ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2021ರ ಜನವರಿಯಲ್ಲಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ

|
Google Oneindia Kannada News

ನವದೆಹಲಿ, ನವೆಂಬರ್ 04: ಮುಂದಿನ ವರ್ಷದ ಜನವರಿ 31 ರಂದು ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

ಕೊವಿಡ್ ಸಾಂಕ್ರಾಮಿಕದಿಂದಾಗಿ ಜುಲೈ 5 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ಐಎಎಸ್ & ಕೆಎಎಸ್ ಪರೀಕ್ಷೆ ತರಬೇತಿಗೆ ಹೆಸರು ನೋಂದಾಯಿಸಿ ಐಎಎಸ್ & ಕೆಎಎಸ್ ಪರೀಕ್ಷೆ ತರಬೇತಿಗೆ ಹೆಸರು ನೋಂದಾಯಿಸಿ

ಕೊವಿಡ್-19 ಕಾರಣದಿಂದ ಪರೀಕ್ಷೆ ನಡೆಯುವ ನಗರದ ಬದಲಾವಣೆಗೆ ಅಸಂಖ್ಯಾತ ಅಭ್ಯರ್ಥಿಗಳಿಂದ ಮನವಿ ಸ್ವೀಕರಿಸಲಾಗಿದ್ದು, ಕೊವಿಡ್-19 ಕಾರಣದಿಂದಾಗಿ ಅಭ್ಯರ್ಥಿಗಳು ಎದುರಿಸುತ್ತಿರುವ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪರೀಕ್ಷೆಯಲ್ಲಿ ಹಾಜರಾಗಲು ಬಯಸುವ ಅಭ್ಯರ್ಥಿಗಳಿಗೆ ನಗರದ ಆಯ್ಕೆಯಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಒಂದು ಬಾರಿ ಅವಕಾಶ ನೀಡಲು ಸಿಬಿಎಸ್‌ಇ ನಿರ್ಧರಿಸಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Central Teacher Eligibility Test To Be Held On Jan 31, 2021

14 ನೇ ಆವೃತ್ತಿಯ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ಜುಲೈನಲ್ಲಿ ದೇಶಾದ್ಯಂತ 112 ನಗರಗಳಲ್ಲಿ ನಡೆಯಬೇಕಿತ್ತು. ಆದರೆ, ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲ್ಪಟ್ಟಿದ್ದು, ಈ ಪರೀಕ್ಷೆಯನ್ನು ಇದೀಗ ಮುಂದಿನ ವರ್ಷದ ಜನವರಿ 31 ರಂದು ನಡೆಸಲಾಗುವುದು ಎಂದು ನಿಶಾಂಕ್ ಹೇಳಿದ್ದಾರೆ.

ಸಾಮಾಜಿಕ ಅಂತರ ಮತ್ತಿತರ ಸುರಕ್ಷತಾ ಕ್ರಮಗಳೊಂದಿಗೆ 135 ನಗರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.

English summary
The Central Teacher Eligibility Test (CTET), which was postponed due to the COVID-19 pandemic, will now be held on January 31 next year, Union Education Minister Ramesh Pokhriyal 'Nishank' said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X