ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

India Unlock 2.0: ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳೇ ಪರೀಕ್ಷೆಗೆ ಸಿದ್ಧರಾಗಿ!

|
Google Oneindia Kannada News

ನವದೆಹಲಿ, ಜುಲೈ.06: ಭಾರತದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ವಿಶ್ವವಿದ್ಯಾಲಯ ಹಾಗೂ ಶೈಕ್ಷಣಿಕ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವುದಕ್ಕೆ ಕೇಂದ್ರ ಗೃಹ ಸಚಿವಾಲಯವು ಸೋಮವಾರ ಅನುಮತಿ ನೀಡಿದೆ.

Recommended Video

Bubonic Plague Says Hello China:ಚೀನಾದಲ್ಲಿ 'ಬುಬೊನಿಕ್ ಪ್ಲೇಗ್' ಮಾರಣಾಂತಿಕ ರೋಗ ಪತ್ತೆ| Oneindia Kannada

ಅನ್ ಲಾಕ್ 2.0 ಅವಧಿಯಲ್ಲಿಯೇ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅಡಿಯಲ್ಲಿ ನಿಯಮಗಳನ್ನು ಪಾಲಿಸಿ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿಯವರಿಗೆ ಕಳುಹಿಸಿದ ಪತ್ರದಲ್ಲಿ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳಿಗೆ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡುವ ಬಗ್ಗೆ ಉಲ್ಲೇಖಿಸಲಾಗಿದೆ.

ಮೊದಲು ಕಾಲೇಜು, ಪ್ರೌಢಶಾಲೆ, ಕೊನೆಗೆ ಪ್ರಾಥಮಿಕ ಶಾಲೆ ಓಪನ್ಮೊದಲು ಕಾಲೇಜು, ಪ್ರೌಢಶಾಲೆ, ಕೊನೆಗೆ ಪ್ರಾಥಮಿಕ ಶಾಲೆ ಓಪನ್

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮತ್ತು ಶೈಕ್ಷಣಿಕ ಕ್ಯಾಲೆಂಡರ್ ಕುರಿತು ಯುಜಿಸಿ ಮಾರ್ಗಸೂಚಿಗಳು ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅನುಮೋದಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ನಿಯಮಗಳ ಅಡಿಯಲ್ಲಿ ಕಡ್ಡಾಯವಾಗಿ ಪರೀಕ್ಷೆಗಳನ್ನು ನಡೆಸಲು ಸೂಚಿಸಲಾಗಿದೆ.

Central Ministry Of Home Affairs Allows Universities To Conduct Exams

ಮಾರ್ಚ್ ತಿಂಗಳಿನಿಂದ ಪರೀಕ್ಷೆಗಳು ಮುಂದೂಡಿಕೆ:

ಕೊರೊನಾವೈರಸ್ ಹರಡುವಿಕೆ ಭೀತಿ ಹಾಗೂ ಲಾಕ್ ಡೌನ್ ಘೋಷಣೆಯಿಂದಾಗಿ ಕಳೆದ ಮಾರ್ಚ್.25ರಿಂದ ವಿಶ್ವವಿದ್ಯಾಲಯ ಹಾಗೂ ಶೈಕ್ಷಣಿಕ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ನಡೆಸುವ ಪರೀಕ್ಷೆಗಳನ್ನು ಮುಂದೂಡಿಕೆ ಮಾಡುತ್ತದೆ ಬರಲಾಗುತ್ತಿತ್ತು.

ಕೋವಿಡ್ ಸೇವೆ: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ NEET + 5 ಅಂಕಕೋವಿಡ್ ಸೇವೆ: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ NEET + 5 ಅಂಕ

ಜೂನ್.01ರಿಂದ ಭಾರತದಲ್ಲಿ 31 ದಿನಗಳವರೆಗೂ ಅನ್ ಲಾಕ್ 1.0 ಜಾರಿಗೊಳಿಸಲಾಗಿತ್ತು. ಕಳೆದ ಜುಲೈ.01ರಿಂದ ದೇಶದಲ್ಲಿ ಇದೀಗ ಅನ್ ಲಾಕ್ 2.0 ಘೋಷಿಸಲಾಗಿದ್ದು, ಜುಲೈ ತಿಂಗಳಾಂತ್ಯದವರೆಗೂ ಇದು ಜಾರಿಯಲ್ಲಿರುತ್ತದೆ. ಕಂಟೇನ್ಮೆಂಟ್ ಝೋನ್ ಗಳನ್ನು ಹೊರತುಪಡಿಸಿದಂತೆ ಉಳಿದ ಪ್ರದೇಶಗಳಲ್ಲಿ ಹಲವು ರೀತಿಯ ಕಾರ್ಯಚಟುವಟಿಕೆಗಳಿಗೆ ಕೇಂದ್ರ ಸರ್ಕಾರವು ಅನುಮತಿ ನೀಡಿದೆ. ಆದರೆ ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಹಾಗೂ ಶೈಕ್ಷಣಿಕ ಸಂಸ್ಥೆಗಳನ್ನು ಆರಂಭಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

English summary
India Unlock 2.0: Central Ministry Of Home Affairs Allows Universities To Conduct Exams.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X