2021ರ ಜನವರಿಯಲ್ಲಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ
ನವದೆಹಲಿ, ನವೆಂಬರ್ 04: ಮುಂದಿನ ವರ್ಷದ ಜನವರಿ 31 ರಂದು ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.
ಕೊವಿಡ್ ಸಾಂಕ್ರಾಮಿಕದಿಂದಾಗಿ ಜುಲೈ 5 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ಕೊವಿಡ್-19 ಕಾರಣದಿಂದ ಪರೀಕ್ಷೆ ನಡೆಯುವ ನಗರದ ಬದಲಾವಣೆಗೆ ಅಸಂಖ್ಯಾತ ಅಭ್ಯರ್ಥಿಗಳಿಂದ ಮನವಿ ಸ್ವೀಕರಿಸಲಾಗಿದ್ದು, ಕೊವಿಡ್-19 ಕಾರಣದಿಂದಾಗಿ ಅಭ್ಯರ್ಥಿಗಳು ಎದುರಿಸುತ್ತಿರುವ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪರೀಕ್ಷೆಯಲ್ಲಿ ಹಾಜರಾಗಲು ಬಯಸುವ ಅಭ್ಯರ್ಥಿಗಳಿಗೆ ನಗರದ ಆಯ್ಕೆಯಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಒಂದು ಬಾರಿ ಅವಕಾಶ ನೀಡಲು ಸಿಬಿಎಸ್‌ಇ ನಿರ್ಧರಿಸಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

14 ನೇ ಆವೃತ್ತಿಯ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ಜುಲೈನಲ್ಲಿ ದೇಶಾದ್ಯಂತ 112 ನಗರಗಳಲ್ಲಿ ನಡೆಯಬೇಕಿತ್ತು. ಆದರೆ, ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲ್ಪಟ್ಟಿದ್ದು, ಈ ಪರೀಕ್ಷೆಯನ್ನು ಇದೀಗ ಮುಂದಿನ ವರ್ಷದ ಜನವರಿ 31 ರಂದು ನಡೆಸಲಾಗುವುದು ಎಂದು ನಿಶಾಂಕ್ ಹೇಳಿದ್ದಾರೆ.
ಸಾಮಾಜಿಕ ಅಂತರ ಮತ್ತಿತರ ಸುರಕ್ಷತಾ ಕ್ರಮಗಳೊಂದಿಗೆ 135 ನಗರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.












Click it and Unblock the Notifications