ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ವಿಚಾರದಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಿದ ಕೇಂದ್ರ

|
Google Oneindia Kannada News

ನವದೆಹಲಿ, ಜೂನ್ 10: ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಫ್ರಂಟ್‌ಲೈನ್‌ ವರ್ಕರ್ಸ್‌ಗೆ ಲಸಿಕೆಯ ಎರಡನೇ ಡೋಸ್ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಗಂಭೀರ ಕಳವಳವನ್ನು ವ್ಯಕ್ತಪಡಿಸಿದೆ. ಗುರುವಾರ ಈ ವಿಚಾರವಾಗಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆಯನ್ನು ನೀಡಿದ್ದು ಈ ಆದ್ಯತೆಯ ಗುಂಪುಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲು ತ್ವರಿತಗತಿಯಲ್ಲಿ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದೆ.

ಲಸಿಕೆ ಕಾರ್ಯಕ್ರಮದ ಪ್ರಗತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಕೇಂದ್ರ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಅಧ್ಯಕ್ಷತೆ ರಾಜ್ಯಗಳೊಂದಿಗೆ ಉನ್ನತಮಟ್ಟದ ಸಭೆಯನ್ನು ನಡೆಸಲಾಯಿತು. ಇದರಲ್ಲಿ ರಾಷ್ಟ್ರಮಟ್ಟದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಶೇಕಡಾ 82ರಷ್ಟು ಪೂರೈಸಲಾಗಿದೆ. ಆದರೆ ಎರಡನೇ ಡೋಸ್ ನೀಡಿರುವ ಪ್ರಮಾಣ ಕೇವಲ 56 ಶೇಕಡಾ ಮಾತ್ರ ಎಂದು ಆರೋಗ್ಯ ಸಚಿವಾಲಯ ನೀಡಿರುವ ಅಂಕಿಅಂಶಗಳನ್ನು ಉಲ್ಲೇಖಿಸಲಾಗಿದೆ. ಪಂಜಾಬ್, ಮಹಾರಾಷ್ಟ್ರ, ಹರಿಯಾಣ, ತಮಿಳುನಾಡು, ದೆಹಲಿ ಮತ್ತು ಅಸ್ಸಾಂ ಸೇರಿದಂತೆ 18 ರಾಜ್ಯಗಳಲ್ಲಿ ಇದು ರಾಷ್ಟ್ರೀಯ ಸರಾಸರಿಗಿಂತಲೂ ಕಡಿಮೆ ಪ್ರಮಾಣದಲ್ಲಿದೆ.

ಕೇಂದ್ರ ಸರ್ಕಾರಿ ನೌಕರರಿಗೆ 15 ದಿನಗಳ ಕೊರೊನಾ ಸಾಂಕ್ರಾಮಿಕ ರಜೆ ಘೋಷಣೆ
ಫ್ರಂಟ್‌ಲೈನ್ ವರ್ಕರ್ಸ್‌ಗೆ ರಾಷ್ಟ್ರಮಟ್ಟದಲ್ಲಿ ಮೊದಲ ಡೋಸ್ ನೀಡಿರುವ ಪ್ರಮಾಣ ಶೇಕಡಾ 85 ಆಗಿದ್ದು ಎರಡನೇ ಡೋಸ್ ಕೇವಲ 47 ಶೇಕಡಾ ಮಾತ್ರವೇ ಇದೆ ಎಂದು ತಿಳಿಸಲಾಗಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 19 ರಾಜ್ಯಗಳು ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಪ್ರಮಾಣವನ್ನು ಹೊಂದಿದೆ.

Centre expresses Serious concern on low vaccination coverage for 2nd dose healthcare workers

ಕೊರೊನಾವೈರಸ್‌ನ ವಿರುದ್ಧದ ಈ ಹೋರಾಟದಲ್ಲಿ ನಿರ್ಣಾಯಕ ಪಾತ್ರವನ್ನು ನಿರ್ವಹಿಸುವ ಈ ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್‌ ವರ್ಕರ್‌ಗಳಿಗೆ ಸಂಪೂರ್ಣ ರಕ್ಷಣೆ ನೀಡುವುದು ಅತ್ಯಂತ ಅಗತ್ಯವಾಗಿದೆ. ಹೀಗಾಗಿ ಇವರಿಗೆ ಲಸಿಕೆಯನ್ನು ಪೂರ್ಣಗೊಳಿಸಲು ಪೂರಕವಾಗುವಂತೆ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ತ್ವರಿತ ಕ್ರಮಗಳನ್ನು ಕೈಗೊಳ್ಳಲು ಪರಿಣಾಮಕಾರಿ ಯೋಜನೆಗಳನ್ನು ಸಿದ್ಧಪಡಿಸಬೇಕು ಎಂದು ಸಲಹೆ ನೀಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನು ಇದೇ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವರ್ಕರ್ಸ್‌ಗೆ ಲಸಿಕೆ ನೀಡುವ ಸಲುವಾಗಿ ವಿಶೇಷ ಸಮಯವನ್ನು ನಿಗದಿಪಡಿಸುವಂತೆ ಕೇಂದ್ರ ಆರೋಗ್ಯ ಕೇಂದ್ರ ಕಾರ್ಯದರ್ಶಿ ರಾಜೇಶ್ ಭೂಷಣ್ ಸಲಹೆಯನ್ನು ನೀಡಿದ್ದಾರೆ.

English summary
Low vaccination coverage for second-dose healthcare workers is a major source of worry, according to the centre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X