ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಸಿಡಿಎಸ್ ಅನಿಲ್ ಚೌಹಾಣ್‌ರಿಗೆ Z+ ಭದ್ರತೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 03: ಭಾರತದ ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್‌ರಿಗೆ ದೆಹಲಿ ಪೊಲೀಸರ 'Z+' ವರ್ಗದ ಸಶಸ್ತ್ರ ಭದ್ರತೆಯನ್ನು ಒದಗಿಸುವುದಾಗಿ ಕೇಂದ್ರ ಸರ್ಕಾರವು ಸೋಮವಾರ ತಿಳಿಸಿವೆ.

ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹುತಾತ್ಮರಾದ 9 ತಿಂಗಳ ನಂತರ ಜನರಲ್ ಅನಿಲ್ ಚೌಹಾಣ್‌ರನ್ನು ಭಾರತದ ನೂತನ ರಕ್ಷಣಾ ಸಿಬ್ಬಂದಿಯಾಗಿ ಅಧಿಕಾರ ವಹಿಸಿಕೊಂಡರು. ಇದಾಗಿ ಒಂದೇ ವಾರದಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MHA) ದೆಹಲಿ ಪೊಲೀಸರಿಗೆ ಈ ಕುರಿತು ಆದೇಶವನ್ನು ನೀಡಿದೆ.

Breaking; ಲೆ. ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಸಿಡಿಎಸ್ ಮುಖ್ಯಸ್ಥBreaking; ಲೆ. ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಸಿಡಿಎಸ್ ಮುಖ್ಯಸ್ಥ

ಕಳೆದ ಶುಕ್ರವಾರ ಭಾರತದ ಎರಡನೇ ಸಿಡಿಎಸ್ ಆಗಿ ಜನರಲ್ ಅನಿಲ್ ಚೌಹಾಣ್ ಅಧಿಕಾರ ವಹಿಸಿಕೊಂಡರು. ಸುಮಾರು 58 ಶಸ್ತ್ರಸಜ್ಜಿತ ದೆಹಲಿ ಪೊಲೀಸ್ ಸಿಬ್ಬಂದಿ ಚೌಹಾಣ್ ನಿವಾಸದಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಭದ್ರತೆ ಒದಗಿಸಲಾಗುತ್ತದೆ. ಮೂರು ಸೇವಾ ವಿಷಯಗಳಲ್ಲಿ ರಕ್ಷಣಾ ಸಚಿವರಿಗೆ ಪ್ರಧಾನ ಮಿಲಿಟರಿ ಸಲಹೆಗಾರರಾಗಿ ಮತ್ತು ಕಾರ್ಯದರ್ಶಿಯಾಗಿ ಮಿಲಿಟರಿ ವ್ಯವಹಾರಗಳ ಇಲಾಖೆಯ ಮುಖ್ಯಸ್ಥರಾಗಿದ್ದಾರೆ. ಚೀಫ್ಸ್ ಆಫ್ ಸ್ಟಾಫ್ ಕಮಿಟಿಯ (COSC) ಖಾಯಂ ಅಧ್ಯಕ್ಷರೂ ಆಗಿದ್ದಾರೆ. ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಜನರಲ್ ಅನಿಲ್ ಚೌಹಾಣ್ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅತ್ಯುನ್ನತ ಹುದ್ದೆಯ ಜವಾಬ್ದಾರಿ ವಹಿಸಿಕೊಳ್ಳಲು ಹೆಮ್ಮೆಪಡುತ್ತೇನೆ ಎಂದು ಹೇಳಿದ್ದರು.

40 ವರ್ಷದ ಅನುಭವ ಹೊಂದಿರುವ ಸಿಡಿಎಸ್ ಚೌಹಾಣ್

40 ವರ್ಷದ ಅನುಭವ ಹೊಂದಿರುವ ಸಿಡಿಎಸ್ ಚೌಹಾಣ್

ಮೇ 18, 1961 ರಂದು ಜನಿಸಿದ ಜನರಲ್ ಚೌಹಾಣ್ ಅವರನ್ನು 1981ರಲ್ಲಿ ಭಾರತೀಯ ಸೇನೆಯ 11 ಗೂರ್ಖಾ ರೈಫಲ್ಸ್‌ಗೆ ನಿಯೋಜಿಸಲಾಯಿತು. ಮೂರು ಮುಖ್ಯಸ್ಥರಾದ ಜನರಲ್ ಮನೋಜ್ ಪಾಂಡೆ, ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಮತ್ತು ಅಡ್ಮಿರಲ್ ಆರ್ ಹರಿ ಕುಮಾರ್ ಅವರನ್ನು ನಂತರ ತಮ್ಮ ಸೇವೆಗಳಿಗೆ ನಿಯೋಜಿಸಲಾಯಿತು.

