ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ 6 ತಿಂಗಳು ವಿಸ್ತರಿಸಿದ ಕೇಂದ್ರ ಸರ್ಕಾರ

ನವದೆಹಲಿ, ಮಾರ್ಚ್ 26: ಕೋವಿಡ್-19 ಕಾಲದಲ್ಲಿ ಜಾರಿಗೊಳಿಸಿದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2022ರ ಸೆಪ್ಟೆಂಬರ್ ವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಘೋಷಿಸಿದ್ದಾರೆ.
ದೇಶದಲ್ಲಿ ಅಗತ್ಯವಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯವನ್ನು ನೀಡಲಾಗುತ್ತಿದೆ.

"ಭಾರತದ ಪ್ರತಿಯೊಬ್ಬ ನಾಗರಿಕನ ಶಕ್ತಿಯೇ ದೇಶದ ಶಕ್ತಿ ಆಗಿದೆ. ಈ ಶಕ್ತಿಯನ್ನು ಮತ್ತಷ್ಟು ಬಲಪಡಿಸಲು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಸೆಪ್ಟೆಂಬರ್ 2022 ರವರೆಗೆ ಇನ್ನೂ ಆರು ತಿಂಗಳವರೆಗೆ ಮುಂದುವರಿಸಲು ಸರ್ಕಾರ ನಿರ್ಧರಿಸಿದೆ. ದೇಶದ 80 ಕೋಟಿಗೂ ಹೆಚ್ಚು ಜನರು ಮೊದಲಿನಂತೆ ಇದರ ಲಾಭ ಪಡೆಯುತ್ತಿದ್ದಾರೆ," ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Central Govt extends free foodgrain distribution under PM Garib Kalyan Anna Yojana till Sep 2022

80 ಕೋಟಿ ಜನರಿಗೆ ಯೋಜನೆ ಪ್ರಯೋಜನ:
ಪ್ರಧಾನಿ ಮೋದಿ ನೇತೃತ್ವದಲ್ಲಿ ಶನಿವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ ಆರು ತಿಂಗಳವರೆಗೆ ಸುಮಾರು 80 ಕೋಟಿ ಜನರು ಈ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ.
ಕಳೆದ 2020ರ ಮಾರ್ಚ್ ತಿಂಗಳಿನಲ್ಲಿ ಮೊದಲ ಬಾರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಕೋವಿಡ್-19 ಕಾಲದಲ್ಲಿ ಬಡವರು ಹಾಗೂ ಸಾಮಾನ್ಯ ವರ್ಗದ ಜನರಿಗೆ ಆಹಾರ ಸೌಲಭ್ಯವನ್ನು ಒದಗಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯಡಿ, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಅಗತ್ಯವಿರುವ ನಾಗರಿಕರಿಗೆ ಉಚಿತ ಆಹಾರ ಧಾನ್ಯವನ್ನು ನೀಡಲಾಗುತ್ತದೆ. ಎಲ್ಲಾ ಪಡಿತರ ಚೀಟಿದಾರರು ಮತ್ತು ಅಂತ್ಯೋದಯ ಅನ್ನ ಯೋಜನೆಯಿಂದ ಗುರುತಿಸಲ್ಪಟ್ಟವರು ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು.

ಕೇಂದ್ರ ಸಚಿವ ಸಚಿವ ಪಿಯೂಷ್ ಗೋಯಲ್ ಟ್ವೀಟ್:
ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್, "ವಿಶ್ವದ ಅತಿದೊಡ್ಡ ಆಹಾರ ಭದ್ರತಾ ಕಾರ್ಯಕ್ರಮದ ಅಡಿಯಲ್ಲಿ, ಮೋದಿ ಸರ್ಕಾರವು ಪ್ರತಿಯೊಬ್ಬ ಬಡವರ ಒಲೆ ಉರಿಯುತ್ತಿರುತ್ತದೆ. ಯಾರೂ ಹಸಿವಿನಿಂದ ಬಳಲುತ್ತಿಲ್ಲ ಎಂಬುದನ್ನು ಖಚಿತಪಡಿಸಿದೆ. ಕೋವಿಡ್ ಅಂತ್ಯದ ಹೊರತಾಗಿಯೂ ಮೋದಿ ಸರ್ಕಾರವು ಸೆಪ್ಟೆಂಬರ್ 2022 ರವರೆಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ವಿಸ್ತರಿಸಿರುವುದು ಬಡವರ ಬಗ್ಗೆ ಅವರ ಸಂವೇದನೆಯನ್ನು ತೋರಿಸುತ್ತದೆ," ಎಂದು ಟ್ವೀಟ್ ಮಾಡಿದ್ದಾರೆ.
''ಮೋದಿ ಸರ್ಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರದ ಲಾಭವನ್ನು ಮುಂದಿನ 6 ತಿಂಗಳವರೆಗೆ ಸುಮಾರು 80 ಕೋಟಿ ಜನರು ಪಡೆಯಲಿದ್ದಾರೆ. ಕಳೆದ 2 ವರ್ಷಗಳಿಂದ ನಡೆಯುತ್ತಿರುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ, ಮೋದಿ ಸರ್ಕಾರವು ಒಟ್ಟು 3.4 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ 1,003 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ವಿತರಿಸಿದೆ, "ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+