ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದ ಶಾಕ್: ಪಿಎಫ್ಐ ವೆಬ್‌ಸೈಟ್, ಟ್ವಿಟ್ಟರ್, ಫೇಸ್ ಬುಕ್ ಖಾತೆಗಳೆಲ್ಲ ಲಾಕ್!

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 28: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಎಂಟು ಅಂಗಸಂಸ್ಥೆಗಳ ವೆಬ್‌ಸೈಟ್‌ಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿರುವ ಖಾತೆಗಳು ಮತ್ತು ವೆಬ್‌ಸೈಟ್ ಅನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪಿಎಫ್ಐ ಹಾಗೂ ಅಂಗಸಂಸ್ಥೆಗಳನ್ನು ನಿರ್ಬಂಧಿಸಿದ ಬೆನ್ನಲ್ಲೇ ಅದರ ಚಟುವಟಿಕೆಗಳು ಹಾಗೂ ಅದರ ಕುರಿತು ಪ್ರಚಾರ ಮಾಡುವುದನ್ನು ತಡೆಯುವಂತೆ ಸೂಚನೆ ನೀಡಲಾಗಿದೆ.

PFI Banned : ಭಾರತದಲ್ಲಿ ಪಿಎಫ್ಐ ಸೇರಿ 8 ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರPFI Banned : ಭಾರತದಲ್ಲಿ ಪಿಎಫ್ಐ ಸೇರಿ 8 ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ಟ್ವಿಟ್ಟರ್, ಫೇಸ್ ಬುಕ್, ಇನ್ ಸ್ಟಾಗ್ರಾಂ ಖಾತೆಗಳು, ಯೂಟ್ಯೂಬ್ ಚಾನಲ್‌ಗಳು ಅಥವಾ ಪಿಎಫ್ಐ, ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್ (ಕೇರಳ) ಆನ್‌ಲೈನ್ ಖಾತೆಯನ್ನು ಶಾಶ್ವತವಾಗಿ ನಿರ್ಬಂಧಿಸಲಾಗಿದೆ. ಈ ಹಿಂದೆ ಅವರು ಪೋಸ್ಟ್ ಮಾಡಿದ ವಿಷಯವನ್ನು ಸಹ ತೆಗೆದುಹಾಕಲಾಗುತ್ತಿದೆ.

ಪಿಎಫ್ಐ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲು ಆದೇಶ

ಪಿಎಫ್ಐ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲು ಆದೇಶ

ಈ ವರದಿಯನ್ನು ಸಲ್ಲಿಸುವ ಹೊತ್ತಿಗೆ ಪಿಎಫ್ಐ, ಆರ್‌ಐಎಫ್ ಮತ್ತು ಎಐಐಸಿ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲಾಗಿದೆ. ದೂರಸಂಪರ್ಕ ಇಲಾಖೆಯ ಆದೇಶದ ಮೇರೆಗೆ ಇತರ ಅಂಗಸಂಸ್ಥೆ ಅನ್ನು ನಿರ್ಬಂಧಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಗ ಭಯೋತ್ಪಾದಕ ಸಂಘಟನೆಯಾಗಿರುವ ಪಿಎಫ್‌ಐಗೆ ಸಂಬಂಧಿಸಿದ ಖಾತೆಗಳು ಅಥವಾ ಯಾವುದೇ ವಿಷಯವನ್ನು ತೆಗೆದುಹಾಕಲು ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ನಿರ್ದೇಶನಗಳನ್ನು ಕಳುಹಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪಿಎಫ್ಐ ಒಂದು ಕಾನೂನುಬಾಹಿರ ಸಂಘಟನೆ ಎಂದು ಘೋಷಣೆ