ಸುಮಾರು 40 ವರ್ಷಗಳ ವೃತ್ತಿಜೀವನದಲ್ಲಿ ಜನರಲ್ ಅನಿಲ್ ಚೌಹಾಣ್ ಹಲವಾರು ಕಮಾಂಡ್, ಸಿಬ್ಬಂದಿ ನೇಮಕಾತಿ ಅಧಿಕಾರವನ್ನು ಹೊಂದಿದ್ದರು. ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ಭಾರತದಲ್ಲಿ ಬಂಡಾಯ-ವಿರೋಧಿ ಕಾರ್ಯಾಚರಣೆಗಳಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದರು.

2021ರಲ್ಲಿ ನಿವೃತ್ತಿ ಹೊಂದಿದ್ದ ಅನಿಲ್ ಚೌಹಾಣ್

2021ರಲ್ಲಿ ನಿವೃತ್ತಿ ಹೊಂದಿದ್ದ ಅನಿಲ್ ಚೌಹಾಣ್

ಲೆಫ್ಟಿನೆಂಟ್ ಜನರಲ್ ಆಗಿ ತಮ್ಮ ವೃತ್ತಿಜೀವನದ ನಂತರ ಈಶಾನ್ಯದಲ್ಲಿ ಕಾರ್ಪ್ಸ್ ಅನ್ನು ಕಮಾಂಡ್ ಮಾಡಿದರು. ನಂತರ ಅವರು ಸೆಪ್ಟೆಂಬರ್ 2019 ರಿಂದ ಈಸ್ಟರ್ನ್ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ನೇಮಕಗೊಂಡರು. ಮೇ 2021ರಲ್ಲಿ ಸೇವೆಯಿಂದ ನಿವೃತ್ತರಾಗುವವರೆಗೆ ಅನಿಲ್ ಚೌಹಾಣ್ ಅಧಿಕಾರವನ್ನು ಹೊಂದಿದ್ದರು. ಕಮಾಂಡ್ ನೇಮಕಾತಿಗಳ ಹೊರತಾಗಿ, ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್, ತಮ್ಮ ವೃತ್ತಿಜೀವನದಲ್ಲಿ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಸೇರಿದಂತೆ ಪ್ರಮುಖ ಸಿಬ್ಬಂದಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಅಂಗೋಲಾಕ್ಕೆ ವಿಶ್ವಸಂಸ್ಥೆಯ ಮಿಷನ್‌ನಲ್ಲಿ ಸೇವೆ

ಅಂಗೋಲಾಕ್ಕೆ ವಿಶ್ವಸಂಸ್ಥೆಯ ಮಿಷನ್‌ನಲ್ಲಿ ಸೇವೆ

ಅಂಗೋಲಾಕ್ಕೆ ವಿಶ್ವಸಂಸ್ಥೆಯ ಮಿಷನ್‌ನಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ಚೌಹಾಣ್ ಅವರು ಮೇ 31, 2021 ರಂದು ಭಾರತೀಯ ಸೇನೆಯಿಂದ ನಿವೃತ್ತರಾದರು. ಭಾರತೀಯ ಸೇನೆಯಿಂದ ನಿವೃತ್ತರಾದ ನಂತರವೂ ಹೊಸ ಸಿಡಿಎಸ್ ರಾಷ್ಟ್ರೀಯ ಭದ್ರತೆ ಮತ್ತು ಕಾರ್ಯತಂತ್ರದ ವಿಷಯಗಳಿಗೆ ಕೊಡುಗೆ ನೀಡುವುದನ್ನು ಮುಂದುವರೆಸಿದ್ದರು.

ಅನಿಲ್ ಚೌಹಾಣ್ ಸೇವೆಗೆ ಸಂದ ಪದಕ

ಅನಿಲ್ ಚೌಹಾಣ್ ಸೇವೆಗೆ ಸಂದ ಪದಕ

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರ ವಿಶಿಷ್ಟ ಮತ್ತು ಶ್ರೇಷ್ಠ ಸೇವೆಗಾಗಿ ಹಲವು ಪದಕಗಳನ್ನು ನೀಡಿ ಗೌರವಿಸಲಾಗಿದೆ. ಈ ಪೈಕಿ ಪರಮ ವಿಶಿಷ್ಟ ಸೇವಾ ಪದಕ, ಉತ್ತಮ ಯುದ್ಧ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ, ಸೇನಾ ಪದಕ ಮತ್ತು ವಿಶಿಷ್ಟ ಸೇವಾ ಪದಕಗಳನ್ನು ನೀಡಲಾಗಿದೆ.

English summary
Central Govt provides 'Z' category Delhi Police security cover to new CDS Anil Chauhan
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X