ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಚ್ಚುತ್ತಿರುವ ಕೊರೊನಾ: ಮಹಾರಾಷ್ಟ್ರ, ಪಂಜಾಬ್‌ಗೆ ಕೇಂದ್ರ ತಂಡ ಭೇಟಿ

|
Google Oneindia Kannada News

ನವದೆಹಲಿ, ಮಾರ್ಚ್ 06: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಎರಡು ರಾಜ್ಯಗಳಿಗೆ ಕೇಂದ್ರದ ತಂಡ ಭೇಟಿ ನೀಡಲಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳಂತೆ, ಕಳೆದ ಒಂದು ದಿನದಲ್ಲಿ ದೇಶದಲ್ಲಿ 18,327 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,11,92,000 ಕ್ಕೆ ತಲುಪಿದೆ.

ಮಹಾರಾಷ್ಟ್ರ, ಪಂಜಾಬ್ ಮತ್ತು ಕರ್ನಾಟಕ ಸೇರಿದಂತೆ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕೇರಳದಲ್ಲಿ ಪ್ರಕರಣಗಳ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿದೆ.

ಕೊರೊನಾ ಹೆಚ್ಚಾದ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮ ಚುರುಕುಗೊಳಿಸಲು ಸೂಚನೆಕೊರೊನಾ ಹೆಚ್ಚಾದ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮ ಚುರುಕುಗೊಳಿಸಲು ಸೂಚನೆ

ಕಳೆದ ಒಂದು ದಿನದಲ್ಲಿ 14,234 ಸೋಂಕಿತರು ಚೇತರಿಸಿಕೊಳ್ಳುವುದರೊಂದಿಗೆ ಗುಣಮುಖರಾದವರ ಒಟ್ಟು ಸಂಖ್ಯೆ 1,08,54,128 ಕ್ಕೆ ತಲುಪಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರು ಹೆಚ್ಚು

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರು ಹೆಚ್ಚು

ಕಳೆದ ಒಂದು ದಿನದಲ್ಲಿ ಮಹಾರಾಷ್ಟ್ರದಲ್ಲಿ 3,696 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 90,055 ಕ್ಕೆ ತಲುಪಿದೆ. ಇದೇ ಸಮಯದಲ್ಲಿ ಕೇರಳದಲ್ಲಿ 878 ಪ್ರಕರಣಗಳು ಕಡಿಮೆ ವರದಿಯಾಗಿದ್ದು, ಸದ್ಯ, ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 43,856 ರಷ್ಟಿದೆ.

ಮಹಾರಾಷ್ಟ್ರ, ಪಂಜಾಬ್ ಗೆ ಕೇಂದ್ರ ತಂಡ

ಮಹಾರಾಷ್ಟ್ರ, ಪಂಜಾಬ್ ಗೆ ಕೇಂದ್ರ ತಂಡ

ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಮಹಾರಾಷ್ಟ್ರ ಮತ್ತು ಪಂಜಾಬ್ ಗೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ಬಹು-ಶಿಸ್ತಿನ ಸಾರ್ವಜನಿಕ ಆರೋಗ್ಯ ತಂಡಗಳನ್ನು ಕಳುಹಿಸಿದೆ. ಕೊರೊನಾ ವೈರಸ್ ಕಣ್ಗಾವಲು, ನಿಯಂತ್ರಣ ಮತ್ತು ಕಂಟೈನ್ ಮೆಂಟ್ ಕ್ರಮಗಳಿಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಇಲಾಖೆಗಳಿಗೆ ಸಹಾಯ ಮಾಡಲು ಈ ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೊರೊನಾ ಲಸಿಕೆ ಪಡೆಯಲು ಧೈರ್ಯ ಮಾಡಿ; ದಲೈ ಲಾಮಾ ಕರೆಕೊರೊನಾ ಲಸಿಕೆ ಪಡೆಯಲು ಧೈರ್ಯ ಮಾಡಿ; ದಲೈ ಲಾಮಾ ಕರೆ

ಕೇರಳದಲ್ಲೂ ಕೊರೊನಾ ಸೋಂಕು ಹೆಚ್ಚಳ

ಕೇರಳದಲ್ಲೂ ಕೊರೊನಾ ಸೋಂಕು ಹೆಚ್ಚಳ

ಕಳೆದ 24 ಗಂಟೆಗಳಲ್ಲಿ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕ್ರಮವಾಗಿ 6,467 ಮತ್ತು 3,638 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ವೈರಸ್‌ಗೆ ಹೆಚ್ಚು ತುತ್ತಾಗುವ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕೇರಳ ಎರಡನೇ ಸ್ಥಾನದಲ್ಲಿದೆ.

ಎಲ್ಲೆಲ್ಲಿ ಕೊರೊನಾ ಅಧಿಕ

ಎಲ್ಲೆಲ್ಲಿ ಕೊರೊನಾ ಅಧಿಕ

ಇದೇ ಅವಧಿಯಲ್ಲಿ ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ದೆಹಲಿ, ಹರಿಯಾಣ ಮತ್ತು ಗುಜರಾತ್ ಸೇರಿದಂತೆ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಕರಣಗಳು ಹೆಚ್ಚಿವೆ. ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 53 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪಂಜಾಬ್‌ನಲ್ಲಿ 397, ಕರ್ನಾಟಕದಲ್ಲಿ 246 ಮತ್ತು ದೆಹಲಿಯಲ್ಲಿ 78 ಸಕ್ರಿಯ ಪ್ರಕರಣಗಳು ಅಧಿಕವಾಗಿವೆ.

English summary
As Maharashtra and Punjab continue to see an upsurge in daily Covid-19 cases, Centre has despatched high-level multi-disciplinary public health teams, the Health Ministry informed on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X