ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೇಸ್‌ಬುಕ್, ಟ್ವಿಟ್ಟರ್‌ನಲ್ಲಿ ಕಾಮೆಂಟ್ ಮಾಡಿದರೆ ಬಂಧಿಸಲ್ಲ

By Kiran B Hegde
|
Google Oneindia Kannada News

ನವದೆಹಲಿ, ಫೆ. 4: ಫೇಸ್‌ಬುಕ್, ಟ್ವಿಟ್ಟರ್‌ನಂತರ ಜನಪ್ರಿಯ ಸಾಮಾಜಿಕ ಜಾಲತಾಣದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದ್ದಾಗ ಆಕ್ಷೇಪಾರ್ಹ ಹೇಳಿಕೆ ಹಾಕಿದ ಆರೋಪದ ಮೇಲೆ ಹಲವರು ಬಂಧನಕ್ಕೊಳಗಾಗಿದ್ದಾರೆ. ಆದರೆ, ಇನ್ನು ಮುಂದೆ ಅಂತವರನ್ನು ಬಂಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಮಾಹಿತಿ ತಂತ್ರಜ್ಞಾನ ಕಾಯಿದೆಯ 66ಎ ಪರಿಚ್ಛೇದದಂತೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡುವುದು ಶಿಕ್ಷಾರ್ಹ ಅಪರಾಧ. ಆದರೆ, ಅವರನ್ನು ಬಂಧಿಸುವುದು ಅಭಿಪ್ರಾಯ ಸ್ವಾತಂತ್ರ್ಯದ ಹರಣ ಮಾಡಿದಂತೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಅಲ್ಲದೆ, ಈ ಕಾಯಿದೆಯನ್ನು ಅಧಿಕಾರಿಗಳು ದುರುಪಯೋಗ ಮಾಡಿಕೊಳ್ಳುವ ಆತಂಕ ವ್ಯಕ್ತವಾಗಿತ್ತು. [ಬೆಂಗಳೂರು ಪೊಲೀಸರಿಗೆ ಸುಪ್ರೀಂ ಚಾಟಿ]

facebook

ಸಾಮಾಜಿಕ ಜಾಲತಾಣದಲ್ಲಿ ವಾಕ್ ಸ್ವಾತಂತ್ರ್ಯ ರಕ್ಷಣೆಗೆ ಹಾಗೂ ಅಧಿಕಾರಿಗಳಿಂದ ಕಾನೂನು ದುರುಪಯೋಗ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಪ್ರಮಾಣಪತ್ರದಲ್ಲಿ ತಿಳಿಸಿದೆ. [ಸಾಮಾಜಿಕ ಜಾಲತಾಣದಲ್ಲಿ ವಿವೇಕ ಪ್ರಭೆ]

ಆದರೆ, ಸಾಮಾಜಿಕ ಜಾಲತಾಣ ಉಪಯೋಗಿಸಿಕೊಂಡು ಭಯೋತ್ಪಾದನೆ ಹಾಗೂ ಹಿಂಸೆಯನ್ನು ಹರಡುವವರು ಹೆಚ್ಚಾಗುತ್ತಿರುವ ಕಾರಣ ಕಾನೂನು ಬಿಗಿಗೊಳಿಸಲು ಆಗ್ರಹ ಕೇಳಿಬಂದಿತ್ತು. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಫೇಸ್‌ಬುಕ್‌ನಲ್ಲಿ ಕಾಮೆಂಟ್ ಮಾಡಿದವರನ್ನು ಬಂಧಿಸಿದ ಹಲವು ಪ್ರಕರಣಗಳು ವಿವಾದಕ್ಕೊಳಗಾಗಿದ್ದವು.

English summary
Central government in a significant statement told the Supreme Court that posting messages on Facebook or Twitter relating to freedom of expression will not be seen as an offence.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X