ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆನ್‌ಲೈನ್‌ನಲ್ಲೇ ದಿವ್ಯಾಂಗ ಪ್ರಮಾಣಪತ್ರ ವಿತರಣೆ ಕಡ್ಡಾಯಗೊಳಿಸಿದ ಕೇಂದ್ರ

|
Google Oneindia Kannada News

ನವದೆಹಲಿ, ಮೇ 06: ದಿವ್ಯಾಂಗರಿಗೆ ಆನ್‌ಲೈನ್ ಮೂಲಕವೇ ಪ್ರಮಾಣಪತ್ರ ವಿತರಣೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಸೋಮವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಇದು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ಅನ್ವಯವಾಗುತ್ತದೆ, ಯುಡಿಐಡಿ ಪೋರ್ಟಲ್ ಮೂಲಕ ಕೇವಲ ಆನ್‌ಲೈನ್ ಮೂಲಕ ದಿವ್ಯಾಂಗರು ಪ್ರಮಾಣಪತ್ರ ಪಡೆಯಬಹುದು. ಹೀಗಾಗಿ ನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ.

ಬೀದರ್: ರಾಜ್ಯಾದ್ಯಂತ ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಪಾಲನೆ ಬೀದರ್: ರಾಜ್ಯಾದ್ಯಂತ ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಪಾಲನೆ

ಕೊರೊನಾ ಸೋಂಕು ಹೆಚ್ಚಿರುವ ಕಾರಣ ಸಾಕಷ್ಟು ನಿರ್ಬಂಧಗಳಿವೆ, ನಿರ್ಬಂಧಗಳನ್ನು ತೆರವುಗೊಳಿಸಿದರೂ ಕೂಡ ಈ ಸಂದರ್ಭದಲ್ಲಿ ಅವರಿಗೆ ಸರ್ಕಾರಿ ಕಚೇರಿಗಳಿಗೆ ಅಲೆದು ಪ್ರಮಾಣಪತ್ರ ಪಡೆಯುವುದು ಕಷ್ಟವಾಗಲಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ಕ್ರಮವನ್ನು ಕೈಗೊಂಡಿದೆ.

Centre Makes It Mandatory For Disability Certificates To Be Issued Online

ಆನ್‌ಲೈನ್ ಮೂಲಕ ಬಹುಬೇಗ ಪ್ರಮಾಣಪತ್ರ ಪಡೆದ ದಿವ್ಯಾಂಗರು ಸರ್ಕಾರದ ಎಲ್ಲಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.ಜೂನ್ 1 ರಿಂದ ಯುಡಿಐಡಿ ಪೋರ್ಟಲ್ ಕಾರ್ಯ ನಿರ್ವಹಿಸಲಿದೆ ಅಂದಿನಿಂದಲೇ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ಎಲ್ಲಾ ರಾಜ್ಯದ ಜನರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

English summary
In a relief for people with disabilities, the Central government has now made it mandatory for disability certificates to be issued online. The Ministry of Social justice and empowerment has issued a gazette notification for this monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X