ಆಧಾರ್ ಸಂಖ್ಯೆ ಮತ್ತು ಡ್ರೈವಿಂಗ್ ಲೈಸೆನ್ಸ್ ಜೋಡಣೆಗೆ ಕೇಂದ್ರದ ಚಿಂತನೆ
ನವದೆಹಲಿ, ಜೂನ್ 12: ವಾಹನ ಚಾಲನಾ ಪರವಾನಗಿ ಮತ್ತು ಆಧಾರ್ ಕಾರ್ಡ್ ನಡುವೆ ಜೋಡಣೆ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಬ್ಯಾಂಕ್ ಖಾತೆ, ಮೊಬೈಲ್ ನಂಬರ್, ಪಾನ್ ಕಾರ್ಡ್ ಮುಂತಾದವುಗಳಿಗೆ ಆಧಾರ್ ಲಿಂಕ್ ಕಡ್ಡಾಯಗೊಳಿಸುತ್ತಿರುವ ಕ್ರಮದ ಬಗ್ಗೆ ಚರ್ಚೆಗಳು ತೀವ್ರವಾಗುತ್ತಿರುವ ವೇಳೆಯಲ್ಲಿಯೇ ಮತ್ತೊಂದು ಕ್ರಮಕ್ಕೆ ಕೇಂದ್ರ ಮುಂದಾಗಿದೆ.
ವಾಹನ ಚಾಲನಾ ಪರವಾನಗಿಯೊಂದಿಗೆ ಆಧಾರ್ ಸಂಖ್ಯೆಯನ್ನು ಸಂಪರ್ಕಿಸುವ ಸಂಬಂಧ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ವಾಹನ ಪರವಾನಗಿ ಸಂಖ್ಯೆಯೊಂದಿಗೆ ಆಧಾರ್ ಕಾರ್ಡ್ ಸಂಖ್ಯೆ ಸಂಪರ್ಕಿಸುವುದರಿಂದ ವಾಹನ ಅಪಘಾತ ಪ್ರಕರಣಗಳನ್ನು ನಿರ್ವಹಿಸಲು ನೆರವಾಗಲಿದೆ ಎಂದು ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
I am in conversation with Union Minister Nitin Gadkari to link Aadhaar card with License, so that if a drunk driver escapes from one state to another by killing people, he would be caught. A person can change name not not his/her finger prints: Union Minister Ravi Shankar Prasad pic.twitter.com/uwD7g3G7e4
— ANI (@ANI) 12 June 2018
ಒಂದು ರಾಜ್ಯದಲ್ಲಿ ಕುಡಿದು ವಾಹನ ಅಪಘಾತ ಮಾಡಿ ಜನರನ್ನು ಕೊಂದ ವ್ಯಕ್ತಿಯು ಇನ್ನೊಂದು ರಾಜ್ಯಕ್ಕೆ ಪರಾರಿಯಾದ ನಿದರ್ಶನಗಳು ಸಾಕಷ್ಟಿವೆ. ಇಂತಹ ಪ್ರಕರಣಗಳಲ್ಲಿ ಆಧಾರ್ ಮತ್ತು ಲೈಸೆನ್ಸ್ ನಡುವಣ ಸಂಪರ್ಕ ಆರೋಪಿಯನ್ನು ಬಂಧಿಸಲು ನೆರವಾಗುತ್ತದೆ.
ಒಬ್ಬ ವ್ಯಕ್ತಿಯು ತನ್ನ ಹೆಸರನ್ನು ಬದಲಿಸಿಕೊಳ್ಳಬಹುದು. ಆದರೆ ಆತ/ಆಕೆ ತನ್ನ ಬೆರಳಚ್ಚನ್ನು ಬದಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಸಾದ್ ಹೇಳಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications