ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೂಸ್ಟರ್ ಡೋಸ್ 225 + ಸೇವಾ ಶುಲ್ಕ 150 = 375 ರೂಪಾಯಿಗೆ ಮುನ್ನೆಚ್ಚರಿಕೆ ಲಸಿಕೆ

|
Google Oneindia Kannada News

ನವದೆಹಲಿ, ಏಪ್ರಿಲ್ 9: ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಅನ್ನು ನೀಡುವ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಗರಿಷ್ಠ ಸೇವಾ ಶುಲ್ಕ 150 ರೂಪಾಯಿ ಮೀರುವಂತಿಲ್ಲ ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಏಪ್ರಿಲ್ 10ರಿಂದ ದೇಶದ ಖಾಸಗಿ ಕೋವಿಡ್ -19 ಲಸಿಕೆ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್ ವಿತರಣೆ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಈಗಾಗಲೇ ಘೋಷಿಸಿದೆ.

covishield booster dose price : ಏಪ್ರಿಲ್ 10ರಿಂದ ನೀವು ಪಡೆಯುವ ಬೂಸ್ಟರ್ ಡೋಸ್ ಲಸಿಕೆ ಬೆಲೆ ಎಷ್ಟು?covishield booster dose price : ಏಪ್ರಿಲ್ 10ರಿಂದ ನೀವು ಪಡೆಯುವ ಬೂಸ್ಟರ್ ಡೋಸ್ ಲಸಿಕೆ ಬೆಲೆ ಎಷ್ಟು?

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಶನಿವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಕಾರ್ಯದರ್ಶಿಗಳ ಜೊತೆಗೆ ಸಭೆ ನಡೆಸಿದರು. ಮೊದಲ ಮತ್ತು ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳುವುದಕ್ಕೆ ಈಗಾಗಲೇ ಜನರು ನೋಂದಣಿ ಮಾಡಿಸಿಕೊಂಡಿರುತ್ತಾರೆ. ಈ ಹಿನ್ನೆಲೆ ಬೂಸ್ಟರ್ ಡೋಸ್ ಪಡೆದುಕೊಳ್ಳುವುದಕ್ಕೆ ಯಾವುದೇ ಪ್ರತ್ಯೇಕವಾದ ಹೊಸ ನೋಂದಣಿ ಅಗತ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

150 ರೂಪಾಯಿಗಿಂತ ಹೆಚ್ಚು ಶುಲ್ಕ ವಿಧಿಸುವಂತಿಲ್ಲ

150 ರೂಪಾಯಿಗಿಂತ ಹೆಚ್ಚು ಶುಲ್ಕ ವಿಧಿಸುವಂತಿಲ್ಲ

ಭಾರತದಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ವಿತರಿಸುವ ಖಾಸಗಿ ಕೇಂದ್ರಗಳಿಗೆ ನಿಗದಿತ ಸೇವಾ ಶುಲ್ಕವನ್ನು ಪಡೆಯುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ. ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗೆ ನಿಗದಿಪಡಿಸಿರುವ ದರದ ಮೇಲೆ ಖಾಸಗಿ ಕೇಂದ್ರಗಳು ಗರಿಷ್ಠ 150 ರೂಪಾಯಿ ಶುಲ್ಕವನ್ನು ಮಾತ್ರ ವಿಧಿಸಬೇಕು ಎಂದು ಸೂಚನೆ ನೀಡಿದ್ದಾರೆ.

