ಕೊಲೆಗಡುಕ ಪೂಜಾರಿಯಾದ ಕೇಂದ್ರ ಸರ್ಕಾರ: ಕಾಂಗ್ರೆಸ್ ಟೀಕೆ
ನವದೆಹಲಿ, ಜುಲೈ 8: ಮಾಂಸ ವ್ಯಾಪಾರಿಯೊಬ್ಬನ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಎಂಟು ಮಂದಿಗೆ ಹೂವಿನ ಹಾರ ಹಾಕಿ ಅಭಿನಂದಿಸಿದ್ದ ಕೇಂದ್ರ ಸಚಿವ ಜಯಂತ್ ಸಿನ್ಹಾ ಅವರನ್ನು ಟೀಕಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರವು ಕೊಲೆಗಡುಕರನ್ನು ಆರಾಧಿಸುವ ಪೂಜಾರಿಯಾಗಿ ಬದಲಾಗಿದೆ ಎಂದು ಹೇಳಿದೆ.
ಎಂಟು ಆರೋಪಿಗಳಿಗೆ ಜಾಮೀನು ಸಿಕ್ಕಾಗ ಅವರನ್ನು ಜಯಂತ್ ಸಿನ್ಹಾ ಅವರು ಹೂವಿನ ಹಾರ ಹಾಕಿ ಅಭಿನಂದಿಸಿದ್ದರು. ನೀವು ತಪ್ಪಾಗಿ ತಿಳಿದಿದ್ದೀರಿ ಮೋದಿಜಿ. ನಿಮ್ಮ ಸರ್ಕಾರ ಕೊಲೆಗಡುಕ-ಪೂಜಾರಿಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ನ ಅನೇಕ ಪ್ರಮುಖ ಮುಖಂಡರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಶನಿವಾರ ಭಾಷಣವೊಂದರಲ್ಲಿ ಪ್ರಸ್ತಾಪಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ಒಂದು 'ಬೇಲ್ ಗಾಡಿ' ಎಂದು ಲೇವಡಿ ಮಾಡಿದ್ದರು.
8 accused convicted for lynching are garlanded by Jayant Sinha when granted bail .
— Kapil Sibal (@KapilSibal) 8 July 2018
You got it wrong Modiji .
They say your Government has become :
Lynch-Pujari
ಅದಕ್ಕೆ ಪ್ರತಿಯಾಗಿ ಕಪಿಲ್ ಸಿಬಲ್ ಅವರು ಈ ಟ್ವೀಟ್ ಮಾಡಿದ್ದಾರೆ.
ಜಾರ್ಖಂಡ್ನಲ್ಲಿ ಕಳೆದ ವರ್ಷ ನಡೆದ ಮಾಂಸ ವ್ಯಾಪಾರಿಯೊಬ್ಬನ ಹತ್ಯೆ ಪ್ರಕರಣದಲ್ಲಿ ರಾಮಗಡದ ನ್ಯಾಯಾಲಯವೊಂದು 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಅದರಲ್ಲಿ ಜಾಮೀನು ಪಡೆದಿದ್ದ ಎಂಟು ಮಂದಿಗೆ ಜಯಂತ್ ಸಿನ್ಹಾ ಅವರು ಅಭಿನಂದಿಸಿದ್ದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮಗನ ಈ ನಡವಳಿಕೆಗೆ ಜಯಂತ್ ಅವರ ತಂದೆ ಯಶ್ವಂತ್ ಸಿನ್ಹಾ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿಂದೆ ನಾನು 'ಲಾಯಕ್ ಮಗ'ನ 'ನಾಲಾಯಕ್ ಅಪ್ಪ'ನಾಗಿದ್ದೆ. ಆದರೆ ಈಗ ಪಾತ್ರಗಳು ಬದಲಾಗಿವೆ. ನನ್ನ ಮಗನ ನಡವಳಿಕೆಯನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದ್ದರು.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications