್ಲಿ 96 ಸಾವಿರಕ್ಕೂ ಅಧಿಕ ಕೊರೊನಾ ಕೇಸ್

ಭಾರತದಲ್ಲಿ ಒಂದೇ ದಿನ 96,982 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 24 ಗಂಟೆಗಳಲ್ಲಿ 50,143 ಸೋಂಕಿತರು ಗುಣಮುಖರಾಗಿದ್ದು, 446 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,26,86,049ಕ್ಕೆ ಏರಿಕೆಯಾಗಿದೆ. ಒಟ್ಟು 1,17,32,279 ಸೋಂಕಿತರು ಗುಣಮುಖರಾಗಿದ್ದು, ಸಾವಿನ ಸಂಖ್ಯೆ 1,65,547ಕ್ಕೆ ಏರಿಕೆಯಾಗಿದೆ. ಉಳಿದಂತೆ 7,88,223 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

ಕೊರೊನಾವೈರಸ್ ಸೋಂಕಿನ ತಪಾಸಣೆಗೆ ವೇಗ

ಕೊರೊನಾವೈರಸ್ ಸೋಂಕಿನ ತಪಾಸಣೆಗೆ ವೇಗ

ಕೊರೊನಾವೈರಸ್ ಎರಡನೇ ಅಲೆ ಹರಡುವಿಕೆ ವೇಗ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕು ತಪಾಸಣೆ ವೇಗವನ್ನು ಹೆಚ್ಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 12,11,612 ಜನರಿಗೆ ಕೊವಿಡ್-19 ಸೋಂಕು ತಪಾಸಣೆ ನಡೆಸಲಾಗಿದ್ದು, ದೇಶದಲ್ಲಿ ಈವರೆಗೂ 25,02,31,269 ಜನರ ಮಾದರಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ತಿಳಿಸಿದೆ.

ದೇಶದಲ್ಲಿ ಒಂದೇ ದಿನ 43 ಲಕ್ಷ ಜನರಿಗೆ ಲಸಿಕೆ ವಿತರಣೆ

ದೇಶದಲ್ಲಿ ಒಂದೇ ದಿನ 43 ಲಕ್ಷ ಜನರಿಗೆ ಲಸಿಕೆ ವಿತರಣೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 43,00,966 ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶಾದ್ಯಂತ ಈವರೆಗೂ 8,31,10,926 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ಈವರೆಗೆ 90,09,353 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 53,43,493 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 97,37,850 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 41,33,961 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 4,99,31,635 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 9,48,871 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಎರಡು ಮಾದರಿ ಲಸಿಕೆ ವಿತರಣೆ

ದೇಶದಲ್ಲಿ ಎರಡು ಮಾದರಿ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು.

English summary
Central Govt Advises Employees Who Are 45 And Above To Get Coronavirus Vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X