• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸುಮ್ನಿರಿ ಸಾರ್; ಕೊರೊನಾ ಲಸಿಕೆ ಬಗ್ಗೆ ಸುಳ್ ಹೇಳಿದ್ರೆ ಶಿಕ್ಷೆ ಪಕ್ಕಾ

|

ನವದೆಹಲಿ, ಜನವರಿ.25: ಭಾರತದಲ್ಲಿ ನೀಡುತ್ತಿರುವ ಕೊರೊನಾವೈರಸ್ ಲಸಿಕೆಗಳ ಬಗ್ಗೆ ತಪ್ಪು ಮಾಹಿತಿ ಮತ್ತು ವದಂತಿಗಳನ್ನು ಹರಡಿಸುತ್ತಿರುವವರ ವಿರುದ್ಧ ಕಾನೂನುಬದ್ಧ ಶಿಸ್ತುಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರವು ಎಚ್ಚರಿಕೆ ನೀಡಿದೆ.

ಕೊವಿಡ್-19 ಲಸಿಕೆಗಳ ಕುರಿತು ಜನರ ದಾರಿ ತಪ್ಪಿಸಲು ಯತ್ನಿಸಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಈ ಕುರಿತು ಕೇಂದ್ರ ಸರ್ಕಾರವು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತಗಳ ಸರ್ಕಾರದ ಕಾರ್ಯದರ್ಶಿಗಳಿಗೆ ಸೂಚನೆ ಪತ್ರವನ್ನು ರವಾನಿಸಿದೆ.

ಒಮ್ಮೆ ಕೊರೊನಾ ಲಸಿಕೆ ಪಡೆದ ನಂತರ ಮುಂದೆ ಏನು ಮಾಡಬೇಕು?

ದೇಶದಲ್ಲಿ ಅನುಮೋದನೆ ಪಡೆದಿರುವ ಎರಡೂ ಲಸಿಕೆಗಳು ಸುರಕ್ಷಿತವಾಗಿದ್ದು, ರೋಗ ನಿರೋಧಕಶಕ್ತಿಯನ್ನು ಹೊಂದಿವೆ. ಅದರ ಬಗ್ಗೆ ಪಟ್ಟಭದ್ರ ಹಿತಾಸಕ್ತಿಗಳು ವದಂತಿ ಹರಡಿಸುವುದರಿಂದ ಜನರಲ್ಲಿ ಸುಖಾಸುಮ್ಮನೆ ಅನುಮಾನಗಳು ಹುಟ್ಟಿಕೊಳ್ಳುತ್ತವೆ. ಆದ್ದರಿಂದ ಭಯ ಈ ರೀತಿ ಭಯ ಹುಟ್ಟಿಸುವಂತಾ ಎಲ್ಲ ವದಂತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಲಸಿಕೆ ಬಗ್ಗೆ ಸುಳ್ಳು ವದಂತಿಗಳ ಮೇಲೆ ಕಣ್ಣು

ಲಸಿಕೆ ಬಗ್ಗೆ ಸುಳ್ಳು ವದಂತಿಗಳ ಮೇಲೆ ಕಣ್ಣು

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಲಸಿಕೆಗೆ ಸಂಬಂಧಿಸಿದಂತೆ ಯಾವುದೇ ರೀತಿ ಸುಳ್ಳು ವದಂತಿಗಳನ್ನು ಹರಡಿಸುವಂತಿಲ್ಲ. ಈ ರೀತಿ ತಪ್ಪು ಸಂದೇಶಗಳನ್ನು ಹರಡುತ್ತಿದ್ದಲ್ಲಿ ಅಂಥದರ ಬಗ್ಗೆ ನಿಗಾ ವಹಿಸಬೇಕು. ಸಾಂಕ್ರಾಮಿಕ ರೋಗ ನಿರ್ವಹಣಾ ಕಾಯ್ದೆ, ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇದರ ಜೊತೆಗೆ ಜನರಲ್ಲಿ ಸರಿಯಾದ ಮಾಹಿತಿ ನೀಡುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಕಚೇರಿಯಿಂದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಲಾಗಿತ್ತು.

ದೇಶದಲ್ಲಿ ಎರಡು ಕಂಪನಿ ಲಸಿಕೆಗಳಿಗೆ ಅನುಮೋದನೆ

ದೇಶದಲ್ಲಿ ಎರಡು ಕಂಪನಿ ಲಸಿಕೆಗಳಿಗೆ ಅನುಮೋದನೆ

ಕೊರೊನಾವೈರಸ್ ಸೋಂಕಿಗಾಗಿ ದೇಶದಲ್ಲಿ ಎರಡು ಕಂಪನಿಯ ಲಸಿಕೆಗಳಿಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಜ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಸಂಸ್ಥೆ ಸಂಶೋಧಿಸಿರುವ ಮಹಾರಾಷ್ಟ್ರದ ಪುಣೆಯಲ್ಲಿರುವ ಸೆರಮ್ ಇನ್ಸ್ ಟಿಟ್ಯೂಟ್ ನಲ್ಲಿ ಉತ್ಪಾದಿಸಲಾಗುತ್ತಿರುವ ಕೊವಿಶೀಲ್ಡ್ ಲಸಿಕೆ ಒಂದಾಗಿದೆ. ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಮತ್ತೊಂದು ಲಸಿಕೆಯಾಗಿದೆ. ಎರಡು ಲಸಿಕೆಗಳನ್ನು ದೇಶದ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಕೊವಿಡ್-19 ಯೋಧರಿಗೆ ನೀಡುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ಜನವರಿ.16ರಂದು ಚಾಲನೆ ನೀಡಿದರು.

ಕೊವ್ಯಾಕ್ಸಿನ್ ಲಸಿಕೆ ಬಗ್ಗೆ ಜನರಲ್ಲಿ ಏಕೆ ಆತಂಕ?

ಕೊವ್ಯಾಕ್ಸಿನ್ ಲಸಿಕೆ ಬಗ್ಗೆ ಜನರಲ್ಲಿ ಏಕೆ ಆತಂಕ?

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ಮೇಲೆ ಮೂರನೇ ಹಂತದ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ವೈದ್ಯಕೀಯ ಪರೀಕ್ಷೆ ಪೂರ್ಣಗೊಳ್ಳದ ಹೊರತಾಗಿ ಅನುಮೋದನೆ ನೀಡಿದ್ದು ಏಕೆ ಎಂಬ ಪ್ರಶ್ನೆ ಕೇಳಲಾಗುತ್ತಿದೆ. ಆದರೆ ಎರಡು ಹಂತಗಳ ವೈದ್ಯಕೀಯ ಪರೀಕ್ಷೆಯಲ್ಲಿಯೇ ಕೊವ್ಯಾಕ್ಸಿನ್ ಲಸಿಕೆಯು ಸುರಕ್ಷಿತ ಎಂಬುದು ಸಾಬೀತಾಗಿದೆ. ಎರಡೂ ಲಸಿಕೆಗಳು ಶೇ.100ಕ್ಕೆ ಶೇ.110ರಷ್ಟು ಲಸಿಕೆಗಳು ಸುರಕ್ಷಿತ ಹಾಗೂ ಪರಿಣಾಮಕಾರಿಯಾಗಿದೆ ಎಂದು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ವಿ.ಜಿ. ಸೋಮನಿ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡವರೆಷ್ಟು?

ದೇಶದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡವರೆಷ್ಟು?

ಕೊವ್ಯಾಕ್ಸಿನ್ ಲಸಿಕೆ ಪಡೆಯುವಲ್ಲಿ ಆರೋಗ್ಯ ಸಿಬ್ಬಂದಿಯ ಆತಂಕದ ನಡುವೆಯೂ 11 ದಿನಗಳಲ್ಲೇ 15 ಲಕ್ಷ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಜನವರಿ.16ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಮೊದಲು ಚಾಲನೆ ನೀಡಿದ್ದರು. 15,37,190 ಕೊರೊನಾ ಯೋಧರಿಗೆ ಲಸಿಕೆ ನೀಡಲಾಗಿದ್ದು, ದೇಶಾದ್ಯಂತ 27,776 ಕೊವಿಡ್-19 ಲಸಿಕೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಲಸಿಕೆ ನೀಡುವಲ್ಲಿ ವೈದ್ಯಕೀಯ ಸಿಬ್ಬಂದಿಗೆ ಆದ್ಯತೆ

ಲಸಿಕೆ ನೀಡುವಲ್ಲಿ ವೈದ್ಯಕೀಯ ಸಿಬ್ಬಂದಿಗೆ ಆದ್ಯತೆ

ಮೊದಲ ಹಂತದಲ್ಲಿ ದೇಶದ 3 ಕೋಟಿ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೊವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡುವ ಗುರಿ ಹೊಂದಲಾಗಿದೆ. ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ 27 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ವಿಶ್ವದಾದ್ಯಂತ ಕೊರೊನಾವೈರಸ್ ಸೋಂಕಿನ ವಿರುದ್ಧ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಜಗತ್ತಿನಲ್ಲೇ ಮೊದಲ ಬಾರಿಗೆ ಕ್ಷಿಪ್ರಗತಿಯಲ್ಲಿ ಲಸಿಕೆ ಅಭಿಯಾನ ನಡೆಸಲಾಗುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಮತ್ತು ಇಸ್ರೇಲ್ ನಲ್ಲಿ 10 ಲಕ್ಷ ಜನರಿಗೆ ಲಸಿಕೆ ನೀಡಲು 10 ದಿನಗಳನ್ನು ತೆಗೆದುಕೊಳ್ಳಲಾಗಿದೆ.

English summary
Central Govt Warns Of Action Against Those Spreading Rumours About Covid-19 Vaccines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X