ಪಿಎಫ್ಐ ಒಂದು ಕಾನೂನುಬಾಹಿರ ಸಂಘಟನೆ ಎಂದು ಘೋಷಣೆ

ಪಾಪ್ಯೂಲರ್ ಫ್ರೆಂಟ್ ಆಫ್ ಇಂಡಿಯಾವನ್ನು "ಕಾನೂನುಬಾಹಿರ ಸಂಘಟನೆ" ಎಂದು ಘೋಷಿಸಲಾಗಿದೆ. ಆದ್ದರಿಂದ ಈ ಸಂಘಟನೆಯು ಯಾವುದೇ ರೀತಿಯ ಪತ್ರಿಕಾ ಹೇಳಿಕೆಗಳನ್ನು ನೀಡದಂತೆ ನಿರ್ಬಂಧಿಸಲಾಗಿದೆ. ಪಿಎಫ್‌ಐ, ಸಿಎಫ್‌ಐ, ಆರ್‌ಐಎಫ್ ಮತ್ತು ಇತರ ಅಂಗಸಂಸ್ಥೆಗಳಿಗೆ ಲಿಂಕ್ ಮಾಡಲಾದ ವಾಟ್ಸಾಪ್ ಖಾತೆಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಯಾವುದೇ ದೇಶ ವಿರೋಧಿ ಚಟುವಟಿಕೆಯನ್ನು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ನಕಲಿ ಖಾತೆಗಳ ವಿರುದ್ಧವೂ ಶಿಸ್ತುಕ್ರಮ

ನಕಲಿ ಖಾತೆಗಳ ವಿರುದ್ಧವೂ ಶಿಸ್ತುಕ್ರಮ

ಪಿಎಫ್ಐ ಅಥವಾ ಅದರ ಯಾವುದೇ ಅಂಗಸಂಸ್ಥೆಯು ತಮ್ಮ ಚಟುವಟಿಕೆಗಳಿಗೆ ಸಂಬಂಧಿಸಿದ ಸೋಷಿಯಲ್ ಮೀಡಿಯಾ ಖಾತೆಯನ್ನು ತೆರೆಯುವಂತಿಲ್ಲ. ನಕಲಿ ಖಾತೆಗಳ ಮೂಲಕ ತಮ್ಮ ಚಟುವಟಿಕೆಯನ್ನು ಮುಂದುವರಿಸಿದರೆ, ಅಥವಾ ವೆಬ್‌ಸೈಟ್‌ಗಳನ್ನು ತೆರೆದರೆ ಅದನ್ನು ನಿರ್ಬಂಧಿಸಬಹುದು. ಅದೇ ರೀತಿ ನಕಲಿ ಖಾತೆಗಳನ್ನು ತೆರೆದವರ ವಿರುದ್ಧ ಶಿಸ್ತಕ್ರಮ ತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪಿಎಫ್ಐ ಮೂಲಕ ಕಾನೂನುಬಾಹಿರ ಚಟುವಟಿಕೆ

ಪಿಎಫ್ಐ ಮೂಲಕ ಕಾನೂನುಬಾಹಿರ ಚಟುವಟಿಕೆ

ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ. ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಪೂರ್ವಾಗ್ರಹ ಪೀಡಿತವಾಗಿದೆ ಮತ್ತು ದೇಶದ ಸಾರ್ವಜನಿಕ ಶಾಂತಿ ಮತ್ತು ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಉಗ್ರವಾದವನ್ನು ಬೆಂಬಲಿಸುವ ಸಾಮರ್ಥ್ಯವನ್ನು ಹೊಂದಿದೆ. ದೇಶ ಮತ್ತು ಪಿಎಫ್ಐನ ಕೆಲವು ಸ್ಥಾಪಕ ಸದಸ್ಯರು ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ನಾಯಕರು ಮತ್ತು ಪಿಎಫ್ಐನ ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ (JMB) ನೊಂದಿಗೆ ಸಂಪರ್ಕವನ್ನು ಹೊಂದಿದೆ. ಇವೆರಡೂ ನಿಷೇಧಿತ ಸಂಸ್ಥೆಗಳಾಗಿವೆ. ಇದರ ಜೊತೆಗೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನಂತಹ ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ ಪಿಎಫ್ಐ ಅಂತಾರಾಷ್ಟ್ರೀಯ ಸಂಪರ್ಕಗಳಿಗೆ ಹಲವಾರು ನಿದರ್ಶನಗಳು ಸಿಗುತ್ತವೆ.

English summary
Central Govt orders to blocking of websites, social media accounts of popular front of india.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X