ವೈದ್ಯರು, ಕಾರ್ಮಿಕರು, 60 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ

ವೈದ್ಯರು, ಕಾರ್ಮಿಕರು, 60 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ

ಕಳೆದ 2022ರ ಜನವರಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಮೊದಲ ಶ್ರೇಣಿ ಕಾರ್ಯಕರ್ತರು ಮತ್ತು ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆ ಲಸಿಕೆಯನ್ನು ನೀಡುವುದಕ್ಕೆ ಪ್ರಾರಂಭಿಸಲಾಗಿದೆ. ಕಳೆದ ಮಾರ್ಚ್‌ನಲ್ಲಿ ಕೇಂದ್ರವು 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ಲಸಿಕೆ ವಿತರಿಸುವುದಕ್ಕೆ ಅವಕಾಶ ನೀಡಿದೆ. ಈ ಫಲಾನುಭವಿಗಳಿಗೆ ಬೂಸ್ಟರ್ ಡೋಸ್ ಅನ್ನು ಸರ್ಕಾರವು ಉಚಿತವಾಗಿ ನೀಡಲಾಗುತ್ತದೆ. ಏಪ್ರಿಲ್ 10ರಂದು ಪ್ರಾರಂಭವಾಗಲಿರುವ ವಯಸ್ಕರಿಗೆ ಮಾತ್ರ ಈ ಉಚಿತ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದಿಲ್ಲ ಎಂದು ರಾಜೇಶ್ ಭೂಷಣ್ ಹೇಳಿದ್ದಾರೆ.

1200 ರಿಂದ 225 ರೂ.ಗೆ ಬೂಸ್ಟರ್ ಡೋಸ್ ದರ ಕಡಿತ

1200 ರಿಂದ 225 ರೂ.ಗೆ ಬೂಸ್ಟರ್ ಡೋಸ್ ದರ ಕಡಿತ

ದೇಶದ ಖಾಸಗಿ ಕೋವಿಡ್-19 ಲಸಿಕೆ ಕೇಂದ್ರದಲ್ಲಿ ಕೋವಿಶೀಲ್ಡ್ ಬೂಸ್ಟರ್ ಲಸಿಕೆ ಒಂದು ಡೋಸ್ ದರವನ್ನು 600 ರೂಪಾಯಿ ಹಾಗೂ ಕೊವ್ಯಾಕ್ಸಿನ್ ಲಸಿಕೆಯ ಒಂದು ಡೋಸ್ ದರವನ್ನು 1200 ರೂಪಾಯಿಯಿಂದ 225 ರೂಪಾಯಿಗೆ ಕಡಿತಗೊಳಿಸಲಾಗಿದೆ. ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನಾವಲ್ಲಾ ಮತ್ತು ಭಾರತ್ ಬಯೋಟೆಕ್ ಸಹ-ಸಂಸ್ಥಾಪಕಿ ಸುಚಿತ್ರಾ ಎಲಾ ಅವರು ಕೇಂದ್ರ ಸರ್ಕಾರದ ಜೊತೆ ನಡೆಸಿದ ಚರ್ಚೆಯ ನಂತರ ಟ್ವಿಟರ್‌ನಲ್ಲಿ ಬೆಲೆ ಕಡಿತದ ಬಗ್ಗೆ ಘೋಷಿಸಿದ್ದಾರೆ. ದೇಶದ ಖಾಸಗಿ ಆಸ್ಪತ್ರೆಗಳಲ್ಲಿ ಭಾನುವಾರದಿಂದ ಬೂಸ್ಟರ್ ಡೋಸ್ ಲಸಿಕೆ ಲಭ್ಯವಾಗಲಿದೆ.

2ನೇ ಡೋಸ್ ಪಡೆದು 9 ತಿಂಗಳ ನಂತರ ಮುನ್ನೆಚ್ಚರಿಕೆ ಲಸಿಕೆ

2ನೇ ಡೋಸ್ ಪಡೆದು 9 ತಿಂಗಳ ನಂತರ ಮುನ್ನೆಚ್ಚರಿಕೆ ಲಸಿಕೆ

ದೇಶದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್ 10 ರಿಂದ ಕೋವಿಡ್-19 ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಘೋಷಿಸಿದೆ. ಆದರೆ 18 ವರ್ಷ ಮೇಲ್ಪಟ್ಟ ನೀವು ಎರಡನೇ ಡೋಸ್ ಲಸಿಕೆಯನ್ನು ಪಡೆದು 9 ತಿಂಗಳು ಕಳೆದಿದ್ದರೆ ಮಾತ್ರ, ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳುವುದಕ್ಕೆ ಅರ್ಹರಾಗಿರುತ್ತೀರಿ.

English summary
Central Govt Allows Private Centres To Charge Up To Rs 150 Above Covid-19 Booster Dose Vaccine Price.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X