ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Just in: ಮಂಕಿಪಾಕ್ಸ್, ಬಂದರು, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

|
Google Oneindia Kannada News

ನವದೆಹಲಿ, ಜುಲೈ 19: ದೇಶದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಎಲ್ಲಾ ಬಂದರುಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕಟ್ಟುನಿಟ್ಟಾದ ಆರೋಗ್ಯ ತಪಾಸಣೆಯನ್ನು ನಡೆಸಲು ಕೇಂದ್ರ ಸರ್ಕಾರವು ಸೂಚಿಸಿದೆ.

ಕೇರಳದಲ್ಲಿ 2ನೇ ಮಂಕಿಪಾಕ್ಸ್ ಪ್ರಕರಣ ವರದಿಯಾದ ನಂತರ ಸರ್ಕಾರ ಈ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ಮತ್ತು ಬಂದರು ಆರೋಗ್ಯ ಅಧಿಕಾರಿಗಳು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಪ್ರಾದೇಶಿಕ ಕಚೇರಿಗಳ ನಿರ್ದೇಶಕರ ಜೊತೆಗೆ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

Breaking; ಮಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಮಂಕಿಪಾಕ್ಸ್, ಹೈ ಅಲರ್ಟ್‌ Breaking; ಮಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಮಂಕಿಪಾಕ್ಸ್, ಹೈ ಅಲರ್ಟ್‌

"ಹೊರಗಿನಿಂದ ದೇಶಕ್ಕೆ ಮಂಕಿಪಾಕ್ಸ್ ಬರುವ ಅಪಾಯವನ್ನು ಕಡಿಮೆ ಮಾಡುವ ಕಾರಣದಿಂದ ವಿದೇಶಗಳಿಂದ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ಕಟ್ಟುನಿಟ್ಟಾದ ಆರೋಗ್ಯ ತಪಾಸಣೆಯನ್ನು ನಡೆಸಲು ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ. ಆರೋಗ್ಯ ಇಲಾಖೆಯ ಮಂಕಿಪಾಕ್ಸ್ ನಿರ್ವಹಣೆಯ ಮಾರ್ಗಸೂಚಿಗಳ ಪ್ರಕಾರ ಅಧಿಕಾರಿಗಳಿಗೆ ಸಲಹೆ, ಸೂಚನೆ ನೀಡಲಾಗಿದೆ" ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

Centre asked ports and airports to ensure strict health screening of all international travellers

ಆರೋಗ್ಯ ತಪಾಸಣೆ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ಅಂತರಾಷ್ಟ್ರೀಯ ಬಂದರುಗಳು ಮತ್ತು ವಿಮಾನ ನಿಲ್ದಾಣಗಳಲ್ಲಿನ ಇತರ ಏಜೆನ್ಸಿಗಳ ಸಹಾಯ ಪಡೆಯಲು ತಿಳಿಸಲಾಗಿದೆ.

ಸೋಮವಾರ ಕೇರಳದ 31 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಂಡು ಬಂದಿದೆ. ಅವರಿಗೆ ಕಣ್ಣೂರಿನ ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಖಚಿತಪಡಿಸಿದೆ. ಕಳೆದ ವಾರ, ಯುಎಇಯಿಂದ ಕೇರಳಕ್ಕೆ ಮರಳಿದ್ದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿತ್ತು.

ಏಕಾಏಕಿ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಉಂಟಾಗಿದೆಯೇ? ಎಂದು ನಿರ್ಧರಿಸಲು ಜುಲೈ 21 ರಂದು ಮಂಕಿಪಾಕ್ಸ್ ಸಮಿತಿಯನ್ನು ಮರುಸಂಘಟಿಸುವುದಾಗಿ ವಿಶ್ವ ಆರೋಗ್ಯ ಸಂಸ್ಥೆ (WHO) ಜುಲೈ 14ರಂದು ಹೇಳಿದೆ. ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಇಲ್ಲಿಯವರೆಗೆ ಮಂಕಿಪಾಕ್ಸ್ ಬಾಧಿತವಾಗಿರುವ ಬಹುತೇಕ ಎಲ್ಲಾ ರೋಗಿಗಳು ಪುರುಷರು ಎಂದು WHO ಹೇಳಿದೆ.

ಮಂಕಿಪಾಕ್ಸ್‌ನ ಲಕ್ಷಣಗಳು

* ಮಂಕಿಪಾಕ್ಸ್‌ನ ಲಕ್ಷಣಗಳೆಂದರೆ ಅಧಿಕ ಜ್ವರ, ಊದಿಕೊಂಡ ದುಗ್ಧರಸ ಗ್ರಂಥಿಗಳು ಮತ್ತು ಚಿಕನ್‌ಪಾಕ್ಸ್‌ನಂತಹ ದದ್ದುಗಳನ್ನು ಒಳಗೊಂಡಿರುತ್ತವೆ.

* ಮೊದಲು 1958 ರಲ್ಲಿ ಈ ಕಾಯಿಲೆ ಮಂಗಗಳಲ್ಲಿ ಕಂಡುಬಂದಿತು, ಆದ್ದರಿಂದ ಈ ಹೆಸರು ಬಂದಿದೆ. ಇದು ಪ್ರಾಣಿಗಳಿಂದ ಮತ್ತು ಸಾಮಾನ್ಯವಾಗಿ ಮನುಷ್ಯರ ನಡುವೆ ನಿಕಟ ಸಂಪರ್ಕದ ಮೂಲಕ ಹರಡುತ್ತದೆ.

English summary
The Centre government tells ports and airports to ensure strict Health Screening of all International travellers to avoid spread of Monkeypox ,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X