ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿದ ಕೇಂದ್ರ ಸರ್ಕಾರ

By Mahesh
|
Google Oneindia Kannada News

ನವದೆಹಲಿ, ಅಕ್ಟೋಬರ್ 03: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ, ಸೆಪ್ಟೆಂಬರ್ 30ರಂದು ನೀಡಿದ ಆದೇಶವನ್ನು ಬದಲಾಯಿಸುವಂತೆ ಕೋರಿ ಸುಪ್ರೀಂಕೋರ್ಟೀಗೆ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿದೆ. ಈ ಮೂಲಕ ಕರ್ನಾಟಕಕ್ಕೆ ಶುಭ ಸುದ್ದಿ ಸಿಕ್ಕಿದೆ. ಕೇಂದ್ರ ಸಲ್ಲಿಸಿರುವ ಅರ್ಜಿ ವಿಚಾರಣೆ ಮಂಗಳವಾರ ವಿಚಾರಣೆಗೆ ಬರಲಿದೆ.

ಅಕ್ಟೋಬರ್ 04ರೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶಿಸಿತ್ತು. ಇದಕ್ಕೆ ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿ ಕೂಡಾ ಒಪ್ಪಿಗೆ ಸೂಚಿಸಿದ್ದರು.

Centre challenges constitution of Cauvery Management Board, says it is legislative function

ಆದರೆ, ಈಗ ಈ ಆದೇಶ ಪಾಲನೆ ಸಂಸತ್ತಿನ ಜವಾಬ್ದಾರಿ, ಮಂಡಳಿ ರಚನೆಗೆ ಸುಪ್ರೀಂಕೋರ್ಟ್ ಆದೇಶ ಮಾಡುವಂತಿಲ್ಲ. ಶಾಸಕಾಂಗದ ನೀತಿ ನಿಯಮಗಳನ್ನು ಪಾಲಿಸಬೇಕು ಎಂದು ಕಾರಣ ನೀಡಿ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
English summary
Centre moves Supreme Court to modify order that directed constituion of Cauvery Management Board. Says this is a legislative function and SC has no jurisdiction.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X