• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Breaking: ಅಬಕಾರಿ ಸುಂಕ ಕಡಿತ; ಪೆಟ್ರೋಲ್ ಬೆಲೆ 9.5ರೂ., ಡೀಸೆಲ್ ಬೆಲೆ 7 ರೂ. ಇಳಕೆ

|
Google Oneindia Kannada News

ನವದೆಹಲಿ, ಮೇ 21: ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕಗಳನ್ನು ಇಳಿಕೆ ಮಾಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕದಲ್ಲಿ ಎಂಟು ರೂ, ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕದಲ್ಲಿ ಆರು ರೂ ಇಳಿಕೆ ಮಾಡಲಾಗಿದೆ. ಇದರೊಂದಿಗೆ ನಿರಂತರ ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನಸಾಮಾನ್ಯ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.

ಕೇಂದ್ರದ ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್ ಬೆಲೆ ಲೀಟರ್‌ಗೆ 9.5 ರೂ ಕಡಿಮೆ ಆಗಲಿದೆ. ಡೀಸೆಲ್ ಬೆಲೆಯಲ್ಲಿ ಎಳು ರೂ ಇಳಿಕೆ ಆಗುತ್ತದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಈ ವಿಚಾರವನ್ನು ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಕ್ರಮದಿಂದ ಸರಕಾರಕ್ಕೆ ಒಂದು ವರ್ಷದಲ್ಲಿ ಒಂದು ಲಕ್ಷ ರೂ ಆದಾಯಕ್ಕೆ ಖೋತಾ ಆಗಲಿದೆ ಎಂದೂ ಅವರು ತಿಳಿಸಿದ್ದಾರೆ.

ಮೇ 21ರಂದು ಕರ್ನಾಟಕದ ಯಾವ ಜಿಲ್ಲೆಯಲ್ಲಿ ಎಷ್ಟಿದೆ ಪೆಟ್ರೋಲ್-ಡೀಸೆಲ್ ದರ?ಮೇ 21ರಂದು ಕರ್ನಾಟಕದ ಯಾವ ಜಿಲ್ಲೆಯಲ್ಲಿ ಎಷ್ಟಿದೆ ಪೆಟ್ರೋಲ್-ಡೀಸೆಲ್ ದರ?

ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಧ್ಯೆ ಜಟಾಪಟಿ ನಡೆದಿತ್ತು. ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಸುವಂತೆ ಕೆಲ ರಾಜ್ಯ ಸರಕಾರಗಳು ಮತ್ತು ವಿಪಕ್ಷ ನಾಯಕರು ಒತ್ತಾಯಿಸಿದ್ದರು. ಅದರ ಬೆನ್ನಲ್ಲೇ ಕೇಂದ್ರದಿಂದ ಈ ನಿರ್ಧಾರ ಬಂದಿದೆ.

ಗ್ಯಾಸ್ ಸಿಲಿಂಡರ್‌ಗೆ 200 ರೂ ಸಬ್ಸಿಡಿ:
ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಪ್ರತೀ ಅಡುಗೆ ಅನಿಲದ ಸಿಲಿಂಡರ್‌ಗೆ 200 ರೂ ಸಬ್ಸಿಡಿ ಕೊಡಲು ಕೇಂದ್ರ ನಿರ್ಧರಿಸಿದೆ. ಒಂದು ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಮಾತ್ರ ಸಬ್ಸಿಡಿ ಸಿಗುತ್ತದೆ. ಒಂದು ಒಂಬತ್ತು ಕೋಟಿ ಫಲಾನುಭವಿಗಳಿದ್ದಾರೆ. ಈ ಸಬ್ಸಿಡಿ ಕ್ರಮದಿಂದ ಕೇಂದ್ರಕ್ಕೆ ಒಂದು ವರ್ಷದಲ್ಲಿ ೬೧೦೦ ಕೋಟಿ ರೂ ಆದಾಯ ನಷ್ಟ ಆಗಲಿದೆ.

(ಒನ್ಇಂಡಿಯಾ ಸುದ್ದಿ)

English summary
Central govt has reduced excise tax on Petrol and Diese by Rs 8 and 6 respectively.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X