ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಧಿಕೃತವಾಗಿ ಜಾರಿ
ನವದೆಹಲಿ, ಜೂನ್ 2: ಕಾವೇರಿ ನೀರು ಹಂಚಿಕೆಯನ್ನು ಸುಸೂತ್ರವಾಗಿ ನಡೆಸುವ ಸಂಬಂಧ ರಚಿಸಲಾಗಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಭಾರತ ಸರ್ಕಾರದ ಗೆಜೆಟ್‌ನಲ್ಲಿ ಅಧಿಕೃತವಾಗಿ ಸೇರ್ಪಡೆ ಮಾಡಲಾಗಿದೆ.
ಮೂರು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಇದ್ದ ಗೊಂದಲವನ್ನು ನಿವಾರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಕರ್ನಾಟಕ ಚುನಾವಣೆ ಪೂರ್ಣಗೊಳ್ಳುವವರೆಗೂ ಈ ಕಾರ್ಯವನ್ನು ಮುಂದೂಡಿದ್ದ ಕೇಂದ್ರ ಸರ್ಕಾರ, ಈಗ ಪ್ರಾಧಿಕಾರವನ್ನು ಅಧಿಕೃತವಾಗಿ ಗೆಜೆಟ್‌ನಲ್ಲಿ ಸೇರ್ಪಡೆ ಮಾಡಿದೆ.

ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿರುವ ಕೇಂದ್ರ ಜಲಸಂಪನ್ಮೂಲ ಇಲಾಖೆ, ಅಧ್ಯಕ್ಷರು ಹಾಗೂ 8 ಸದಸ್ಯರ ಸಮಿತಿಯನ್ನು ರಚಿಸಿದೆ. ಎಂಟು ಸದಸ್ಯರ ಪೈಕಿ ನಾಲ್ವರು ಕಾಯಂ ಸದಸ್ಯರಾಗಿರುತ್ತಾರೆ. ಉಳಿದವರು ತಾತ್ಕಾಲಿಕ ಸದಸ್ಯತ್ವ ಪಡೆದುಕೊಂಡಿರುತ್ತಾರೆ.
ಈ ಸದಸ್ಯರು ಜಲವಿವಾದ ವ್ಯಾಪ್ತಿಯಲ್ಲಿರುವ ನಾಲ್ಕು ರಾಜ್ಯಗಳನ್ನು ಪ್ರತಿನಿಧಿಸಲಿದ್ದಾರೆ.
ಕಾವೇರಿ ನದಿ ತೀರದ ರಾಜ್ಯಗಳಿಗೆ ಇರುವ ನೀರಿನ ಅಗತ್ಯತೆ, ಅಣೆಕಟ್ಟುಗಳಲ್ಲಿನ ನೀರಿನ ಸಂಗ್ರಹದ ಪ್ರಮಾಣ ಮತ್ತು ರಾಜ್ಯಗಳ ಅವಶ್ಯಕತೆಗೆ ಅನುಗುಣವಾಗಿ ಆಯಾ ರಾಜ್ಯಗಳಿಗೆ ನೀರಿನ ಬಿಡುಗಡೆ ಮಾಡಿಸುವ ಕಾರ್ಯವನ್ನು ಈ ಪ್ರಾಧಿಕಾರ ನಿರ್ವಹಿಸಲಿದೆ.
ಕಾವೇರಿ ನ್ಯಾಯಾಧಿಕರಣ ಅಂತಿಮ ತೀರ್ಪನ್ನು ಸಮಿತಿ ಜಾರಿಗೆ ತರಲಿದೆ. ಕರ್ನಾಟಕ, ತಮಿಳುನಾಡು, ಕೇರಳ ಅಥವಾ ಪುದುಚೆರಿಗಳು ತನ್ನ ಕಾರ್ಯನಿರ್ವಹಣೆಗೆ ಅಗತ್ಯ ಸಹಕಾರ ನೀಡದೆಯೇ ಇದ್ದರೆ ಪ್ರಾಧಿಕಾರ ಕೇಂದ್ರ ಸರ್ಕಾರದ ಮೊರೆ ಹೋಗಬಹುದು.
ತನ್ನ ನಿರ್ದೇಶನದಂತೆ ನೀರು ಬಿಡುಗಡೆ ಮಾಡದೆ ಇದ್ದರೆ ಆ ರಾಜ್ಯದ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಪ್ರಾಧಿಕಾರಕ್ಕೆ ನೀಡಲಾಗಿದೆ. ಅಲ್ಲದೆ, ಕಾವೇರಿ ನದಿ ಪಾತ್ರದಲ್ಲಿರುವ ಅಣೆಕಟ್ಟುಗಳ ಮೇಲ್ವಿಚಾರಣೆಯನ್ನು ಸಮಿತಿ ನಿರ್ವಹಿಸಲಿದೆ.
ಬಿಡುಗಡೆಯಾದ ನೀರಿನ ಪ್ರಮಾಣ, ಬಿಡುಗಡೆಯಾದ ಬಳಿಕ ಶೇಖರಣೆಯಾದ ನೀರಿನ ಪ್ರಮಾಣವನ್ನು ಈ ಪ್ರಾಧಿಕಾರ ಮಾಪನ ಮಾಡಲಿದೆ.
ಮಂಡಳಿ ರಚನೆ ಕುರಿತು ಗೆಜೆಟ್‌ನಲ್ಲಿ ಪ್ರಕಟಿಸುವಂತೆ ಗೆಜೆಟ್ ಮುದ್ರಣ ವಿಭಾಗದ ಹಿರಿಯ ಜಂಟಿ ಆಯುಕ್ತ ಆರ್.ಕೆ. ಕನೋಡಿಯಾ ಅವರು ಭಾರತ ಸರ್ಕಾರಿ ಮುದ್ರಣದ ವ್ಯವಸ್ಥಾಪಕರಿಗೆ ಶುಕ್ರವಾರ ನಿರ್ದೇಶನ ನೀಡಿದರು. ಅದರಂತೆ ಗೆಜೆಟ್ ಮುದ್ರಣವಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications