ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರದಿಂದ ಶಾಲಾ ಶಿಕ್ಷಕರು, ಸಿಬ್ಬಂದಿಗಾಗಿ 2 ಕೋಟಿ ಡೋಸ್ ಕೊವಿಡ್ ಲಸಿಕೆ!

|
Google Oneindia Kannada News

ನವದೆಹಲಿ, ಆಗಸ್ಟ್ 25: ಭಾರತದಲ್ಲಿ ಶಿಕ್ಷಕರ ದಿನಾಚರಣೆ ಹೊತ್ತಿಗೆ ಬಹುಪಾಲು ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವುದಕ್ಕೆ ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೊವಿಡ್-19 ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಪ್ಟೆಂಬರ್ 5ರೊಳಗೆ ಎಲ್ಲ ಶಿಕ್ಷಕ ಮತ್ತು ಶಾಲಾ ಸಿಬ್ಬಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು. ಅಲ್ಲದೇ ಆಗಸ್ಟ್ 27 ರಿಂದ 31ರ ಅವಧಿಯಲ್ಲಿ ಹೆಚ್ಚುವರಿಯಾಗಿ ಎರಡು ಕೋಟಿ ಡೋಸ್ ಕೊರೊನಾವೈರಸ್ ಲಸಿಕೆಯನ್ನು ಕೇಂದ್ರ ಸರ್ಕಾರದಿಂದ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಶಿಕ್ಷಕರ ದಿನಾಚರಣೆಯೊಳಗೆ ಎಲ್ಲಾ ಶಿಕ್ಷಕರಿಗೆ ಲಸಿಕೆ ನೀಡಿ; ಆರೋಗ್ಯ ಸಚಿವಶಿಕ್ಷಕರ ದಿನಾಚರಣೆಯೊಳಗೆ ಎಲ್ಲಾ ಶಿಕ್ಷಕರಿಗೆ ಲಸಿಕೆ ನೀಡಿ; ಆರೋಗ್ಯ ಸಚಿವ

ಅಕ್ಟೋಬರ್ ತಿಂಗಳಿನಿಂದ 12 ರಿಂದ 17 ವರ್ಷದೊಳಗಿನ ಮಕ್ಕಳಿಗೂ ಕೊರೊನಾವೈರಸ್ ಲಸಿಕೆಯನ್ನು ವಿತರಣೆ ಮಾಡುವಂತೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ. ಈಗಾಗಲೇ ಬಹುಪಾಲು ರಾಜ್ಯಗಳಲ್ಲಿ 9 ರಿಂದ 12ನೇ ತರಗತಿ ಶಾಲೆಗಳನ್ನು ಪುನಾರಂಭಿಸಲಾಗಿದೆ. ಗುಜರಾತಿನಲ್ಲಿ 6ನೇ ತರಗತಿಗಳನ್ನೂ ಸಹ ಮುಂದಿನ ತಿಂಗಳ ವೇಳೆಗೆ ಪುನಾರಂಭಿಸಲು ರಾಜ್ಯ ಸರ್ಕಾರ ಯೋಜನೆ ಹಾಕಿಕೊಳ್ಳುತ್ತಿದೆ. ಈ ಮಧ್ಯದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೊವಿಡ್-19 ಲಸಿಕೆಯು ಅತ್ಯವಶ್ಯವಾಗಿದೆ. ಇದನ್ನು ಅರಿತುಕೊಂಡಿರುವ ಕೇಂದ್ರ ಸರ್ಕಾರ ಹೆಚ್ಚುವರಿ ಲಸಿಕೆಯನ್ನು ನೀಡುವುದಾಗಿ ಘೋಷಿಸಿದೆ.

12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾವೈರಸ್ ಲಸಿಕೆ

12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾವೈರಸ್ ಲಸಿಕೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯು ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂದು ಸೂಕ್ಷ್ಮಾಣು ರೋಗಶಾಸ್ತ್ರಜ್ಞರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಜೈಡಸ್ ಕ್ಯಾಡಿಲಾ ಕಂಪನಿ ಉತ್ಪಾದಿಸಿರುವ ಜೈಕೊವ್-ಡಿ ಲಸಿಕೆಯನ್ನು 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡುವುದಕ್ಕೆ ಅನುಮೋದನೆ ನೀಡಲಾಗಿದೆ. ಅಕ್ಟೋಬರ್ ತಿಂಗಳ ಹೊತ್ತಿಗೆ ಈ ಕೊವಿಡ್-19 ಲಸಿಕೆ ಲಭ್ಯವಾಗಲಿದೆ. ಡಿಎನ್ಎ ಆಧಾರಿತ ಜೈಡಸ್ ಕ್ಯಾಡಿಲಾ ಸಂಸ್ಥೆ ಉತ್ಪಾದಿಸುವ ಲಸಿಕೆಯನ್ನು ಮಕ್ಕಳು ಸೇರಿದಂತೆ ವಯಸ್ಕರಿಗೂ ನೀಡಲು ಅನುಮತಿ ನೀಡಲಾಗಿದೆ.

ದೇಶದಲ್ಲಿ ಒಂದೇ ದಿನ 66 ಲಕ್ಷ ಮಂದಿಗೆ ಕೊವಿಡ್-19 ಲಸಿಕೆ

ದೇಶದಲ್ಲಿ ಒಂದೇ ದಿನ 66 ಲಕ್ಷ ಮಂದಿಗೆ ಕೊವಿಡ್-19 ಲಸಿಕೆ

ಭಾರತದಲ್ಲಿ ಒಂದೇ ದಿನ 66 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೆ 58,07,64,210 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 222 ದಿನಗಳಾಗಿದ್ದು, ಬುಧವಾರ ರಾತ್ರಿ 7 ಗಂಟೆ ವೇಳೆಗೆ 66,22,337 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈವರೆಗೂ 60,24,25,271 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಒಂದೇ ದಿನ 46,72,355 ಫಲಾನುಭವಿಗಳಿಗೆ ಮೊದಲ ಡೋಸ್, 19,49,982 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಲಸಿಕೆ ಪಡೆದವರ ಅಂಕಿ-ಅಂಶಗಳು

ಕೊವಿಡ್-19 ಲಸಿಕೆ ಪಡೆದವರ ಅಂಕಿ-ಅಂಶಗಳು

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,55,095 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 82,70,913 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,11,679 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,27,74,285 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 46,57,04,647 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 13,67,20,624 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?

2021ರ ಆಗಸ್ಟ್ 25ರ ಅಂಕಿ-ಅಂಶಗಳ ಪ್ರಕಾರ, 58,07,64,210 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 58,07,64,210

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 51,48,970

* ಕೊವಿಡ್-19 ಲಸಿಕೆಯ ಲಭ್ಯತೆ - 3,62,24,601

English summary
Centre Govt allots 2 crore Covid-19 vaccine doses for teachers And School Staff.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X