ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾವ ರಾಜ್ಯಗಳಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದೆ?

|
Google Oneindia Kannada News

ನವದೆಹಲಿ, ಜುಲೈ 12: ದೇಶದ ಕೊರೊನಾ ಪ್ರಕರಣಗಳಲ್ಲಿ ಮತ್ತೆ ಕೆಲ ದಿನಗಳಿಂದ ಕೊಂಚ ಏರಿಕೆ ಕಂಡುಬರುತ್ತಿದ್ದು, ಕೆಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಇಂಥ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ನಿಯಂತ್ರಣ ಮಾಡಲು ಕೇಂದ್ರವು ತಳಮಟ್ಟದಿಂದ ಪ್ರಯತ್ನ ಮಾಡುತ್ತಿರುವುದಾಗಿ ನೂತನವಾಗಿ ಆಯ್ಕೆಯಾಗಿರುವ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿರುವ ಕುರಿತು ಮಾತನಾಡಿರುವ ಅವರು, "ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ನಿರಂತರವಾಗಿ ಪರಿಸ್ಥಿತಿ ಮೇಲೆ ನಿಗಾವಹಿಸಲಾಗಿದೆ. ರಾಜ್ಯಗಳಿಂದ ಪ್ರತಿ ಮಾಹಿತಿಯನ್ನೂ ಕಲೆಹಾಕಲಾಗುತ್ತಿದೆ" ಎಂದು ತಿಳಿಸಿದರು. ಮುಂದೆ ಓದಿ...

 ಕೊರೊನಾ ತಡೆಗೆ ಇನ್ನಷ್ಟು ಕ್ರಮ

ಕೊರೊನಾ ತಡೆಗೆ ಇನ್ನಷ್ಟು ಕ್ರಮ

"ದೇಶದಲ್ಲಿ ಕೊರೊನಾ ಹರಡುವಿಕೆ ತಡೆಗೆ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ದಿನನಿತ್ಯ ಈ ಬಗ್ಗೆ ಹಲವು ಸಭೆಗಳನ್ನು ನಡೆಸುತ್ತಿದ್ದು, ರಾಜ್ಯಾದ್ಯಂತ ಕೊರೊನಾ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಯಾವ್ಯಾವ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದೆಯೋ ಅಲ್ಲಿ ತಜ್ಞರ ತಂಡವನ್ನು ಕಳುಹಿಸಲಾಗುತ್ತಿದೆ" ಎಂದು ಪವಾರ್ ಹೇಳಿದರು.

ಭಾರತದಲ್ಲಿ 3 ಕೋಟಿ ಕೊರೊನಾವೈರಸ್ ಸೋಂಕಿತರು ಗುಣಮುಖಭಾರತದಲ್ಲಿ 3 ಕೋಟಿ ಕೊರೊನಾವೈರಸ್ ಸೋಂಕಿತರು ಗುಣಮುಖ

 ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಸೋಂಕು ಹೆಚ್ಚಳ

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಸೋಂಕು ಹೆಚ್ಚಳ

ಮಹಾರಾಷ್ಟ್ರ, ಕೇರಳದೊಂದಿಗೆ ಆಂಧ್ರ ಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದಲ್ಲಿಯೂ ಈಚೆಗೆ ದಿನನಿತ್ಯದ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದೆ. ಭಾನುವಾರ ಮಹಾರಾಷ್ಟ್ರದಲ್ಲಿ 8,535 ಪ್ರಕರಣಗಳು ದಾಖಲಾಗಿದೆ. ಕೇರಳದಲ್ಲಿ ಅತಿ ಹೆಚ್ಚು, ಅಂದರೆ 12,220 ಪ್ರಕರಣಗಲು ದಾಖಲಾಗಿದ್ದು, ಈ ರಾಜ್ಯಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

 ದಕ್ಷಿಣ ರಾಜ್ಯಗಳಲ್ಲಿ ಸೋಂಕು ಹರಡುವಿಕೆ

ದಕ್ಷಿಣ ರಾಜ್ಯಗಳಲ್ಲಿ ಸೋಂಕು ಹರಡುವಿಕೆ

ಇನ್ನಿತರೆ ದಕ್ಷಿಣ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿಯೂ ಕೊರೊನಾ ಪ್ರಕರಣಗಳು ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ಹೀಗಾಗಿ ಕೇಂದ್ರದ ಕಾರ್ಯಸೂಚಿಯನ್ನು ಪಾಲಿಸುವಂತೆ ರಾಜ್ಯಗಳಿಗೆ ಸೂಚಿಸಿದೆ. "ಟ್ರ್ಯಾಕ್-ಟ್ರೀಟ್- ವ್ಯಾಕ್ಸಿನೇಟ್" ಕಾರ್ಯಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದೆ.

ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ 79ರಷ್ಟು ಕಡಿಮೆ!ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ 79ರಷ್ಟು ಕಡಿಮೆ!

Recommended Video

ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿದ ಭಾರತ ತಂಡ ! | Oneindia Kannada
 ದೇಶದಲ್ಲಿ ಸೋಂಕಿನಿಂದ ಚೇತರಿಕೆ ಪ್ರಮಾಣವೂ ಏರಿಕೆ

ದೇಶದಲ್ಲಿ ಸೋಂಕಿನಿಂದ ಚೇತರಿಕೆ ಪ್ರಮಾಣವೂ ಏರಿಕೆ

ಭಾರತದಲ್ಲಿ ಸದ್ಯಕ್ಕೆ ಸೋಂಕಿನಿಂದ ಚೇತರಿಕೆ ಪ್ರಮಾಣ ಶೇ.97.22ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 37,154 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 39,649 ಸೋಂಕಿತರು ಗುಣಮುಖರಾಗಿದ್ದು, 724 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಒಟ್ಟು 3,08,74,376 ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 3,00,14,713 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 4,08,764 ಜನರು ಸಾವನ್ನಪ್ಪಿದ್ದಾರೆ. ಇದರ ಹೊರತಾಗಿ 4,50,899 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Central teams have been rushed to the states and Union territories (UTs) that are reporting a surge in Covid-19 cases, newly-appointed Union minister of state for health and family welfare Dr Bharati Pravin Pawar said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X